Connect with us

    LATEST NEWS

    ಮನೆ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್‌ನಿಂದ ಬಿದ್ದು 6 ವರ್ಷದ ಮಗು ಸಾ*ವು

    Published

    on

    ದಾವಣಗೆರೆ: ಮನೆಯ ಮುಂದೆ ನಿಲ್ಲಿಸಲಾಗಿದ್ದ ಟ್ರ್ಯಾಕ್ಟರ್‌ನಲ್ಲಿ ಆಟವಾಡುತ್ತಿದ್ದ ಪುಟ್ಟ ಕಂದಮ್ಮ, ಟ್ರ್ಯಾಕ್ಟರ್‌ನಿಂದ ಬಿದ್ದು ಸಾ*ವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

    ಈ ಘಟನೆ ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕು ಜಿಟ್ಟಿನಕಟ್ಟೆ ಗ್ರಾಮದಲ್ಲಿ ನಡೆದಿದೆ. ಮೃ*ತ ಬಾಲಕಿ ದಿಶಾಗೌಡ (06) ಮೃ*ತಪಟ್ಟಿದ್ದಾಳೆ. ಮನೆ ಮುಂದೆ ನಿಂತಿದ್ದ ಟ್ರ್ಯಾಕ್ಟರ್ ಮೇಲೆ ಆಟ ಆಡುತ್ತಿದ್ದ ಮಗು ಆಯತಪ್ಪಿ ಬಿದ್ದು ಸಾ*ವಿಗೀಡಾಗಿದೆ. ವಕೀಲ ಸಿದ್ದನ ಗೌಡ ಹಾಗೂ ಸವಿತಾ ಗೌಡ ಅವರ ಪುತ್ರಿ ದಿಶಾಗೌಡ. ದಾವಣಗೆರೆಯಲ್ಲಿ ನೆಲೆಸಿದ್ದ ಅವರು ಅಮವಾಸ್ಯೆ ಹಿನ್ನಲೆಯಲ್ಲಿ ಸ್ವಗ್ರಾಮಕ್ಕೆ ಆಗಮಿಸಿದ್ದರು. ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಮೇಲೆ ಆಡುತ್ತಿದ್ದಾಗ ಆಕಸ್ಮಿಕ ಕಾಲು ಜಾರಿ ಬಿದ್ದು ಈ ಅವಘಡ ಸಂಭವಿಸಿದೆ.

    ಇನ್ನು ಮಗು ಟ್ರ್ಯಾಕ್ಟರ್‌ನಿಂದ ಬಿದ್ದು ಗಾಯಗೊಂಡ ಬೆನ್ನಲ್ಲಿಯೇ ಮಗುವನ್ನು ಹರಪನಹಳ್ಳಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಗುವನ್ನು ದಾವಣಗೆರೆಯ ದೊಡ್ಡ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ಪೋಷಕರ ಈ ಪ್ರಯತ್ನ ಫಲಿಸಲಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃ*ತಪಟ್ಟಿದೆ. ಈ ಘಟನೆ ಸಂಬಂಧಿಸಿದಂತೆ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಉಡುಪಿ: ಕೋಟ ಶ್ರೀನಿವಾಸ ಪೂಜಾರಿ ಅವರ ಆಶೀರ್ವಾದ ಪಡೆದ ಬಿಜೆಪಿ ಮುಖಂಡ ಕಿಶೋರ್ ಕುಮಾರ್

    Published

    on

    ಉಡುಪಿ: ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ಬೆಪಿ ಅಭ್ಯರ್ಥಿಯಾಗಿ ಘೋಷಿತರಾದ ಬಿಜೆಪಿ ಮುಖಂಡ ಕಿಶೋರ್ ಕುಮಾರ್ ರವರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು.

    ಈ ಸಂದರ್ಭದಲ್ಲಿ ಕಿಶೋರ್ ಕುಮಾರ್ ರವರನ್ನು ಶಾಲು ಹೊದಿಸಿ ಅಭಿನಂದಿಸಿದ ಸಂಸದ ಕೋಟ ಗೆಲುವಿಗಾಗಿ ಶುಭ ಹಾರೈಸಿ ತಮ್ಮ ಪರವಾಗಿ ನಿರಂತರ ಕೆಲಸ ಮಾಡಿ ಗೆಲ್ಲಿಸುವ ಭರವಸೆಯನ್ನು ನೀಡಿದರು.

    ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ಯಶ್‌ಪಾಲ್ ಸುವರ್ಣ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಸಹ ಪ್ರಭಾರಿ ರಾಜೇಶ್ ಕಾವೇರಿ, ದಕ್ಷಿಣ ಕನ್ನಡ ಯುವ ಮೋರ್ಚಾ ಉಪಾಧ್ಯಕ್ಷರಾದ ಆಶ್ರಿತ್ ನೋಂಡ ಹಾಗೂ ಇತರೆ ಪ್ರಮುಖರು ಉಪಸ್ಥಿತರಿದ್ದರು.

    Continue Reading

    LATEST NEWS

    ಶಿರೂರು ಭೂ ಕುಸಿತ ದುರಂತ – ಡ್ರಜ್ಜಿಂಗ್ ಕಾರ್ಯಾಚರಣೆ ಸ್ಥಗಿತ

    Published

    on

    ಕಾರವಾರ: ಶಿರೂರು ಭೂ ಕುಸಿತ ದುರಂತದ ಹಿನ್ನೆಲೆ ನಡೆಯುತ್ತಿದ್ದ ಮೂರನೇ ಹಂತದ ಡ್ರಜ್ಜಿಂಗ್ ಕಾರ್ಯಾಚರಣೆಯನ್ನು ಸ್ಥಗಿತಮಾಡಲಾಗಿದೆ.

    ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರು ಭೂ ಕುಸಿತದ ಹಿನ್ನೆಲೆ ಮೂರನೇ ಹಂತದ ಕಾರ್ಯಾಚರಣೆಯು ನಡೆಯುತ್ತಿತ್ತು. 13 ದಿನ ಪೂರೈಸಿದ ಡ್ರಜ್ಜಿಂಗ್ ಬೋಟ್ ಮೂಲಕ ನಡೆಯುತ್ತಿದ್ದ ಕಾರ್ಯಾಚರಣೆಯನ್ನು ಇಂದು ಸ್ಥಗಿತಮಾಡಲಾಗಿದೆ.

    ಕಳೆದ 13 ದಿನದಿಂದ ಅಂಕೋಲದ ಗಂಗಾವಳಿ ನದಿಯಲ್ಲಿ ಓಷಿಯನ್ ಕಂಪನಿ ನಿರಂತರ ಕಾರ್ಯಾಚರಣೆಯಲ್ಲಿ ತೊಡಗಿತ್ತು. 90 ಲಕ್ಷದ ಮೊತ್ತದಲ್ಲಿ 13 ದಿನ ಕಾರ್ಯಾಚರಣೆ ಪೂರ್ಣಗೊಂಡಿದೆ. 13 ದಿನದ ಕಾರ್ಯಾಚರಣೆಯಲ್ಲಿ ಕೇರಳ ಮೂಲದ ಅರ್ಜುನ್ ಶವ ಹಾಗೂ ಲಾರಿ ಹೊರತೆಗೆದಿದ್ದು, ನಂತರ ಮನುಷ್ಯನ ಮೂಳೆಗಳು ಹಾಗೂ ಕೆಲವು ವಸ್ತುಗಳನ್ನು ಸಹ ಹೊರತೆಗೆಯಲಾಗಿದೆ.

    ಇದಾದ ಬಳಿಕ ಗಂಗಾವಳಿ ನದಿಯಲ್ಲಿ ಬಿದ್ದಿದ್ದ ಬೃಹತ್ ಆಲದ ಮರ ಹೊರತೆಗೆಯಲಾಗಿತ್ತು. ಆದರೆ ಇದೀಗ ಡ್ರಜ್ಜಿಂಗ್ ಕಾರ್ಯಾಚರಣೆ ಸ್ಥಗಿತ ಮಾಡಲು ನಿರ್ಧರಿಸಿದ್ದಾರೆ. ಇದರ ಬದಲಿಗೆ ಇಂದಿನಿಂದ ಇಬ್ಬರು ಮುಳುಗು ತಜ್ಞರು ಹಾಗೂ ಪೋಕ್ ಲೈನ್ ಮೂಲಕ ಹೋಟೆಲ್ ಕುಸಿದುಹೋದ ಸ್ಥಳದಲ್ಲಿ ನಿಗದಿ ಮಾಡಿದ ಎರಡನೇ ಪಾಯಂಟ್‌ನಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

    ಭೂಕುಸಿತ ದುರಂತದಲ್ಲಿ ಸತತ 77 ದಿನದ ದೀರ್ಘ ಕಾರ್ಯಾಚರಣೆ ಇದಾಗಿದ್ದು, ಒಟ್ಟು ಮೂರು ಹಂತದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಸದ್ಯ ಸಿಕ್ಕ ಮೂಳೆಗಳ ಡಿ.ಎನ್.ಎ ವರದಿ ಬರಬೇಕಿದ್ದು, ಕಾಣೆಯಾದ ಜಗನ್ನಾಥ್, ಲೋಕೇಶ್ ಶವ ಶೋಧ ನಡೆಯಬೇಕಿದೆ.

    Continue Reading

    LATEST NEWS

    Watch Video: ದರೋಡೆಕೋರರಿಂದ ಮನೆಯವರನ್ನು ರಕ್ಷಿಸಿದ ಮಹಿಳೆ

    Published

    on

    ಪಂಜಾಬ್‌: ಚಿನ್ನದ ವ್ಯಾಪಾರಿಯ ಮನೆ ದರೋಡೆಗೆ ಹೊಂಚು ಹಾಕಿದ ದರೋಡೆ ತಂಡವೊಂದನ್ನು ಮನೆಯ ಮಹಿಳೆ ಏಕಾಂಗಿಯಾಗಿ ಅಡ್ಡಗಟ್ಟಿದ ಘಟನೆ ಪಂಜಾಬ್‌ನ ಅಮೃತಸರದ ವರ್ಕಾ ಎಂಬಲ್ಲಿ ನಡೆದಿದೆ.

    ಮನೆಯ ಮಹಡಿಯಲ್ಲಿ ಬಟ್ಟೆ ಒಣಗಲು ಹಾಕುತ್ತಿದ್ದ ವೇಳೆ ಮಾಸ್ಕ್ ಧರಿಸಿದ ಮೂವರು ಮನೆಯ ಹತ್ತಿರ ಸುಳಿದಾಡುವುದು ಕಂಡು ಮನೆ ಒಡತಿಗೆ ಅನುಮಾನ ಬಂದಿದೆ. ತಕ್ಷಣ ಕೆಳಗೆ ಓಡಿ ಬಂದು ತೆರೆದಿದ್ದ ಮನೆ ಬಾಗಿಲು ಹಾಕುವ ಯತ್ನ ಮಾಡಿದ್ದಾರೆ. ಆದ್ರೆ ಆ ವೇಳೆಗಾಗಲೇ ಬಾಗಿಲು ಸಮೀಪಿಸಿದ ದರೋಡೆಕೋರರು ಬಾಗಿಲು ತಳ್ಳಿ ಒಳ ಬರುವ ಪ್ರಯತ್ನ ನಡೆಸಿದ್ದಾರೆ.

    ಏಕಾಂಗಿಯಾದರೂ ಮನೆಯನ್ನು ಹಾಗೂ ಮನೆಯವರನ್ನು ಕಾಪಾಡುವ ನಿಟ್ಟಿನಲ್ಲಿ ಮಹಿಳೆ ತನ್ನೆಲ್ಲಾ ಬಲ ಪ್ರಯೋಗಿಸಿ ಬಾಗಿಲು ಲಾಕ್ ಮಾಡಿದ್ದಾರೆ. ಜತೆಗೆ ಜೋರಾಗಿ ಕೂಗಿಕೊಂಡಿದ್ದು, ಇದರಿಂದ ವಿಚಲಿತರಾದ ದರೋಡೆಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ. ಬಳಿಕ ಪಕ್ಕದಲ್ಲೇ ಇದ್ದ ಸೋಫಾವನ್ನು ಎಳೆದು ಬಾಗಿಲಿಗೆ ಅಡ್ಡ ಇಟ್ಟ ಮಹಿಳೆ ಸಹಾಯಕ್ಕಾಗಿ ಫೋನ್ ಮಾಡಿದ್ದಾರೆ.

    ಈ ದೃಶ್ಯಗಳು ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಮಹಿಳೆಯ ಸಮಯ ಪ್ರಜ್ಞೆ ಹಾಗೂ ಸಾಹಸಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    Watch Video:

    Continue Reading

    LATEST NEWS

    Trending