Connect with us

DAKSHINA KANNADA

ಶಿರಾಡಿ ಘಾಟ್ ರಸ್ತೆಯಲ್ಲಿ ಜನವರಿ 15ರೊಳಗೆ ಹೊಂಡ ಮುಚ್ಚಲು ದ.ಕ ಡಿ.ಸಿ ಸೂಚನೆ

Published

on

ಮಂಗಳೂರು: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ ಭಾಗದಲ್ಲಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯನ್ನು ತ್ವರಿತಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಹಾಗೂ ತಾತ್ಕಾಲಿಕವಾಗಿ ರಸ್ತೆಯ ಹೊಂಡಗಳನ್ನು ಜನವರಿ 15 ರೊಳಗೆ ಮುಚ್ಚಿ ಸಂಚಾರ ಯೋಗ್ಯ ರಸ್ತೆಯನ್ನಾಗಿ ಮಾಡಿ ಕೊಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಮ್ಮತಿಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ತಿಳಿಸಿದ್ದಾರೆ.


ಮಂಗಳೂರಿನ ಪತ್ರಿಕಾ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಾಡಿ ಘಾಟ್‌ ಭಾಗದಲ್ಲಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಿಧಾನ ಗತಿಯಲ್ಲಿ ನಡೆಯುತ್ತಿರುವುದು ಗಮನಕ್ಕೆ ಬಂದಿದೆ.

ಕಾಮಗಾರಿಯನ್ನು ತ್ವರಿತಗೊಳಿಸಲು ಬೇಕಾಗಿರುವ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳುವಂತೆ ಇತ್ತೀಚೆಗೆ ಎನ್ಎಚ್ಎಐ, ಪಿಡಬ್ಲ್ಯುಡಿ, ಕೆಪಿಟಿ ಸಿಎಲ್‌ ಅಧಿಕಾರಿಗಳ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆಯನ್ನು ನಡೆಸಿ ಸೂಚನೆ ನೀಡಲಾಗಿದೆ. ಅಲ್ಲದೆ ತಾತ್ಕಾಲಿಕವಾಗಿ ರಸ್ತೆಯ ಗುಂಡಿ ಮುಚ್ಚಲು ಸೂಚಿಸಲಾಗಿದೆ.

2023 ಜನವರಿ 15 ರೊಳಗೆ ರಸ್ತೆ ಗುಂಡಿ ಮುಚ್ಚುವ ಕೆಲಸ ಮುಕ್ತಾಯಗೊಳಿಸುವುದಾಗಿ ಎನ್ಎಚ್ಎಐ, ಅಧಿಕಾರಿಗಳು ಸಮ್ಮತಿಸಿದ್ದಾರೆ ಎಂದರು. ಹೆದ್ದಾರಿ ಕಾಮಗಾರಿಯ ಪ್ರಗತಿ ಮತ್ತು ಶಿರಾಡಿ ಭಾಗದಲ್ಲಿ ವಾಹನ ಸಂಚಾರದ ಸ್ಥಿತಿ ಗತಿಯನ್ನು ಪರಿಶೀಲಿಸಲು ಒಂದು ದಿನ ರಾತ್ರಿ ವೇಳೆ ತಾನು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡುತ್ತೇನೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಇನ್ನು ಮತದಾನ ಪರಿಷ್ಕರಣೆ ಬಗ್ಗೆ ಮಾತನಾಡಿ ‘ದಕ್ಷಿಣ ಕನ್ನಡ ಜಿಲ್ಲೆಯ ಜನಸಂಖ್ಯೆ 23,70,000 ಇದ್ದು ಅವರಲ್ಲಿ 17,08955 ಮಂದಿ ಮತದಾನ ಮಾಡುವ ಹಕ್ಕು ಹೊಂದಿದ್ದಾರೆ. ಜಿಲ್ಲೆಯ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಸಾರ್ವಜನಿಕರು ಈ ಪಟ್ಟಿಯನ್ನು ಪರಿಶೀಲಿಸಿ ಲೋಪ ದೋಷಗಳಿದ್ದರೆ ಅಥವಾ ಹೆಸರು ಬಿಟ್ಟು ಹೋಗಿದ್ದರೆ ಸರಿ ಪಡಿಸಲು ಈಗ ಅವಕಾಶವಿದೆ ಎಂದು ತಿಳಿಸಿದ್ದಾರೆ.

ಅವರು ಇಂದು ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಮಂಗಳೂರಿನ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ, ಇಲ್ಲವೇ ಎಂದು ಆನ್‌ಲೈನ್‌ ಅಥವಾ ಆಫ್‌ಲೈನ್‌ ಮೂಲಕ ಪರಿಶೀಲಿಸಬಹುದಾಗಿದೆ.

ಹೆಸರು, ವಿಳಾಸ, ಜನನ ದಿನಾಂಕ ಇತ್ಯಾದಿಗಳಲ್ಲಿ ಲೋಪ ದೋಷಗಳಿದ್ದರೆ, ಅಥವಾ ತಿದ್ದುಪಡಿ ಮಾಡ ಬೇಕಿದ್ದರೆ ಸರಿಪಡಿಸಲು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು.

ಒಂದು ಕುಟುಂಬದ ಎಲ್ಲಾ ಮತದಾರರು ಒಂದೇ ಮತ ಗಟ್ಟೆಯಲ್ಲಿ ಮತದಾನ ಮಾಡಲು ಅನುಕೂಲವಾಗುವಂತೆ ಮತಗಟ್ಟೆ ಬದಲಾವಣೆಗೂ ಅವಕಾಶವಿದೆ.

ಪ್ರತಿ ಮನೆ ಮನೆ ಸರ್ವೆ ನಡೆಯುತ್ತಿದೆ. 2023 ಜನವರಿ 5 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ. ಆದ್ದರಿಂದ ತಿದ್ದುಪಡಿ ಮಾಡ ಬೇಕಿದ್ದರೆ ಕೂಡಲೇ ಮಾಡಿಸಿ ಎಂದರು.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending