ಸುಳ್ಯದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತನ ಪತ್ನಿಯ ಮೃತದೇಹ ಇದಾಗಿದೆ ಎಂದು ಶಂಕಿಸಲಾಗಿದೆ.
ಸುಳ್ಯ : ಸುಳ್ಯದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತನ ಪತ್ನಿಯ ಮೃತದೇಹ ಇದಾಗಿದೆ ಎಂದು ಶಂಕಿಸಲಾಗಿದೆ.
ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಲ ಮೂಲದ ಇಮ್ರಾನ್ ಬೀರಮಂಗಲದಲ್ಲಿ ಬಾಡಿಗೆ ಕೊಠಡಿಯಲ್ಲಿ ಕೆಲವು ತಿಂಗಳಿನಿಂದ ವಾಸವಿದ್ದ.
ಈತ ತನ್ನ ಪತ್ನಿಯನ್ನು ಕೊಲೆ ಮಾಡಿ ಗೋಣಿಚೀಲದಲ್ಲಿ ತುಂಬಿಸಿ ಪರಾರಿಯಾಗಿರುವ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ.
ಇಮ್ರಾನ್ ಎರಡು ದಿನಗಳ ಹಿಂದೆ ಊರಿಗೆ ತೆರಳುತ್ತೇನೆ ಎಂದು ಹೊಟೇಲ್ ನವರಲ್ಲಿ ಹೇಳಿ ಊರಿಗೆ ತೆರಳಿದ್ದ ಎಂದು ಹೇಳಲಾಗಿದೆ.
ಸ್ಥಳೀಯರ ಪ್ರಕಾರ ಕೆಲ ದಿನಗಳ ಹಿಂದೆ ಆ ಪರಿಸರದಲ್ಲಿ ಕಿರುಚಿದ ಶಬ್ದ ಕೇಳಿತ್ತಂತೆ.
ಎರಡು ದಿನಗಳ ಹಿಂದೆ ಇಮ್ರಾನ್ ಊರಿಗೆಂದು ಹೊರಟು ಹೋಗಿದ್ದ.ಪತ್ನಿ ಇಲ್ಲದೆ ಒಬ್ಬನೇ ಹೋಗಿದ್ದ ಎನ್ನಲಾಗಿದೆ.
ಇದರಿಂದಾಗಿ ಪಕ್ಕದ ರೂಂನಲ್ಲಿ ವಾಸವಾಗಿದ್ದವರಿಗೆ ಸಂಶಯ ಮೂಡಿ ಆತ ಕೆಲಸ ಮಾಡುತ್ತಿದ್ದ ಹೊಟೇಲ್ ಮಾಲಕರಿಗೆ ವಿಷಯ ತಿಳಿಸಿದ್ದು, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸರು ಮನೆಗೆ ಬಂದು ರೂಂ ಬಾಗಿಲು ಒಡೆದು ನೋಡಿದಾಗ ಗೋಣಿಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.
ಇಮ್ರಾನ್ ಪತ್ನಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ಮೃತದೇಹ ತುಂಬಿಸಿಟ್ಟು ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ.
ಸುಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.