Sunday, November 27, 2022

ಅಕ್ಟೋಬರ್ 18 ಕರಾವಳಿಯ ಜನ ಸಾಮಾನ್ಯರ ಆಕ್ರೋಶದ ದಿನ : ಮೊಯ್ದಿನ್ ಬಾವಾ

ಮಂಗಳೂರು  :  ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಟೋಲ್ ಗೇಟ್ ಮುತ್ತಿಗೆ ಪ್ರತಿಭಟನೆ ಐತಿಹಾಸಿಕ ಹೋರಾಟವಾಗಿ ಪರಿವರ್ತನೆ ಗೊಳ್ಳಲಿದೆ.

ಕರಾವಳಿ ಜಿಲ್ಲೆಗಳ ಜನರಲ್ಲಿ ಬಿಜೆಪಿ ಸರಕಾರದ ದುರಾಡಳಿತದ ವಿರುದ್ದ ಮಡುಗಟ್ಟಿರುವ ಆಕ್ರೋಶ ಅಕ್ಟೋಬರ್ 18 ರಂದು ಟೋಲ್ ಗೇಟ್ ಮುಂಭಾಗ ಪ್ರದರ್ಶನಗೊಳ್ಳಲಿದೆ.

ಗುರುಪುರ ಪ್ರದೇಶದ ಜನತೆ ಶಾಂತಿಯುತವಾಗಿ ನಡೆಯಲಿರುವ ಈ ಮಹತ್ವದ ಹೋರಾಟದಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಾಜಿ ಶಾಸಕ ಮೊಯ್ದಿನ್ ಬಾವಾ ಕರೆ ನೀಡಿದರು.

ಅವರು ಕೈಕಂಬ ಪ್ರೀಮಿಯರ್ ಸಭಾಂಗಣದಲ್ಲಿ ಸುರತ್ಕಲ್ ಟೋಲ್ ಗೇಟ್ ತೆರವು ಹೋರಾಟದ ಯಶಸ್ಸಿಗಾಗಿ ಹಮ್ಮಿಕೊಳ್ಳಲಾಗಿದ್ದ ಗುರುಪುರ ವಲಯ ಮಟ್ಟದ ಸಮಾನ ಮನಸ್ಕ ಸಂಘಟನೆಗಳ ಸಮಾಲೋಚನಾ ಸಭೆ ಹಾಗೂ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಕಾಂಗ್ರೆಸ್ ಯುವ ನಾಯಕ ಇನಾಯತ್ ಆಲಿ, ಗುರುಪುರ ವಲಯ ಸಿಪಿಐಎಂ ಕಾರ್ಯದರ್ಶಿ ಸದಾಶಿವ ದಾಸ್, ಹಿರಿಯ ಕಾರ್ಮಿಕ ನಾಯಕ ಗಂಗಯ್ಯ ಅಮೀನ್, ತಾಲೂಕು ಪಂಚಾಯತ್ ಮಾಜಿ ಸದಸ್ಯ ಯೂಸುಫ್ ಉಳಾಯಿಬೆಟ್ಟು, ಸಾಮಾಜಿಕ ಕಾರ್ಯಕರ್ತರಾದ ಬಾವಾ ಪದರಂಗಿ, ಖಾದರ್ ಇಡ್ಮಾ, ಗಣೇಶ್ ಬಂಗೇರ, ವಸಂತಿ ಕುಪ್ಪೆಪದವು, ಬಾಬು ಪೂಜಾರಿ ವಾಮಂಜೂರು, ಮನೋಜ್ ವಾಮಂಜೂರು, ನಿಸಾರ್ ಬಜ್ಪೆ, ಯಾಕೂಬ್ ಗುರುಪುರ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಮಂಗಳೂರಿನಲ್ಲಿ ಹಣದ ಆಮಿಷವೊಡ್ಡಿ ಮತಾಂತರಕ್ಕೆ ಯತ್ನ-ಖ್ಯಾತ ವೈದ್ಯೆ ಸಹಿತ ಮೂವರ ವಿರುದ್ಧ ಸಂತ್ರಸ್ತ ಯುವತಿಯಿಂದಲೇ ದೂರು ದಾಖಲು

ಮಂಗಳೂರು: ಮುಸ್ಲಿಂ ಯುವಕನೊಬ್ಬ ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.ಆಕೆ ನೀಡಿರುವ ದೂರಿನಲ್ಲಿ 'ಮಂಗಳೂರಿನ ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಖಲೀಲ್‌ನ...

ಇನ್ಮುಂದೆ ಬಾಡಿಗೆ ಮನೆ ಪಡೆಯಲು ಕ್ಲಿಯರೆನ್ಸ್‌ ಸರ್ಟಿಫಿಕೇಟ್‌ ಅಗತ್ಯ-ಮೈಸೂರು ನಗರ ಪೊಲೀಸ್ ಕಮಿಷನರ್ ಹೊಸ ಸುತ್ತೋಲೆ

ಮಂಗಳೂರು: ಮಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್ ಆಗಿರುವ ಘಟನೆ ಬೆನ್ನಲ್ಲೇ ಆರೋಪಿ ವಾಸವಾಗಿದ್ದ ಮೈಸೂರಿನ ಬಾಡಿಗೆ ಮನೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ನಡುವೆ ಬಾಡಿಗೆ ಮನೆ ನೀಡುವ ಮಾಲಕರು ಯಾರೂ ಗುರುತು ಪರಿಚಯ...

ಉಡುಪಿಯ ಮಂದಾರ್ತಿಯಲ್ಲೂ ಸ್ಯಾಟ್‌ಲೈಟ್ ಫೋನ್ ಸಕ್ರಿಯ-ಉಗ್ರ ಕೃತ್ಯಕ್ಕೆ ಸಂಚು ಶಂಕೆ..?

ಉಡುಪಿ: ಇದುವರೆಗೆ ಕೇವಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಷ್ಟೇ ಕೇಳಿ ಬರುತ್ತಿದ್ದ ಸ್ಯಾಟಲೈಟ್‌ ಫೋನ್‌ ಕರೆ ಈಗ ದೇವಾಲಯಗಳ ನಗರಿ ಉಡುಪಿ ಜಿಲ್ಲೆಯಲ್ಲೂ ಮೊಳಗಿದೆ. ಉಡುಪಿಯಲ್ಲೂ ಉಗ್ರರ ಕರಿನೆರಳು ಕಾಣಿಸಿದೆ.ಉಡುಪಿಯ ಮಂದಾರ್ತಿ ಸಮೀಪದ ಅರಣ್ಯ...