Wednesday, February 1, 2023

ದಾವೂದ್ ಇಬ್ರಾಹಿಂ ಕರಾಚಿಯಲ್ಲಿರುವುದನ್ನು ಅಧಿಕೃತವಾಗಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಇಷ್ಟು ದಿನ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅಂದರೆ ಯಾರು ಅಂತ ಗೊತ್ತೆ ಇಲ್ಲ ಅಂತ ನಟಿಸುತ್ತಿದ್ದ ಪಾಕಿಸ್ತಾನ ಕೊನೆಗೂ ಕರಾಚಿಯಲ್ಲೇ ದಾವೂದ್ ಇದ್ದಾನೆ ಎಂದು ಒಪ್ಪಿಕೊಂಡಿದೆ.


ಪಾಕಿಸ್ತಾನದ ಸುಮಾರು 88 ನಿಷೇಧಿಕ ಉಗ್ರ ಸಂಘಟನೆಗಳ ಮೇಲೆ ಆರ್ಥಿಕ ನಿರ್ಬಂಧ ಹೇರಿರುವ ಪಾಕಿಸ್ತಾನ ಸರಕಾರ ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವುದರ ಮೇಲೆ ನಿಗಾ ಇಡುವ ಅಂತರರಾಷ್ಟ್ರೀಯ ಮಟ್ಟದ ಸಂಸ್ಥೆ ಹಣಕಾಸು ಕಾರ್ಯಪಡೆಯ (ಎಫ್‌ಎಟಿಎಫ್‌) ಬೂದು ಪಟ್ಟಿಯಲ್ಲಿ ಗುರುತಿಸಿಕೊಳ್ಳುವುದನ್ನು ತಪ್ಪಿಸಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ.

ದಾವೂದ್ ಇಬ್ರಾಹಿಂ, ಹಫೀಜ್ ಸಯೀದ್, ಮಸೂದ್ ಅಜರ್ ಮತ್ತು ಇತರ ಉಗ್ರ ನಾಯಕರ ಎಲ್ಲ ಆಸ್ತಿ, ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸರ್ಕಾರ ಆದೇಶಿಸಿದೆ. ಈ ಆದೇಶದ ಪ್ರತಿಯಲ್ಲಿ ದಾವೂದ್‌ನ ವಿಳಾಸವೂ ಉಲ್ಲೇಖವಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಇದರೊಂದಿಗೆ, ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ ಇರುವುದನ್ನು ಆ ದೇಶ ಅಧಿಕೃತವಾಗಿ ಒಪ್ಪಿಕೊಂಡಂತಾಗಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು ನ್ಯಾಯಾಲಯದ ಆವರಣದಲ್ಲೇ ವಕೀಲೆಗೆ ಕೊಲೆ ಬೆದರಿಕೆ ಹಾಕಿದ ಆರೋಪಿ..!

ಮಂಗಳೂರು: ಯುವ ವಕೀಲೆಯೊಬ್ಬರಿಗೆ ಮಂಗಳವಾರ ಅಪರಾಹ್ನ ನ್ಯಾಯಾಲಯದ ಆವರಣದಲ್ಲೇ ಅವಾಚ್ಯ ಶಬ್ದದಿಂದ ‌ಬೈದು ಕೊಲೆ ಬೆದರಿಕೆಯೊಡ್ಡಿದ ಘಟನೆ ಮಂಗಳೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆರೋಪಿ ವಿರುದ್ದ ಬಂದರು...

ಉಡುಪಿ: ನಾಗಬನದಲ್ಲಿನ ಶ್ರೀಗಂಧ ಮರ ಕಳವು- ಆರೋಪಿ ಬಂಧನ

ಅಂಬಲಪಾಡಿ ಶ್ಯಾಮಲಿ ಸಭಾಭವನದ ಹಿಂಬದಿ ಸಿಪಿಸಿ ಲೇಔಟ್ ಎಂಬಲ್ಲಿನ ನಾಗಬನದಲ್ಲಿದ್ದ ಶ್ರೀಗಂಧ ಮರ ಕಡಿಯುತ್ತಿದ್ದ ವ್ಯಕ್ತಿ ಯೊಬ್ಬನನ್ನು ಉಡುಪಿ ಅರಣ್ಯ ಇಲಾಖೆಯವರು  ವಶಕ್ಕೆ ಪಡೆದುಕೊಂಡಿದ್ದಾರೆ.ಉಡುಪಿ: ಅಂಬಲಪಾಡಿ ಶ್ಯಾಮಲಿ ಸಭಾಭವನದ ಹಿಂಬದಿ ಸಿಪಿಸಿ ಲೇಔಟ್...

ರಾಜ್ಯದಲ್ಲಿ ಚುನಾವಣಾ ಕಾವು :ಪಶ್ಚಿಮ ವಲಯ ವ್ಯಾಪ್ತಿಯ ಎಸ್ಸೈಗಳ ವರ್ಗಾವಣೆ..!

ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಶ್ಚಿಮ ವಲಯದ ವಿವಿಧ ಪೊಲೀಸ್ ಠಾಣೆಗಳ ಎಸ್ಸೈಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಶ್ಚಿಮ ವಲಯದ ವಿವಿಧ ಪೊಲೀಸ್ ಠಾಣೆಗಳ...