ಮಂಗಳೂರು ಸೆಂಟ್ರಲ್ ಮಾರುಕಟ್ಟೆ ಹಗಲಿಗೆ ಬಂದ್…!
ಮಂಗಳೂರು : ನಗರದಲ್ಲಿ ಜನಸಂದಣಿ ನಿಯಂತ್ರಿಸುವ ಸಲುವಾಗಿ ಸೆಂಟ್ರಲ್ ಮಾರ್ಕೆಟನ್ನು ತಾತ್ಕಾಲಿಕವಾಗಿ ಹಗಲು ವೇಳೆ ಸಂಪೂರ್ಣ ಬಂದ್ ಮಾಡಲು ನಿರ್ಧರಿಸಲಾಗಿದೆ.
ರಾತ್ರಿ 11 ರಿಂದ ಬೆಳಿಗ್ಗೆ 4 ರವರೆಗೆ ಸೆಂಟ್ರಲ್ ಮಾರ್ಕೆಟ್ ನಲ್ಲಿರುವ ಹೋಲ್ ಸೇಲ್ ಅಂಗಡಿಯವರಿಗೆ ಮಾತ್ರ ತೆರೆಯಲು ಅನುಮತಿ ನೀಡಲಾಗಿದ್ದು, ನಗರದ ವಿವಿಧ ಪ್ರದೇಶಗಳ ರಿಟೇಲ್ ವ್ಯಾಪಾರಸ್ಥರು ಮಾತ್ರ ಈ ಸಂದರ್ಭದಲ್ಲಿ ಇಲ್ಲಿಗೆ ಬಂದು ಖರೀದಿಸಬಹುದು.
ಆದರೆ, ಸೆಂಟ್ರಲ್ ಮಾರ್ಕೆಟ್ ನಲ್ಲಿರುವ ರಿಟೇಲ್ ಅಂಗಡಿಗಳನ್ನು ಸಂಪೂರ್ಣವಾಗಿ ಬಂದ್ ಮಾಡಲು ನಿರ್ಧರಿಸಲಾಗಿದೆ.
ಅಲ್ಲದೇ, ಯಾವುದೇ ಸಾರ್ವಜನಿಕರಿಗೆ ಸೆಂಟ್ರಲ್ ಮಾರ್ಕೆಟ್ ಪ್ರವೇಶ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಮಾರ್ಕೆಟ್ ಪ್ರವೇಶಿಸದಂತೆ ಬಿಗಿ ಪೊಲೀಸ್ ಭದ್ರತೆ ಒದಗಿಸಲು ನಿರ್ಧರಿಸಲಾಗಿದೆ.
ತೀವ್ರ ಇಕ್ಕಟ್ಟಾಗಿರುವ ಸುರತ್ಕಲ್ ಮಾರುಕಟ್ಟೆಯನ್ನು ಸಂಪೂರ್ಣ ಮುಚ್ಚಲು ನಿರ್ಧರಿಸಲಾಗಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಪೊಲೀಸ್ ಕಮೀಷನರ್ ಡಾ. ಪಿ.ಎಸ್. ಹರ್ಷ, ಸೆಂಟ್ರಲ್ ಮಾರ್ಕೆಟ್ ಹಾಗೂ ಸುರತ್ಕಲ್ ಮಾರ್ಕೆಟ್ ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.