BIG BOSS
ಫಿನಾಲೆಗೆ ಡೇಟ್ ಫಿಕ್ಸ್; ಈ ಸಲ ಬಿಗ್ ಬಾಸ್ ಗೆಲ್ಲುವವರು ಯಾರು ?
Published
2 hours agoon
By
NEWS DESK3ಮಂಗಳೂರು/ಬೆಂಗಳೂರು : ‘ಬಿಗ್ ಬಾಸ್ ಕನ್ನಡ ಸೀಸನ್ 11’ ಇನ್ನೇನು ಕೆಲವೇ ದಿನಗಳಲ್ಲಿ ಮುಕ್ತಾಯಗೊಳ್ಳಲಿದೆ. ಇದೇ ವೇಳೆ ಯಾರು ಫಿನಾಲೆ ತಲುಪಬಹುದು ಎನ್ನುವ ಲೆಕ್ಕಾಚಾರ ಸೋಷಿಯಲ್ ಮಿಡಿಯಾದಲ್ಲಿ ಶುರುವಾಗಿದೆ.
ಕನ್ನಡ ಬಿಗ್ ಬಾಸ್ 11ರ ಆರಂಭದಿಂದಲೇ ಹೊಸ ಹೊಸ ಮಾದರಿಯನ್ನು ವಿಕ್ಷಕರಿಗೆ ಪರಿಚಯಿಸಿದ್ದು, ಫಿನಾಲೆ ಕೂಡ ಹೊಸತನಕ್ಕೆ ನಾಂದಿ ಆಡಲಿದೆ.
ಮೂಲಗಳ ಪ್ರಕಾರ ಬಿಗ್ ಬಾಸ್ ಸೀಸನ್ 11 ಫಿನಾಲೆಗೆ ಭರ್ಜರಿ ಪ್ಲಾನ್ ಮಾಡಲಾಗಿದೆ. ಜನವರಿ 25 ಹಾಗೂ 26ರಂದು ಬಿಗ್ ಬಾಸ್ ಸೀಸನ್ 11ರ ಗ್ರ್ಯಾಂಡ್ ಫಿನಾಲೆ ನಡೆಯುತ್ತಿದೆ.
ಜನವರಿ 25ರ ಶನಿವಾರ ಎಲಿಮಿನೇಷನ್ ಪ್ರಕ್ರಿಯೆಯಲ್ಲಿ ಹೊಸ ಟ್ವಿಸ್ಟ್ ಕೊಟ್ರೆ, ಜನವರಿ 26ರ ಬಿಗ್ ಬಾಸ್ ಸೀಸನ್ ಕಪ್ ಎತ್ತುವವರು ಯಾರು ಅನ್ನೋದು ಗೊತ್ತಾಗಲಿದೆ.
ಸದ್ಯ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ ಬಿಗ್ ಬಾಸ್ ಟಾಪ್ 5 ಸ್ಪರ್ಧಿಗಳಲ್ಲಿ ತ್ರಿವಿಕ್ರಮ್, ಧನರಾಜ್, ಹನುಮಂತ, ಮಂಜು, ಭವ್ಯ ಇರುವುದು ಪಕ್ಕಾ ಎಂದು ಹೇಳಲಾಗುತ್ತಿದೆ. ಇದರಿಂದ ಈ ವಾರದ ಮಿಡ್ ವೀಕ್ ಎಲಿಮಿನೇಷನ್ ನಲ್ಲಿ ಮೋಕ್ಷಿತಾ, ಗೌತಮಿ ಇಲ್ಲವಾದರೇ ರಜತ್ ಹೊರಹೋಗಬಹುದು ಎನ್ನಲಾಗಿದೆ.
ಇದನ್ನೂ ಓದಿ: ಧನರಾಜ್ ಗೆ ಒಲಿದ ಅದೃಷ್ಟ; ಭವ್ಯಾಗೆ ಆಘಾತ !
ಅಂತಿಮವಾಗಿ ಈ ಶನಿವಾರ ಕಿಚ್ಚ ಸುದೀಪ್ ಅವರು ಕೊನೇ ವಾರದ ಪಂಚಾಯ್ತಿಯಲ್ಲಿ ಒಬ್ಬರಿಗೆ ಬಿಗ್ ಶಾಕ್ ಕೊಡಲಿದ್ದಾರೆ. ಉಳಿದ 6 ಸ್ಪರ್ಧಿಗಳಲ್ಲಿ ಬಿಗ್ ಬಾಸ್ ಫಿನಾಲೆ ಟಿಕೆಟ್ ಗಾಗಿ ಟಾಸ್ಕ್ ನಡೆಯಲಿದೆ. ಇದರಲ್ಲಿ ಒಬ್ಬರು ಎಲಿಮಿನೇಟ್ ಆಗುತ್ತಾರೆ. ಅಂತಿಮವಾಗಿ ಟಾಪ್ 5 ಸ್ಪರ್ಧಿಗಳು ಫಿನಾಲೆ ತಲುಪಲಿದ್ದಾರೆ.
ಬಿಗ್ ಬಾಸ್ ವಿನ್ನರ್ ಯಾರು?
‘ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿನ್ನರ್ ಯಾರೆಂದು ಈಗಗಾಲೇ, ಬಿಗ್ ಬಾಸ್ ವೀಕ್ಷಕರಲ್ಲಿ ಕುತೂಹಲ ಕೆರಳಿಸಿದೆ. ಕಳೆದ ವಾರ ಬಿಗ್ ಬಾಸ್ ನೀಡಿದ ಟಿಕೆಟ್ ಟು ಫಿನಾಲೆ ಟಾಸ್ಕ್ ನಲ್ಲಿ ಹನುಮಂತ ಭರ್ಜರಿಯಾಗಿ ಆಟವಾಡಿ ಮೊದಲ ಫೈನಲಿಸ್ಟ್ ಆದರು. ಆ ಪ್ರಕಾರ ಸೋಷಿಯಲ್ ಮೀಡಿಯಾದಲ್ಲಿ ಈ ಬಾರಿ ಬಿಗ್ ಬಾಸ್ ವಿನ್ನರ್ ಹನುಮಂತ ಎಂದು ಚರ್ಚೆಯಾಗುತ್ತಿದೆ..
ಆದರೆ, ವೈಲ್ಡ್ ಕಾರ್ಡ್ ಎಂಟ್ರಿ ಆದವರು ವಿನ್ನರ್ ಆಗುವುದಿಲ್ಲ ಎನ್ನುವುದು ಇನ್ನೂ ಕೆಲವರ ವಾದ. ಅಂತಿಮವಾಗಿ ಫೈನಲ್ ನಲ್ಲಿ ಯಾರು ಕಪ್ ಗೆಲ್ಲುತ್ತಾರೆ ಎಂದು ಕಾದು ನೋಡಬೇಕಿದೆ.
ಮಂಗಳೂರು : ಸಾಕಷ್ಟು ಟ್ವಿಸ್ಟ್ ಗಳನ್ನು ಕಂಡ ‘ಬಿಗ್ ಬಾಸ್ ಕನ್ನಡ ಸೀಸನ್ 11’ ರಿಯಾಲಿಟಿ ಶೋ ಈಗ ಫಿನಾಲೆಯ ಹಂತಕ್ಕೆ ತಲುಪುತ್ತಿದೆ. ಇದೇ ಹೊತ್ತಲ್ಲಿ ಬಿಗ್ ಬಾಸ್ ಮನೆಯಿಂದ ಆಚೆ ಹೋಗಲು 7 ಮಂದಿ ನಾಮಿನೇಟ್ ಆಗಿದ್ದರು. ಹೀಗಾಗಿ 7 ಸ್ಪರ್ಧಿಗಳ ಎದೆಯಲ್ಲಿ ನಡುಕ ಶುರುವಾಗಿತ್ತು.
ಈ ವಾರದ ನಾಮಿನೇಷನ್ ನಿಂದ ಪಾರಾಗಲು ಬಿಗ್ ಬಾಸ್ ಕಾಲ ಕಾಲಕ್ಕೆ ಟಾಸ್ಕ್ ನೀಡುತ್ತಿದ್ದರು. ಬಿಗ್ ಬಾಸ್ ಕೊಟ್ಟ ಟಾಸ್ಕ್ ನಲ್ಲಿ ಯಾರು ಗೆಲ್ಲುತ್ತಾರೋ ಅವರು ಈ ವಾರದ ನಾಮಿನೇಷನ್ ಪ್ರಕ್ರಿಯೆಯಿಂದ ಪಾರಾಗಲಿದ್ದಾರೆ ಎಂದು ಘೋಷಿಸಿದ್ದರು.
ಈ ವಾರ ಮಿಡ್ ವೀಕ್ ಎಲಿಮಿನೇಷನ್ ನಡೆಯಲಿದೆ. ಹೀಗಾಗಿ ಸ್ಪರ್ಧಿಗಳು ಬಿಗ್ ಬಾಸ್ ಕೊಡುವ ಟಾಸ್ಕ್ ಗಳನ್ನು ಕಷ್ಟಪಟ್ಟು ಆಡುತ್ತಿದ್ದಾರೆ. ನಿನ್ನೆಯ ಸಂಚಿಕೆಯಲ್ಲಿ ಧನರಾಜ್ ಬಿಗ್ ಬಾಸ್ ಕೊಟ್ಟ ಟಾಸ್ಕ್ ವೊಂದರಲ್ಲಿ ವಿನ್ ಆಗಿದ್ದಾರೆ.
ಇದನ್ನೂ ಓದಿ: ಚಾಲೆಂಜಿಂಗ್ ಸ್ಟಾರ್ ನ್ಯೂ ಪೋಸ್ಟ್; ದರ್ಶನ್ ಅಭಿಮಾನಿಗಳಿಗೆ ದಿಲ್‌ಖುಷ್
ಕೊನೆಯ ಟಾಸ್ಕ್ ನಲ್ಲೂ ಗೆದ್ದುಕೊಂಡ ಧನರಾಜ್ ಬಿಗ್ ಬಾಸ್ 100 ಅಂಕಗಳನ್ನು ಕೊಟಿದ್ದರು. ಅದರಲ್ಲೂ ಕೊನೆಗೆ ಧನರಾಜ್ ಪ್ರತಿ ಸ್ಪರ್ಧಿಯ ಅಂಕವನ್ನು ಪಡೆದುಕೊಳ್ಳಬೇಕು ಅಂತ ಹೇಳಿದ್ದರು. ಆಗ ಧನರಾಜ್ ಭವ್ಯಾ ಗೌಡ ಅವರ ಅಂಕವನ್ನು ಪಡೆದುಕೊಂಡಿದ್ದರು. ಇದಾದ ಬೆನ್ನಲ್ಲೇ ಬಿಗ್ ಬಾಸ್ ಈ ವಾರದ ಮಿಡ್ ವೀಕ್ ಎಲಿಮಿನೇಷನ್ ನಿಂದ ಧನರಾಜ್ ಸೇಫ್ ಆಗಿದ್ದೀರಿ ಎಂದು ಘೋಷಣೆ ಮಾಡಿದ್ದಾರೆ.
ಮಿಡ್ ವೀಕ್ ನಾಮಿನೇಷನ್ ಸೀಟ್ನಲ್ಲಿ ಭವ್ಯಾ ಗೌಡ, ತ್ರಿವಿಕ್ರಮ್, ಮಂಜಣ್ಣ, ರಜತ್, ಮೋಕ್ಷಿತಾ ಹಾಗೂ ಗೌತಮಿ ಇದ್ದಾರೆ. ಸ್ಟ್ರಾಂಗ್ 6 ಸ್ಪರ್ಧಿಗಳು ಯಾರು ಬಿಗ್ಬಾಸ್ ಮನೆಯಿಂದ ಮಿಡ್ ವೀಕ್ ಎಲಿಮಿನೇಟ್ ಆಗಲಿದ್ದಾರೆ ಎಂದು ಕಾದು ನೋಡಬೇಕಿದೆ.
ಒಂದು ಕಡೆ ಟಾಸ್ಕ್ ಪಾಯಿಂಟ್ ಟೇಬಲ್ ನಲ್ಲಿ ಟಾಪ್ ನಲ್ಲಿದ್ದ ಭವ್ಯಾಗೆ, ಧನರಾಜ್ ಅವರ ನಿರ್ಧಾರ ಶಾಕ್ ಆಗಿತ್ತು.
BIG BOSS
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?
Published
1 day agoon
14/01/2025By
NEWS DESK3ಬಿಗ್ ಬಾಸ್ ಫಿನಾಲೆಗೆ ಇನ್ನೊಂದು ವಾರವಷ್ಟೇ ಬಾಕಿ ಉಳಿದಿದೆ. ಬಿಗ್ ಬಾಸ್ ಮನೆಯಲೀಗ ಮಿಡ್ ವೀಕ್ ಎಲಿಮಿನೇಷನ್ ಟೆನ್ಶನ್ ಶುರುವಾಗಿದೆ.
ಇದೇ ಹೊತ್ತಲ್ಲಿ ಬಿಗ್ ಬಾಸ್ ಮನೆಯಿಂದ ಆಚೆ ಹೋಗಲು 7 ಮಂದಿ ನಾಮಿನೇಟ್ ಆಗಿದ್ದಾರೆ. ಹೀಗಾಗಿ 7 ಸ್ಪರ್ಧಿಗಳ ಎದೆಯಲ್ಲಿ ನಡುಕ ಶುರುವಾಗಿದೆ. ನಾಮಿನೇಷನ್ ನಿಂದ ಪಾರಾಗಲು ಬಿಗ್ ಬಾಸ್ ಸ್ಪರ್ಧಿಗಳಿಗೆ ಕಾಲ ಕಾಲಕ್ಕೆ ಟಾಸ್ಕ್ ನೀಡಲಿದ್ದಾರೆ.
ಇದನ್ನೂ ಓದಿ: ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?
ಬಿಗ್ ಬಾಸ್ ಕೊಟ್ಟ ಟಾಸ್ಕ್ ಯಾರು ಗೆಲ್ಲುತ್ತಾರೋ ಅವರು ಈ ವಾರದ ನಾಮಿನೇಷನ್ ನಿಂದ ಪಾರಾಗಲಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಒಟ್ಟು 8 ಸ್ಪರ್ಧಿಗಳು ಉಳಿದುಕೊಂಡಿದ್ದು, ಈ ಪೈಕಿ ಒಬ್ಬರು ಮಿಡ್ ವೀಕ್ ಎಲಿಮಿನೇಟ್ ಆಗಲಿದ್ದಾರೆ. ಇನ್ನು ಇಬ್ಬರು ವಾರಾಂತ್ಯಕ್ಕೆ ಬಿಗ್ ಬಾಸ್ ಮನೆಯಿಂದ ಹೊರ ಬರಲಿದ್ದಾರೆ. ಕೊನೆಗೆ ವಾರಾಂತ್ಯದಲ್ಲಿ ಮೂರು ಜನ ಬಿಗ್ ಬಾಸ್ ಮನೆಯಿಂದ ಹೊರಬರಲಿದ್ದಾರೆ.
ಹೀಗಾಗಿ ಎಲ್ಲಾ ಸ್ಪರ್ಧಿಗಳು ಬಿಗ್ ಬಾಸ್ ಕೊಟ್ಟ ಟಾಸ್ಕ್ ಗಳನ್ನು ಕಷ್ಟಪಟ್ಟು ಆಡುತ್ತಿದ್ದಾರೆ. ಅದರಲ್ಲೂ ರಿಲೀಸ್ ಆದ ಪ್ರೋಮೋದಲ್ಲಿ, ಇದು ಮಿಡ್ ವೀಕ್ ಎಲಿಮಿನೇಷನ್ ನಿಂದ ತಮ್ಮನ್ನು ತಾವು ಉಳಿಸಿಕೊಳ್ಳಲು ಇರುವ ಕೊನೆಯ ಟಾಸ್ಕ್ ಎಂದು ಭಯ ಹುಟ್ಟಿಸಿದ್ದಾರೆ.
BIG BOSS
ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?
Published
1 day agoon
14/01/2025By
NEWS DESK3‘ಬಿಗ್ ಬಾಸ್ ಕನ್ನಡ ಸೀಸನ್ 11’ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಆದ್ರೆ ಕಳೆದ ವಾರ ಅಚ್ಚರಿ ಎಂಬಂತೆ ಬಿಗ್ ಬಾಸ್ ಮನೆಯಿಂದ ಚೈತ್ರಾ ಕುಂದಾಪುರ ಆಚೆ ಬಂದಿದ್ದಾರೆ. ಅವರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದು, ಯಾರು ಗೆಲ್ಲುವ ಸಾಧ್ಯತೆ ಹೆಚ್ಚು ಎಂದು ಹೇಳಿದ್ದಾರೆ.
ಚೈತ್ರಾ ಕುಂದಾಪುರ ಅವರ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಫಿನಾಲೆಗೂ ಮೊದಲೇ ಔಟ್ ಆಗಿದ್ದಾರೆ. 105ಕ್ಕೂ ಹೆಚ್ಚು ದಿನಗಳ ಕಾಲ ದೊಡ್ಮನೆಯಲ್ಲಿ ಇದ್ದ ಅವರು ಈಗ ಆಟದಿಂದ ಹೊರ ಹೋಗಿದ್ದಾರೆ. ಅವರು ಆಟವನ್ನು ಹತ್ತಿರದಿಂದ ನೋಡಿದವರು. ಯಾರು ದೊಡ್ಮನೆಯಿಂದ ಹೊರ ಹೋಗುತ್ತಾರೆ ಹಾಗೂ ಯಾರೂ ಗೆಲ್ಲಬಹುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬಿಗ್ ಬಾಸ್ ನಿಂದ ಹೊರ ಬಂದ ಚೈತ್ರಾ ಕುಂದಾಪುರ ಪಡೆದ ಸಂಭಾವನೆ ಎಷ್ಟು ಗೊತ್ತೇ?
ಬಿಗ್ ಬಾಸ್ ಕನ್ನಡ ಸೀಸನ್ 11ರ, ಟಾಪ್ 5 ಫೈನಲಿಸ್ಟ್ ಜಾಗದಲ್ಲಿ ತ್ರಿವಿಕ್ರಮ್, ಹನುಮಂತ, ರಜತ್, ಭವ್ಯಾ ಗೌಡ ಹಾಗೂ ಉಗ್ರಂ ಮಂಜು ಇರಲಿದ್ದಾರೆ ಎಂದು ಹೇಳಿದ್ದಾರೆ. ಮುಂದಿನ ವಾರ ಮೋಕ್ಷಿತಾ ಅಥವಾ ಧನರಾಜ್ ಅವರು ಆಚೆ ಬರಬಹುದು ಎಂದು ಹೇಳಿದ್ದಾರೆ.
ಅಲ್ಲದೇ ಬಿಗ್ ಬಾಸ್ ಸೀಸನ್ 11 ಫಿನಾಲೆ ಟ್ರೋಫಿ ಗೆಲ್ಲೋದು ಯಾರು ಅಂತ ಕೂಡ ಹೇಳಿದ್ದಾರೆ. ಹನುಮಂತ ತುಂಬಾ ಚೆನ್ನಾಗಿ ಆಟ ಆಡುತ್ತಿದ್ದಾರೆ. ಹನುಮಂತ ಟಾಪ್ 2ನಲ್ಲಿ ಇರುತ್ತಾರೆ ಅಥವಾ ಗೆಲ್ಲಲುಬಹುದು. ಆದ್ರೆ ನನಗೆ ತ್ರಿವಿಕ್ರಮ್ ಅವರು ಗೆಲ್ಲಬೇಕು. ಅವ್ರು ಜೀವನದಲ್ಲಿ ತುಂಬಾ ಕಷ್ಟಗಳನ್ನು ಅನುಭವಿಸಿದ್ದಾರೆ. ಈ ಬಿಗ್ ಬಾಸ್ ಗೆಲುವು ಅವರಿಗೆ ತುಂಬಾನೇ ಮುಖ್ಯ ಎಂದು ಹೇಳಿದ್ದಾರೆ.
LATEST NEWS
ಪೊಲೀಸ್ ವಾಹನದಲ್ಲಿ ಡ್ರೈವಿಂಗ್ ಕಲಿಯುತ್ತಿದ್ದ ಸಬ್ ಇನ್ಸ್ ಪೆಕ್ಟರ್: ತಪ್ಪಿದ ಅನಾಹುತ !
ಇದು ನಾಗಾ ಸಾಧುಗಳ ಬಗ್ಗೆ ನಿಮಗೆ ಗೊತ್ತಿಲ್ಲದ ಸಂಗತಿ : ಭಾಗ – 1
ಬಾಲಕಿಯರಿಬ್ಬರ ಮೇಲೆ ಅ*ತ್ಯಾಚಾ*ರವೆಸಗಿ ಬ್ಲ್ಯಾ*ಕ್ಮೇಲ್ ಮಾಡಿದ ಗ್ಯಾಂಗ್ ಅರೆಸ್ಟ್
ಫಿನಾಲೆಗೆ ಡೇಟ್ ಫಿಕ್ಸ್; ಈ ಸಲ ಬಿಗ್ ಬಾಸ್ ಗೆಲ್ಲುವವರು ಯಾರು ?
ಗೆಳತಿಯ ಖಾ*ಸಗಿ ಫೊಟೋ, ವಿಡಿಯೋ ಶೇರ್ ಮಾಡಿ ಆ*ತ್ಮಹ*ತ್ಯೆಗೆ ಶರಣಾದ ಯುವಕ
ಧನರಾಜ್ ಗೆ ಒಲಿದ ಅದೃಷ್ಟ; ಭವ್ಯಾಗೆ ಆಘಾತ !
Trending
- BIG BOSS4 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- LATEST NEWS5 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
- BIG BOSS2 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- FILM6 days ago
ಮಗುವಿನೊಂದಿಗೆ ಕೊಲ್ಲೂರು ದೇಗುಲಕ್ಕೆ ಹರ್ಷಿಕಾ ದಂಪತಿ ಭೇಟಿ
Pingback: ಹೊಸ ದಾಖಲೆ ಬರೆದ ಸ್ಮೃತಿ ಮಂದಾನಾ - NAMMAKUDLA NEWS - ನಮ್ಮಕುಡ್ಲ ನ್ಯೂಸ್