Connect with us

DAKSHINA KANNADA

ಮಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದ ಪೊಲೀಸ್‌ ಅಧಿಕಾರಿ ನಿಧನ

Published

on

ಬೆಂಗಳೂರು: ಐಪಿಎಸ್ ಅಧಿಕಾರಿ ಡಾ. ಕೆ.ವಿ. ಜಗದೀಶ್ (44) ಅವರು ಅನಾರೋಗ್ಯದಿಂದಾಗಿ ನಗರದ ಎಚ್‌ಸಿಜಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು.


ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಕೋಲಾರದ ಜಗದೀಶ್, ಎಂಬಿಬಿಎಸ್ ಪದವೀಧರರು. 2005ರಲ್ಲಿ ಕರ್ನಾಟಕ ಪೊಲೀಸ್ ಸೇವೆಗೆ ಸೇರಿದ್ದರು. 2012ರಲ್ಲಿ ಐಪಿಎಸ್ ಶ್ರೇಣಿಗೆ ಅರ್ಹತೆ ಪಡೆದಿದ್ದರು.

ಮಂಗಳೂರಿನಲ್ಲಿ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ದಕ್ಷ ಅಧಿಕಾರಿ. ಬೆಂಗಳೂರು ಸಂಚಾರ ವಿಭಾಗದ ಡಿಸಿಪಿ ಸೇರಿದಂತೆ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಹಲವು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಎಚ್‌ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜಗದೀಶ್ ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಾದ ಕೋಲಾರದಲ್ಲಿ ನಡೆಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending