ಮಂಗಳೂರು (ಬೆಂಗಳೂರು) : ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಮೂಲ ವೇತನದ ಮೇಲೆ ಶೇಖಡಾ 3.75 ತುಟ್ಟಿಭತ್ಯೆ ಹೆಚ್ಚಳ (Dearness Relief) ಮಾಡಿ ಆದೇಶ ಹೊರಡಿಸಿದೆ. 2018ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರು , ನಿವೃತ್ತಿ ವೇತನ ಪಡೆಯುತ್ತಿರುವ ಮಾಜಿ ನೌಕರರು, ಕುಟುಂಬ ನಿವೃತ್ತಿ ವೇತನ ಪಡೆಯುತ್ತಿರುವವರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಯ ನಿವೃತ್ತಿ ವೇತನ ಪಡೆಯುತ್ತಿರುವ ಎಲ್ಲರಿಗೂ ಈ ತುಟ್ಟಿಭತ್ಯೆಯ ಲಾಭ ಸಿಗಲಿದೆ.
ಅಷ್ಟೇ ಅಲ್ಲದೆ ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಇದರ ಲಾಭ ಸಿಗಲಿದೆ. ಆದರೆ ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳಿಗೆ ಇದು ಅನ್ವಯ ಆಗದೇ ಇದ್ದು, ಇದಕ್ಕೆ ಸಂಬಂಧಿಸಿದಂತೆ ಹೊಸ ಆದೇಶ ಹೊರಡಿಸುವುದಾಗಿ ಸರ್ಕಾರ ಹೇಳಿದೆ. ತುಟ್ಟಿಭತ್ಯೆ ಎಪ್ರಿಲ್ ತಿಂಗಳಿನಲ್ಲಿ ಮಾಸಿಕ ವೇತನದೊಂದಿಗೆ ಎಲ್ಲಾ ನೌಕರರು ಹಾಗೂ ನಿವೃತ್ತಿ ವೇತನ ಪಡೆಯುವರ ಕೈ ಸೇರಲಿದೆ.
ಮಂಗಳೂರು/ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ನಿಧ*ನ ಹೊಂದಿದ್ದಾರೆ. ಅವರು ಕನ್ನಡ ಸಿನಿಮಾ, ಧಾರವಾಹಿ ಹಾಗೂ ರಂಗಭೂಮಿಯಲ್ಲಿ ನಟಿಸಿದ್ದರು.
ಸರಿಗಮ ವಿಜಿ ಅವರ ಮೂಲ ಹೆಸರು ವಿಜಯ್ ಕುಮಾರ್. ಆದರೆ ಅವರ ಹೆಸರಿನ ಮುಂದೆ ‘ಸರಿಗಮ’ ಸೇರಿಕೊಂಡಿದ್ದು ಹೇಗೆ ಎನ್ನುವ ಕುತೂಹಲ ಹಲವರಲ್ಲಿ ಇದೆ.
‘ಸರಿಗಮ ವಿಜಿ’ ಎಂದೇ ಕರೆಯಲ್ಪಡುವ ನಟ ವಿಜಯ್ ಕುಮಾರ್ (76) ಅವರು ಬುಧವಾರ (ಜ.15) ನಿಧ*ನರಾದರು. ಅವರಿಗೆ ಇಬ್ಬರು ಪುತ್ರರು ಇದ್ದಾರೆ. ಶ್ವಾಸಕೋಶದ ಸೋಂಕು, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ವಾರದ ಹಿಂದೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ 9:45ರ ಸುಮಾರಿಗೆ ಅವರು ನಿಧ*ನ ಹೊಂದಿದ್ದಾರೆ.
ಬೆಂಗಳೂರಿನ ವಿಮಾನಪುರದಲ್ಲಿ (ಎಚ್ಎಎಲ್ ಪ್ರದೇಶ) ಜನಿಸಿದ ವಿಜಯ್ ಕುಮಾರ್, ನಾಟಕದ ನಂಟು ಇಟ್ಟುಕೊಂಡು ಸಿನಿಮಾಲೋಕ ಪ್ರವೇಶಿಸಿದವರು. ‘ಬೆಳುವಲದ ಮಡಿಲಲ್ಲಿ’ ಚಿತ್ರದಲ್ಲಿ ಸಹಾಯಕ ನಿರ್ದೇಶಕನಾಗಿ, ನಟನಾಗಿ ಮೊದಲ ಹೆಜ್ಜೆ ಇಟ್ಟ ಅವರು ಎನ್ ಜಿಇಎಫ್ ಕಾರ್ಖಾನೆಯಲ್ಲಿ ಕಾರ್ಮಿಕನಾಗಿ ದುಡಿದವರು. ಈ ಅವಧಿಯಲ್ಲೇ ಅವರು ‘ಸಂಸಾರದಲ್ಲಿ ಸರಿಗಮ’ ಎಂಬ ನಾಟಕ ಬರೆದರು.
ಇದು ಕರ್ನಾಟಕದ ಹಲವು ಜಿಲ್ಲೆಗಳು ಸೇರಿದಂತೆ, ಹೈದರಾಬಾದ್, ಚೆನ್ನೈ, ದೆಹಲಿಗಳಲ್ಲಿಯೂ ಆ ನಾಟಕ ಪ್ರದರ್ಶನವಾಗಿತ್ತು. ಸುಮಾರು 1390 ಪ್ರದರ್ಶನಗಳಲ್ಲಿ ‘ಸಂಸಾರದಲ್ಲಿ ಸರಿಗಮ’ ನಾಟಕ ಕಂಡಿತ್ತು. ಇದೇ ಕಾರಣಕ್ಕೆ ವಿಜಿ ಅವರ ಹೆಸರಿನ ಮುಂದೆ ‘ಸರಿಗಮ’ ಸೇರಿಕೊಂಡು ಸರಿಗಮ ವಿಜಿ ಎಂದೇ ಜನಪ್ರಿಯರಾದರು.
ಹಲವು ದಿಗ್ಗಜ ನಟರ ಜೊತೆ ತೆರೆಹಂಚಿಕೊಂಡಿದ್ದ ವಿಜಿ ಅವರು, ಹಾಸ್ಯ ಪಾತ್ರಗಳಲ್ಲಿ ಮಿಂಚಿದ್ದರು. ಹಲವು ಧಾರವಾಹಿಗಳಲ್ಲೂ ಅವರು ಬಣ್ಣಹಚ್ಚಿದ್ದಾರೆ. 400ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅವರು 100ಕ್ಕೂ ಅಧಿಕ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
ಮಂಗಳೂರು/ಬೆಂಗಳೂರು: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬರು ಸಾ*ವನ್ನಪ್ಪಿದ ಘಟನೆ ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿರುವುದಾಗಿ ಆರೋಪ ಕೇಳಿಬಂದಿದೆ.
ಕಡೂರು ತಾಲೂಕಿನ ಗರ್ಜೆ ಗ್ರಾಮದ ನಿವಾಸಿ ಅನುಷಾ ಮೃ*ತ ಬಾಣಂತಿ ಎಂದು ಗುರುತಿಸಲಾಗಿದೆ.
ಒಂದು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಅನುಷಾ, ಅ*ನಾರೋಗ್ಯದಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾದ ವೇಳೆ ಚಿಕಿತ್ಸೆ ಫಲಿಸದೇ ಮೃ*ತಪಟ್ಟಿದ್ದಾರೆ. ಅನುಷಾಗೆ ತರೀಕೆರೆಯ ರಾಜ್ ನರ್ಸಿಂಗ್ ಹೋಂನಲ್ಲಿ ಸಹಜ ಹೆರಿಗೆ ಆಗಿತ್ತು. ನಂತರ, ಸ್ಕ್ಯಾನಿಂಗ್ ಮಾಡಿ ಹೊಟ್ಟೆಯಲ್ಲಿ ಕಲ್ಲು ಇದೆ ಎಂದು ವೈದ್ಯರು ತಿಳಿಸಿದ್ದರು. ಅದೇ ವರದಿ ಆಧಾರದ ಮೇಲೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ವೈದ್ಯರು ಎ*ಡವಟ್ಟು ಮಾಡಿದ್ದಾರೆಂದು ಕುಟುಂಬದವರು ಆರೋಪ ಮಾಡಿದ್ದಾರೆ.
ಶಸ್ತ್ರಚಿಕಿತ್ಸೆ ವೇಳೆ ಕರುಳಿಗೆ ಹಾನಿಯಾಗಿತ್ತು, ಆದರೆ, ಆ ವಿಚಾರವನ್ನು ವೈದ್ಯರು ಮುಚ್ಚಿಟ್ಟಿದ್ದಾರೆ. ಶಸ್ತ್ರಚಿಕಿತ್ಸೆ ನಂತರ ಮನೆಗೆ ತೆರಳಿದಾಗ ಬಾಣಂತಿಯ ಕೈ ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಹೀಗಾಗಿ ಆಕೆಯನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರಿಶೀಲಿಸಿದ ವೈದ್ಯರು, ಆರೋಗ್ಯ ಸಹಜವಾಗಿದೆ. ಏನೂ ಸಮಸ್ಯೆ ಇಲ್ಲ ಎಂದಿದ್ದರು. ಹೀಗಾಗಿ ಮತ್ತೆ ಸ್ಥಳೀಯ ಆಸ್ಪತ್ರೆಗೆ ಅನುಷಾರನ್ನು ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು, ಅನುಷಾಗೆ ಕಾ*ಮಾಲೆ ಇದೆ ಎಂದಿದ್ದರು. ಸ್ಥಳೀಯ ಆಸ್ಪತ್ರೆ ವೈದ್ಯರ ಸಲಹೆಯಂತೆ ಅನುಷಾರನ್ನು ಕುಟುಂಬಸ್ಥರು ಬೆಂಗಳೂರಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫ*ಲಿಸದೆ ಮೃ*ತಪಟ್ಟಿದ್ದಾರೆ. ಸ್ಥಳೀಯ ಪೊಳೀಸ್ ಠಾಣೆಯಲ್ಲಿ ಕುಟುಂಬದವರು ನೀಡಿದ ದೂ*ರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು/ಬೆಂಗಳೂರು: ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್, ಆರ್ ಸಿಬಿ ತಂಡದ ಆಟಗಾರ ವಿರಾಟ್ ಕೊಹ್ಲಿಗೆ ಬಿಬಿಎಂಪಿ ಶಾಕ್ ಕೊಟ್ಟಿದೆ.
ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದಲ್ಲಿರುವ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ಬಾರ್ (One8 Commune) & ರೆಸ್ಟೋರೆಂಟ್‌ಗೆ ಬಿಬಿಎಂಪಿ ಬಿಸಿ ಮುಟ್ಟಿಸಿದೆ.
ಅಗ್ನಿ ಶಾಮಕ ದಳದಿಂದ ನಕ್ಷೆ, ಪ್ರಮಾಣ ಪತ್ರ ಎನ್‌ಒಸಿ ಪರವಾನಿಗೆ ಪಡೆಯದೇ ಕಾನೂನು ಉಲ್ಲಂಘನೆ ಮಾಡಿದ್ದಕ್ಕೆ ನೋಟಿಸ್ ನೀಡಿದೆ. ಸಾಮಾಜಿಕ ಕಾರ್ಯಕರ್ತ ಹೆಚ್.ಎಂ ವೆಂಕಟೇಶ್ ಅನ್ನೋರು ಈ ಬಗ್ಗೆ ಬಿಬಿಎಂಪಿಗೆ ದೂರು ಕೊಟ್ಟಿದ್ದರು. ಇದನ್ನು ಆಧರಿಸಿ ಶಾಂತಿನಗರದ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಈಗಾಗಲೇ ಒಂದು ಬಾರಿ ನೋಟಿಸ್ ನೀಡಿದ್ರೂ ಕೊಹ್ಲಿ ಮಾಲೀಕತ್ವದ ಬಾರ್ ಆಂಡ್ ರೆಸ್ಟೋರೆಂಟ್‌ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಮತ್ತೆ ನೋಟಿಸ್ ಜಾರಿ ಮಾಡಿ, ಲಿಖಿತ ರೂಪದ ವಿವರಣೆ ಕೇಳಿದೆ. ಉತ್ತರ ನೀಡದೇ ಇದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.