Thursday, October 21, 2021

ಉಡುಪಿ: ಗಾಳ ಹಾಕಿ ಮೀನು ಹಿಡಿಯಲು ಹೋಗಿ ನದಿಗೆ ಬಿದ್ದು ಸಾವು: ಶವ ಪತ್ತೆ

ಉಡುಪಿ: ಶಿರ್ವದ ನಡಿಬೆಟ್ಟು ಆಣೆಕಟ್ಟು ಬಳಿ ಯುವಕನೋರ್ವ ಗಾಳ ಹಾಕಿ ಮೀನು ಹಿಡಿಯಲು ಹೋಗಿ ಆಕಸ್ಮಾತ್ತಾಗಿ ಜಾರಿಬಿದ್ದು ನೀರು ಪಾಲಾದ ಘಟನೆ ನಡೆದಿದೆ. ದಿಲೀಪ್ ಅವರ ಶವ ಇಂದು ಮಧ್ಯಾಹ್ನ ಆಣೆಕಟ್ಟು ಬಳಿ ಪತ್ತೆಯಾಗಿದೆ.
ಶಿರ್ವ ಮಟ್ಟಾರು ನಿವಾಸಿ ದಿಲೀಪ್‌ (30) ಎಂದು ಗುರುತಿಸಲಾಗಿದೆ. ಇವರು ಮೂಲತಃ ದೈವ ನರ್ತಕರಾಗಿದ್ದರು.


ಉಡುಪಿ ಅಗ್ನಿಶಾಮಕ ದಳದ ಠಾಣಾಧಿಕಾರಿ ಸತೀಶ್.ಎನ್ ನೇತೃತ್ವದಲ್ಲಿ ಗ್ರೂಪ್ ಲೀಡರ್ ಸತೀಶ್ ಮತ್ತು ಸಿಬ್ಬಂದಿ ಹಾಗೂ ಮಲ್ಪೆಯ ಮುಳುಗುತಜ್ಞ ಈಶ್ವರ್ ಸತತ 4 ಗಂಟೆ ಗಳ ಕಾಲ ಕಾರ್ಯಚರಣೆ ನಡೆಸಿ ಶವವನ್ನು ಪತ್ತೆಹಚ್ಚಿದ್ದಾರೆ.
ಘಟನಾ ಸ್ಥಳಕ್ಕೆ ಶಿರ್ವ ಪಿ ಎಸ್ ಐ ಶ್ರೀಶೈಲ್ ಮುರಾಗೋಡ್ ಮತ್ತು ಸಿಬಂದಿ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಅಗ್ನಿಶಾಮಕ ದಳದ ಶಂಕರ್, ಉಮೇಶ್, ವಿನಾಯಕ, ಚಂದ್ರಶೇಖರ, ಸುಜೇಶ್ ಮತ್ತು ಆದರ್ಶ್ ಪಾಲ್ಗೊಂಡಿದ್ದರು. ಈ ಸಂಬಂಧ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...