LATEST NEWS
ಜಿಲ್ಲೆಯಲ್ಲಿ ಇನ್ನೂ 1 ಲಕ್ಷ ಜನರಿಗೆ ಲಸಿಕೆ ಕೊಡೋದು ಸವಾಲಿನ ಕೆಲಸ: ಜಿಲ್ಲಾಧಿಕಾರಿ
Published
3 years agoon
By
Adminಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 17,15,000 ಜನಸಂಖ್ಯೆಯಲ್ಲಿ 16,1,000 ಜನರಿಗೆ ಮೊದಲ ಕೋವಿಡ್ ಡೋಸ್ ನೀಡಲಾಗಿದೆ. ಇನ್ನೂ 1,14,000 ಜನ ಕೋವಿಡ್ ಡೋಸ್ ಪಡೆಯಲು ಬಾಕಿ ಇದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮಾಹಿತಿ ನೀಡಿದ್ದಾರೆ.
ಕೋವಿಡ್ ಲಸಿಕೆಯ ರಾಜ್ಯದಲ್ಲಿ ನಮ್ಮ ಜಿಲ್ಲೆ 96 ಶೇಕಡಾದಲ್ಲಿದೆ.
ಈಗಲೂ ಕೆಲವು ಧರ್ಮ, ಜಾತಿಗಳಲ್ಲಿ ಕೋವಿಡ್ ಲಸಿಕೆ ಪಡೆಯುವ ಬಗ್ಗೆ ಅಸಡ್ಡೆ ತೋರಿಸುತ್ತಿದ್ದಾರೆ. ಯುವಕರೂ ಅಸಡ್ಡೆ ತೋರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಈವರೆಗೆ ನಮ್ಮ ಜಿಲ್ಲೆಯಲ್ಲಿ ವ್ಯಾಕ್ಸಿನೇಷನ್‌ನಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ. ಉಳಿವರಿಗೆ ಮೊದಲ ಡೋಸ್ ಕೊಡಿಸೋದೆ ಸವಾಲಾಗಿಸಿದೆ ಎಂದ ಅವರು ಸರಕಾರದಿಂದಲೇ ಉಚಿತ ಡೋಸ್ ತೆಗೆದುಕೊಳ್ಳಿ ಎಂದರು.
ಇನ್ನು ಪ್ರತಿಯೊಂದು ಕಡೆಗಳಲ್ಲಿ ಜನರನ್ನು ಜಿಲ್ಲಾಡಳಿತ ನಿರ್ಬಂಧಿಸುವುದು ಕಷ್ಟ. ಈ ಬಗ್ಗೆ ಸ್ವಯಂ ಪ್ರೇರಿತರಾಗಿ ಜನರೇ ಅರ್ಥ ಮಾಡಿಕೊಳ್ಳಬೇಕು.
ಮದುವೆ ಸಮಾರಂಭಗಳನ್ನು ನಿಗದಿತ ಜನರ ಸಮ್ಮುಖ ಮಾಡಿ. ಇನ್ನುಳಿದಂತೆ ಕೇರಳ ರಾಜ್ಯಕ್ಕೆ ತಾಗಿಕೊಂಡಿರುವ ಗ್ರಾಮಗಳಲ್ಲಿ ಕೋವಿಡ್ ಲಸಿಕೆ ಕೊಡುವುದು ಸವಾಲಿನ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಧಾರ್ಮಿಕ ಗುರುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ.
ಆ ಕಡೆಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆಗೆ ಹೋದರೂ ಕೆಲವು ಮನೆಯವರು ಆರೋಗ್ಯ ಸಿಬ್ಬಂದಿಯ ಜೊತೆ ಸಹಕರಿಸುತ್ತಿಲ್ಲ ಎಂದರು.
ಮಂಗಳೂರು/ಪ್ರಯಾಗ್ ರಾಜ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಪ್ರಯಾಗ್ರಾಜ್ನ ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕುಂಭಮೇಳ ಪ್ರದೇಶದ ಸೆಕ್ಟರ್ 19ರಲ್ಲಿ ಸುಮಾರು 12ಕ್ಕೂ ಹೆಚ್ಚು ಸಿಲಿಂಡರ್ಗಳು ಸ್ಫೋಟಗೊಂಡಿರುವಂತಹ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ಟೆಂಟ್ಗಳು ಹೊತ್ತಿ ಉರಿದಿದ್ದು, ಕುಂಭಮೇಳ ಪ್ರದೇಶದ ಸೆಕ್ಟರ್ 20ಕ್ಕೂ ಬೆಂಕಿ ವ್ಯಾಪಿಸುತ್ತಿದೆ. ಸದ್ಯ ಯಾವುದೇ ಸಾವು ನೋವು ಸಂಭವಿಸಿಲ್ಲ.
ಈ ವಿಚಾರ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಇನ್ನೂ, ಈ ಮಹಾ ಕುಂಭಮೇಳಕ್ಕೆ ಸಾಧು ಸಂತರು ಸೇರಿದಂತೆ ಕೋಟ್ಯಾಂತರ ಭಕ್ತರು ಆಗಮಿಸಿದ್ದರು.
ಇದನ್ನೂ ಓದಿ: ಹೊ*ತ್ತಿ ಉರಿದ ಮನೆ; ಮಹಿಳೆ, ಮೂರು ಮಕ್ಕಳು ಸಜೀವ ದ*ಹನ
ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ ಪುನೀತರಾಗುತ್ತಿದ್ದರು. ಆದ್ರೆ ಇದೇ ಹೊತ್ತಲ್ಲಿ ಪ್ರಯಾಗ್ರಾಜ್ನ ಶಾಸ್ತ್ರಿ ಬ್ರಿಡ್ಜ್ ಸೆಕ್ಟರ್ 19ರಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಕರ ಸಂಕ್ರಾಂತಿಯದ್ದೇ ಕೋಟ್ಯಂತರ ಭಕ್ತರು ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದರು.
ಘಟನೆಯ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ಮಾಹಿತಿ ಪಡೆದಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
LATEST NEWS
ಹೊ*ತ್ತಿ ಉರಿದ ಮನೆ; ಮಹಿಳೆ, ಮೂರು ಮಕ್ಕಳು ಸಜೀವ ದ*ಹನ
Published
10 hours agoon
19/01/2025By
NEWS DESK4ಮಂಗಳೂರು/ಗಾಜಿಯಾಬಾದ್ : ಮನೆಯೊಂದು ಬೆಂ*ಕಿಗಾಹುತಿಯಾಗಿ, ಒಳಗಿದ್ದ ನಾಲ್ವರು ಸಜೀವದ*ಹನವಾದ ಘಟನೆ ಇಂದು(ಜ.19) ಗಾಜಿಯಾಬಾದ್‌ನ ಲೋನಿ ಪ್ರದೇಶದ ಕಾಂಚನ್ ಪಾರ್ಕ್ ಬಳಿ ನಡೆದಿದೆ. ಕಟ್ಟಡದ ಮೂರನೇ ಮಹಡಿಯ ಮನೆಯಲ್ಲಿ ಬೆಂ*ಕಿ ಕಾಣಿಸಿಕೊಂಡಿದೆ. ಮನೆಯಲ್ಲಿ 8 ಮಂದಿ ವಾಸವಾಗಿದ್ದರು. ಬೆಂ*ಕಿ ಕಾಣಿಸಿಕೊಂಡಾಗ ಮನೆಯವರೆಲ್ಲಾ ನಿದ್ರೆಯಲ್ಲಿದ್ದರು ಎನ್ನಲಾಗಿದೆ.
ಗುಲ್ಬಹಾರ್ (32), ಮಕ್ಕಳಾದ ಶಾನ್ (8) ಮತ್ತು ಜಾನ್ (9), ಅವರ ಸಂಬಂಧಿಕರ ಮಗ ಜೀಶನ್ (5) ಮೃತಪಟ್ಟವರು. ಮೃತ ಗುಲ್ಬಹಾರ್‌ನ ಪತಿ ಶಹನವಾಜ್ ಯಾವುದೇ ಗಾ*ಯಗಳಿಲ್ಲದೆ ಪಾರಾಗಿದ್ದಾರೆ. ಇನ್ನು ಉಳಿದವರು ಗಾ*ಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ರಾಜ್ಯದ 11 ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ; ಎಲ್ಲೆಲ್ಲಿ ?
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂ*ಕಿ ಕಾಣಿಸಿಕೊಂಡಿರಬಹುದೆಂಬ ಶಂಕೆ ಇದೆ. ಆದರೆ, ಘಟನೆಗೆ ನಿಖರ ಕಾರಣವೇನು ಎಂಬುದು ತನಿಖೆ ಬಳಿಕವಷ್ಟೇ ತಿಳಿಯಲಿದೆ.
LATEST NEWS
ರಾಜ್ಯದ 11 ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ; ಎಲ್ಲೆಲ್ಲಿ ?
Published
10 hours agoon
19/01/2025By
NEWS DESK3ಮಂಗಳೂರು/ಬೆಂಗಳೂರು : ಭಾನುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಸುರಿದ ಮಳೆ ಅಚ್ಚರಿ ಮೂಡಿಸಿದೆ. ಈ ನಡುವೆ ರಾಜ್ಯದ ಹಲವೆಡೆ ಮುಂದಿನ ಐದು ದಿನಗಳ ಕಾಲ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತು ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರವು (KSNDMC) ಹವಾಮಾನ ಇಲಾಖೆ ಮುನ್ಸೂಚನೆಯನ್ನು ಉಲ್ಲೇಖಿಸಿ ಎಚ್ಚರಿಕೆ ನೀಡಿದೆ. ‘ರಾಜ್ಯದ ದಕ್ಷಿಣ ಒಳಭಾಗ, ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮುಂದಿನ 5 ದಿನ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ. ಉತ್ತರದ ಜಿಲ್ಲೆಗಳ ಶುಷ್ಕ ಗಾಳಿ ಇರಲಿದೆ. ರಾಜ್ಯದಾದ್ಯಂತ ಸಾಧಾರಣದಿಂದ ಮಂಜು ಮತ್ತು ಅಲ್ಲಲ್ಲಿ ತುಂತುರು ಮಳೆ ಇರುತ್ತದೆ’ ಎಂದು ಹೇಳಿದೆ.
ಎಲ್ಲೆಲ್ಲಿ ಮಳೆ ?
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೀದರ್, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ತೀವ್ರ ಚಳಿ ಇರಲಿದೆ ಎಂದು ತಿಳಿಸಿದೆ.
LATEST NEWS
ಮದುವೆ ತಯಾರಿ ನಡೆಯುತ್ತಿರುವಾಗಲೇ ಅ*ಪಘಾ*ತ; ಇಂಜಿನಿಯರ್ ವಧು ವಿ*ಧಿವಶ
ಟಿಕ್ ಟಾಕ್ಗೆ ಶಾಕ್ ನೀಡಿದ ಅಮೆರಿಕ !
ಕಾರಿಗೆ ದಿಢೀರ್ ಬೆಂ*ಕಿ; ಹಸೆಮಣೆ ಏರಬೇಕಿದ್ದ ವರ ಸು*ಟ್ಟು ಬೂ*ದಿ
ಭೀಕರ ರಸ್ತೆ ಅ*ಪಘಾತ; ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಕುಟುಂಬಕ್ಕೆ ಆ*ಘಾತ
ಮದುವೆಯಾಗುವ ಹೊಸ್ತಿಲಲ್ಲಿ ಇರುವ ಯುವ ಸಮೂಹಕ್ಕೆ ಕಿವಿಮಾತು..
ಪೆಟ್ರೋಲ್ ಟ್ಯಾಂಕರ್ ಸ್ಪೋ*ಟ: 70 ಮಂದಿ ಸಾ*ವು
Trending
- BIG BOSS7 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- BIG BOSS5 days ago
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?
- BIG BOSS5 days ago
ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?
- BIG BOSS6 days ago
ಬಿಗ್ ಬಾಸ್ ನಿಂದ ಹೊರ ಬಂದ ಚೈತ್ರಾ ಕುಂದಾಪುರ ಪಡೆದ ಸಂಭಾವನೆ ಎಷ್ಟು ಗೊತ್ತೇ?