Connect with us

    DAKSHINA KANNADA

    ಗಣೇಶ ಹಬ್ಬದಲ್ಲಿ ಮಾರ್ಗಸೂಚಿಗಳನ್ನು ಪಾಲಿಸಲು ದ.ಕ ಡಿಸಿ ಸೂಚನೆ

    Published

    on

    ಮಂಗಳೂರು: ಸರ್ಕಾರ ಹಾಗೂ ರಾಜ್ಯ ಹೈಕೋರ್ಟ್ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಿ ಈ ಬಾರಿಯ ಗಣೇಶ ಹಬ್ಬವನ್ನು ಸಂಭ್ರಮ ಹಾಗೂ ಸಡಗರಿದಂದ ಆಚರಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಜಿಲ್ಲೆಯ ಗಣೇಶೋತ್ಸವ ಸಮಿತಿಗಳ ಮುಖಂಡರಿಗೆ ಸಲಹೆ ನೀಡಿದರು.


    ಅವರು ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಈ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸುವ ಸಮಿತಿಗಳು ಆಯಾ ವ್ಯಾಪ್ತಿಯ ಪೊಲೀಸ್ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‍ಗಳಲ್ಲಿ ಅನುಮತಿ ಪಡೆಯಬೇಕು, ಈ ಸಂದರ್ಭದಲ್ಲಿ ಸೌಹಾರ್ದತೆ ಹಾಗೂ ಸಾಮಾಜಿಕ ಸ್ವಾಸ್ಥ್ಯ ಕದಡುವಂತಹ ಬರಹಗಳ ಬ್ಯಾನರ್ ಅಥವಾ ಫ್ಲೆಕ್ಸ್‍ಗಳನ್ನು ಅಳವಡಿಸಬಾರದು, ನಗರ ಸ್ಥಳೀಯ ಸಂಸ್ಥೆಗಳು ಅಥವಾ ಪೊಲೀಸ್ ಇಲಾಖೆಯ ಅನುಮತಿ ಪಡೆದು ಶುಭ ಕೋರುವ ಬ್ಯಾನರ್ ಅಥವಾ ಫ್ಲೆಕ್ಸ್‍ಗಳನ್ನು ಅಳವಡಿಸಿಕೊಳ್ಳಬಹುದಾಗಿದೆ.

    ಇದೀಗ ಮಳೆಗಾಲವಾದ ಕಾರಣ ಮಳೆ ಹಾಗೂ ಗಾಳಿಗೆ ಹಾನಿಯಾಗದಂತಹ ಪೆಂಡಾಲ್‍ಗಳನ್ನು ಹಾಕಬೇಕು, ಅಲ್ಲಿ ವಿದ್ಯುತ್ ಅವಘಡಗಳಾಗದಂತೆ ಎಚ್ಚರ ವಹಿಸಬೇಕು.

    ವಿದ್ಯುತ್ ಸಂಪರ್ಕ ಪಡೆಯಲು ತಾತ್ಕಾಲಿಕ ಅನುಮತಿ ಪಡೆಯಬೇಕು, ದೊಡ್ಡ ದೊಡ್ಡ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಸಮಿತಿಗಳು ಕಡ್ಡಾಯವಾಗಿ ಸಿಸಿಟಿವಿಯನ್ನು ಅಳವಡಿಸಿಕೊಳ್ಳಬೇಕು.
    ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕು, ಆ ಪೆಂಡಾಲ್‍ಗಳಲ್ಲಿ ಯಾವುದೇ ರೀತಿಯ ಅವಘಡಗಳು ಆಗದಂತೆ ಎಚ್ಚರ ವಹಿಸಲು ತಮ್ಮ ಕಾರ್ಯಕರ್ತರನ್ನು ನಿಯೋಜಿಸುವಂತೆ ಅವರು ತಿಳಿಸಿದರು.

    ಧ್ವನಿವರ್ಧಕಗಳನ್ನು ಬಳಸುವ ಮುನ್ನ ಸಂಬಂಧಪಟ್ಟವರಿಂದ ಅನುಮತಿ ಪಡೆಯಬೇಕು ಮತ್ತು ನ್ಯಾಯಾಲಯದ ಆದೇಶದಂತೆ ರಾತ್ರಿ ಹತ್ತು ಗಂಟೆಯ ನಂತರ ಧ್ವನಿ ವರ್ಧಕಗಳನ್ನು ಬಳಸಬಾರದು, ವಿದ್ಯುತ್ ಅಲಂಕಾರ, ಬೆಳಕಿನ ವ್ಯವಸ್ಥೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಆಯೋಜಕರು ಗಮನ ಹರಿಸಬೇಕು.

    ವಿಸರ್ಜನೆ ಮೆರವಣಿಗೆಯಲ್ಲಿ ವಿದ್ಯುತ್ ತಂತಿಗಳು ಅಥವಾ ಕೇಬಲ್‍ಗಳು ಇರದಿರುವ ಬಗ್ಗೆ ಖಚಿತ ಪಡಿಸಿಕೊಂಡ ನಂತರವೇ ಮೆರವಣಿಗೆ ನಡೆಸಬೇಕು ಎಂದು ಮಾಹಿತಿ ನೀಡಿದರು.

    ಕೋವಿಡ್-19 ಸೋಂಕು ಪ್ರಕರಣಗಳು ಕಡಿಮೆ ಇದ್ದಾಗ್ಯೂ ಹಬ್ಬದ ಸಂದರ್ಭದಲ್ಲಿ ಎಚ್ಚರ ವಹಿಸಬೇಕು, ಪ್ಲಾಸ್ಟ್‍ರ್ ಆಫ್ ಪ್ಯಾರಿಸ್ ಸೇರಿದಂತೆ ಪರಿಸರಕ್ಕೆ ಹಾನಿಯಾಗುವಂತಹ ಪ್ರತಿಮೆಗಳನ್ನು ಬಳಸಬಾರದು, ಶುದ್ದ ಮಣ್ಣಿನಿಂದ ಮಾಡಿದ ಗಣಪನ್ನೇ ಬಳಸುವಂತೆ ತಿಳಿಸಿದ ಅವರು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸರ್ಕಾರ ಮತ್ತು ನ್ಯಾಯಾಲಯದ ಆದೇಶವನ್ನು ಪಾಲಿಸುವ ಮೂಲಕ ಯಶಸ್ವಿಯಾಗಿ ಗಣೇಶೋತ್ಸವವನ್ನು ಆಚರಿಸುವಂತೆ ಅವರು ಸಲಹೆ ನೀಡಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಕ್ಷು ಕುಮಾರ್ ಹಾಗೂ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ವೇದಿಕೆಯಲ್ಲಿದ್ದರು.

    ಜಿಲ್ಲೆಯ ವಿವಿಧ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಹಾಗೂ ಆಯೋಜಕರು ಸಭೆಯಲ್ಲಿ ಭಾಗವಹಿಸಿ, ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending