DAKSHINA KANNADA
‘ಕೇಸರಿಕರಣ’ವಾದ ಡಿಡಿ ನ್ಯೂಸ್..! ಚರ್ಚೆಗೆ ಕಾರಣವಾದ ಹೊಸ ಲೋಗೋ..!
Published
7 months agoon
By
Adminಮಂಗಳೂರು : ಚುನಾವಣಾ ಸಮಯದಲ್ಲೇ ದೇಶದ ಸರ್ಕಾರಿ ಚಾನೆಲ್ ದೂರದರ್ಶನ ತನ್ನ ಲೋಗೋದ ಬಣ್ಣವನ್ನು ಬದಲಾಯಿಸಿದೆ. ಡಿಡಿ ನ್ಯೂಸ್ ತನ್ನ ಲೋಗೋ ಬಣ್ಣವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿರುವುದು ಈಗ ಚರ್ಚೆಗೆ ಕಾರಣವಾಗಿದೆ. 1959 ರಲ್ಲಿ ಆರಂಭವಾಗಿದ್ದ ದೂರದರ್ಶನದ ಲೋಗೋ ನೀಲಿ ಬಣ್ಣದಾಗಿದ್ದು, ಇದೀಗ ಚುನಾವಣೆಯ ಹೊಸ್ತಿಲಲ್ಲಿ ಕೇಸರಿ ಬಣ್ಣಕ್ಕೆ ಬದಲಾಯಿಸಿದ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದೆ. ದೇಶದಲ್ಲಿ ಎಲ್ಲವನ್ನೂ ಕೇಸರಿಕರಣ ಮಾಡುವ ಭಾಗವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದೆ.
ಕೇಂದ್ರ ಸರ್ಕಾರದ ಪ್ರಸಾರಭಾರತಿ ಅಡಿಯಲ್ಲಿ ಬರುವ ದೂರದರ್ಶನ ಏಕಾಏಕಿ ತನ್ನ ಲೋಗೋವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿದೆ. ಇದನ್ನು ದೂರದರ್ಶನ ತನ್ನ ಅಧಿಕೃತ ‘X’ ಖಾತೆಯಲ್ಲಿ ಹಂಚಿಕೊಂಡಿದ್ದು, ಲೋಗೋ ಕೇವಲ ದೃಶ್ಯ ಸೌಂದರ್ಯದ ಬದಲಾವಣೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.
While our values remain the same, we are now available in a new avatar. Get ready for a news journey like never before.. Experience the all-new DD News!
We have the courage to put:
Accuracy over speed
Facts over claims
Truth over sensationalismBecause if it is on DD News, it… pic.twitter.com/YH230pGBKs
— DD News (@DDNewslive) April 16, 2024
“ನಮ್ಮ ಮೌಲ್ಯಗಳು ಒಂದೇ ಆಗಿರುವಾಗ, ನಾವು ಈಗ ಹೊಸ ಅವತಾರದಲ್ಲಿ ಸಿಗಲಿದ್ದೇವೆ. ಹಿಂದೆಂದಿಗಿಂತಲೂ ಉತ್ತಮ ಸುದ್ದಿ ಪ್ರಯಾಣಕ್ಕೆ ಸಿದ್ಧರಾಗಿ. ಎಲ್ಲಾ ಹೊಸ ಡಿಡಿ ನ್ಯೂಸ್ ಅನ್ನು ಅನುಭವಿಸಿ! ” ಎಂದು DD News ತನ್ನ ಅಧಿಕೃತ ‘X’ ಹ್ಯಾಂಡಲ್‌ನಲ್ಲಿ ಅದರ ಹೊಸ ಲೋಗೋದ ವೀಡಿಯೊದೊಂದಿಗೆ ಪೋಸ್ಟ್ ಮಾಡಿದೆ. ಜೊತೆಗೆ “ಕೇವಲ ಧೈರ್ಯದ ಬರವಸೆಯಲ್ಲ..ವೇಗದ ಮತ್ತು ನಿಖರತೆಯ ಬರವಸೆ ; ಹಕ್ಕುಗಳ ಮತ್ತು ಸತ್ಯದ ಬರವಸೆ ; ಸಂವೇದನೆಯ ಹಾಗೂ ಸತ್ಯದ ಬರವಸೆ ; ಯಾಕೆಂದರೆ ಡಿಡಿ ನ್ಯೂಸ್ ನಲ್ಲಿ ಬಂದರೆ ಅದು ಸತ್ಯ! ಡಿಡಿ ನ್ಯೂಸ್ – ಭರೋಸಾ ಸಚ್ ಕಾ..” ಎಂದು ಹೇಳಿಕೊಂಡಿದ್ದಾರೆ.
2012 ಮತ್ತು 2014 ರ ನಡುವೆ ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (CEO) ಸೇವೆ ಸಲ್ಲಿಸಿದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (AITC) ರಾಜ್ಯಸಭಾ ಸಂಸದ ಜವಾಹರ್ ಸಿರ್ಕಾರ್ ಈ ಬೆಳವಣಿಗೆಯನ್ನು ಟೀಕಿಸಿದ್ದಾರೆ. ಪ್ರಸಾರ ಭಾರತಿ ದೂರದರ್ಶನ ಮತ್ತು ಆಲ್ ಇಂಡಿಯಾ ರೇಡಿಯೊ (AIR) ಮೇಲ್ವಿಚಾರಣೆ ಮಾಡುವ ಶಾಸನಬದ್ಧ ಸಂಸ್ಥೆಯಾಗಿದೆ.”ರಾಷ್ಟ್ರೀಯ ಬ್ರಾಡ್‌ಕಾಸ್ಟರ್ ತನ್ನ ಬ್ರ್ಯಾಂಡಿಂಗ್‌ಗಾಗಿ ಕೇಸರಿ ಬಣ್ಣವನ್ನು ಆಯ್ಕೆ ಮಾಡಿರುವುದು ಸರಿಯಲ್ಲ” ಎಂದು ಸಿರ್ಕಾರ್ ಸಾಮಾಜಿಕ ಮಾಧ್ಯಮ ಸೈಟ್ ‘X’ ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ “ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ನಾನು ಪರಿಗಣಿಸುತ್ತೇನೆ” ಎಂದು ಸಿರ್ಕಾರ್ ಹೇಳಿದ್ದಾರೆ, ಲೋಗೋ ಬದಲಾವಣೆ ಮಾಡಿರುವ ಸಮಯವನ್ನು ಪ್ರಶ್ನಿಸಿದ ಅವರು. “ಇದು ರಾಜ್ಯಗಳಲ್ಲಿ ಪ್ರಭಾವ ಬೀರುತ್ತದೆ ಎಂದು ಹೇಳಿದ್ದಾರೆ. ಕೇಸರಿ ಒಂದು ನಿರ್ಧಿಷ್ಟ ಧರ್ಮವನ್ನು ಸೂಚಿಸುವ ಬಣ್ಣವಾಗಿದ್ದು ಅದನ್ನು ದೂರದರ್ಶನ ಬಳಸಿಕೊಂಡಿದ್ದು ತಪ್ಪು” ಎಂದಿದ್ದಾರೆ.
As ex CEO of Prasar Bharati it hurts to see the saffronisation of Doordarshan’s logo
— just before elections!
It will influence voters, by overlaying the colour one religion and Sangh parivar colour with a ‘neutral’ Public Broadcaster and a biassed Govt/Regime! pic.twitter.com/g7m0PH9nMf— Jawhar Sircar (@jawharsircar) April 20, 2024
ದೂರದರ್ಶನದ ಈ ಬೆಳವಣಿಗೆಯ ಬಗ್ಗೆ ವಿರೋಧ ಪಕ್ಷಗಳು ಸಾಕಷ್ಟು ಟೀಕೆ ವ್ಯಕ್ತಪಡಿಸಿದ್ದು, ಹೊಸ ಸಂಸತ್‌ನಲ್ಲಿ ಒಳಗೆ ಎಲ್ಲಾ ಕಡೆ ಕೇಸರಿಕರಣ ಮಾಡಲಾಗಿದೆ. ಇದೀಗ ದೇಶದ ಜನರನ್ನು ದೂರದರ್ಶನದ ಮೂಲಕ ಕೇಸರಿಕರಣ ಮಾಡಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದ್ದಾರೆ.
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
1 day agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LIFE STYLE AND FASHION1 day ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ