Connect with us

    DAKSHINA KANNADA

    ಜಿಲ್ಲೆಯಾದ್ಯಂತ ಅನಧಿಕೃತ ಫ್ಲೆಕ್ಸ್, ಅಕ್ರಮ ಮರಳುಗಾರಿಕೆ ತಡೆಗೆ ಡಿಸಿ ಖಡಕ್ ಆರ್ಡರ್

    Published

    on

    ಮಂಗಳೂರು: ಅಕ್ರಮ ಮರಳು ಸಾಗಾಣಿಕೆ ತಡೆಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪೊಲೀಸರೊಂದಿಗೆ ತಂಡವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸೂಚಿಸಿದರು.

    ಅವರು ಆ.19ರ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಕ್ರಮ ಮರಳುಗಾರಿಕೆ ತಡೆ, ಅನಧಿಕೃತ ಫ್ಲಾಕ್ಸ್ ತೆರವು ಹಾಗೂ ಹಬ್ಬ ಹರಿದಿನಗಳಲ್ಲಿ ಡಿಜೆ ಹಾಗೂ ದ್ವನಿವರ್ಧಕಗಳ ಬಳಕೆಯ ಬಗ್ಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


    ಉಳ್ಳಾಲ, ಕೋಟೆಪುರ, ಸೋಮೇಶ್ವರ, ಉಚ್ಚಿಲ, ಪೇರಿಬೈಲು, ತಲಪಾಡಿ ಸೇರಿದಂತೆ ವಿವಿಧೆಡೆ ಅಕ್ರಮ ಮರಳು ಸಾಗಾಣಿಕೆಯ ಬಗ್ಗೆ ವರದಿಯಾಗುತ್ತಿದೆ, ಅದನ್ನು ತಡೆಗಟ್ಟಲು ಜಿಲ್ಲಾಡಳಿತದಿಂದ ಅತಿ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಅಧಿಕಾರಿಗಳ ನಿಯೋಜನೆ ಹಾಗೂ ಸಿಸಿಟಿವಿಗಳನ್ನು ಅಳವಡಿಸಲಾಗಿದೆ, ಈ ಸ್ಥಳಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿಗಳನ್ನು ಪರಿಶೀಲಿಸಬೇಕು.

    ತಡರಾತ್ರಿ ಸಂಚರಿಸುವ ವಾಹನಗಳ ಮೇಲೆ ಕಣ್ಣಿಡಬೇಕು, ಮುಖ್ಯವಾಗಿ ಪೊಲೀಸ್ ಚೆಕ್ ಪೋಸ್ಟ್‍ಗಳಲ್ಲಿ ಮತ್ತಷ್ಟು ಎಚ್ಚರ ವಹಿಸಬೇಕು ಎಂದು ಸೂಚಿಸಿದರು.

    ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾತನಾಡಿ ಅಕ್ರಮ ಮರಳುಗಾರಿಕೆ ತಡೆಯಲು ಅಳವಡಿಸಿರುವ ಸಿಸಿಟಿವಿಗಳ ಫೂಟೇಜ್ ಅನ್ನು ಪರಿಶೀಲಿಸಿ, ಮೂವರು ಡಿಎಸ್‍ಪಿಗಳು ವರದಿ ನೀಡುವಂತೆ ಸೂಚಿಸಿದ ಅವರು, ಸಿಸಿಟಿವಿಗಳನ್ನು ನೋಡಿ ಅಕ್ರಮ ಮರಳು ಸಾಗಾಣಿಕೆ ವಾಹನಗಳ ವಿರುದ್ಧ ಪ್ರಕರಣದ ದಾಖಲಿಸಬೇಕು.

    ಪ್ರಮುಖವಾಗಿ ಹೊತ್ತಲ್ಲದ ಹೊತ್ತಿನಲ್ಲಿ ಮರಳು ಸಾಗಾಣಿಕ ವಾಹನಗಳು ಸಂಚರಿಸುವುದನ್ನು ಪತ್ತೆ ಮಾಡಿ ಪ್ರಕರಣ ದಾಖಲಿಸಿಕೊಳ್ಳಬೇಕು ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸಂಬಂಧಿಸಿದ ವಾಹನಗಳ ಪರವಾನಗಿಯನ್ನು ರದ್ದು ಪಡಿಸಿ, ಆ ವಾಹನಗಳನ್ನು ವಶಕ್ಕೆ ಪಡೆಯುವಂತೆ ತಿಳಿಸಿದರು.

    ಜಿಲ್ಲಾಧಿಕಾರಿ ಮಾತನಾಡಿ, ಅಕ್ರಮ ಮರಳುಗಾರಿಕೆಯಾಗುವ ಸ್ಥಳಗಳಲ್ಲಿ ಅಲ್ಲಿನ ಗ್ರಾಮ ಸಹಾಯಕ, ಗ್ರಾಮ ಲೆಕ್ಕಿಗ, ಕಂದಾಯ ನಿರೀಕ್ಷಕರು ಎಚ್ಚರದಿಂದಿದ್ದು, ಆ ಬಗ್ಗೆ ಸಂಬಂಧಿಸಿದವರಿಗೆ ಕೂಡಲೇ ವರದಿ ಮಾಡಬೇಕು ಎಂದು ಸೂಚಿಸಿದರು.

    ಜಿಲ್ಲೆಯ ಯಾವೆಲ್ಲಾ ಸ್ಥಳಗಳಲ್ಲಿ ಅಕ್ರಮ ಮರಳು ಶೇಖರಣೆಯಾಗಿದೆ ಎಂಬುದನ್ನು ಪತ್ತೆ ಮಾಡಿ, ಪ್ರಕರಣವನ್ನು ದಾಖಲಿಸುವಂತೆಯೂ ಪೊಲೀಸ್ ಆಯುಕ್ತರು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.

    ಫ್ಲೆಕ್ಸ್: ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಧಿಕೃತ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್ ಹಾಕುವ, ಅನಧಿಕೃತ ಸ್ಥಳಗಳಲ್ಲಿ ದ್ವೇಷಾತ್ಮಕ ಹಾಗೂ ವಿವಾದಾತ್ಮಕ ಸಂದೇಶ ಸಾರುವ ಫ್ಲೆಕ್ಸ್  ಗಳನ್ನು ಹಾಕುವ ಹಾಗೂ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಫ್ಲೆಕ್ಸ್‌ಗಳನ್ನು ಹಾಕುವವರ ವಿರುದ್ಧ ಪೊಲೀಸರ ಸಹಕಾರದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

    ವಿವಾದಾತ್ಮಕ ಅಥವಾ ದ್ವೇಷ ಸಾರುವ ಸಂದೇಶದ ಫ್ಲೆಕ್ಸ್‍ಗಳು ಕಂಡುಬಂದ ಕೂಡಲೇ ಅವುಗಳನ್ನು ಸಂಬಂಧಿಸಿದ ಸ್ಥಳದ ಅಧಿಕಾರಿಗಳು ತೆರವುಗೊಳಿಸಬೇಕು, ಇಲ್ಲಿ ಪೊಲೀಸರ ಸಹಕಾರ ಪಡೆಯಬೇಕು, ಹಾಗೂ ಅಧಿಕೃತ ಸ್ಥಳಗಳಲ್ಲಿ ಫ್ಲೆಕ್ಸ್ ಹಾಕುವ ಮುನ್ನ ಸಂಬಂಧಿಸಿದ ಅಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು, ಹಾಗೂ ಅದನ್ನು ಮುದ್ರಿಸಿದವರ ವಿವರ ಅದರಲ್ಲಿರಬೇಕು. ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು, ನಿಟ್ಟಿನಲ್ಲಿ ಫ್ಲೆಕ್ಸ್ ಪ್ರಿಂಟರ್‌ಗಳ ಸಭೆ ಕರೆಯಲಾಗುವುದು ಎಂದರು.

    ಹೈಕೋರ್ಟ್‍ನ ಆದೇಶ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ವಯ ಡಿಜೆ ಸೆಟ್ ಹಾಗೂ ಧ್ವನಿವರ್ಧಕಗಳನ್ನು ಬಳಸಬೇಕು. ಈ ಬಗ್ಗೆ ಜಿಲ್ಲಾ, ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ನಿಭಾಯಿಸಬೇಕಾದ ಕರ್ತವ್ಯಗಳ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು ಅವುಗಳನ್ನು ಚಾಚು ತಪ್ಪದೇ ಪಾಲಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

    ಮಂಗಳೂರು ನಗರ ವ್ಯಾಪ್ತಿಯಲ್ಲಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರು, ಮಂಗಳೂರು ಮಹಾನಗರ ಪಾಲಿಕೆ ಇಂಜಿನಿಯರ್‍ಗಳನ್ನೊಳಗೊಂಡ ತಂಡವನ್ನು ರಚಿಸಲಾಗಿದೆ ಅವರು ತಮ್ಮ ಕರ್ತವ್ಯಗಳನ್ನು ನಿರ್ವಹಿಸಿ ನ್ಯಾಯಾಲಯದ ಆದೇಶವನ್ನು ಪಾಲಿಸಬೇಕು ಎಂದು ಸೂಚನೆ ನೀಡಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್, ಪರಿಸರ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಮಹೇಶ್ ಕುಮಾರ್, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ ಲಿಂಗರಾಜು, ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಹರೀಶ್ ಕುಮಾರ್, ತಹಶೀಲ್ದಾರ್‌ಗಳು, ಕಂದಾಯ ಅಧಿಕಾರಿಗಳು ಮತ್ತು ಸಂಬಂಧಪಟ್ಟ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending