Connect with us

    BANTWAL

    ವಿಟ್ಲ: ಕೃಷಿ ಫಾರ್ಮ್‌ಹೌಸ್‌ನ ಕೆರೆಗೆ ಬಿದ್ದು ವೈದ್ಯೆ ಸಾವು

    Published

    on

    ವಿಟ್ಲ: ಇಲ್ಲಿನ ಅಡ್ಯನಡ್ಕದ ಫಾರ್ಮ್‌ವೊಂದಕ್ಕೆ ಅತಿಥಿಯಾಗಿ ಬಂದ ಮಹಿಳೆಯೊಬ್ಬಳು ಏಕಾಂಗಿಯಾಗಿ ಸಾಹಸಕ್ರೀಡೆಗಳನ್ನು ಆಡುವ ಕೆರೆಗೆ ಬಿದ್ದು, ಗಂಭೀರ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿದೆ.


    ಮಂಗಳೂರು ಮೂಲದ ವೈದ್ಯೆ ನೇಝೀ ಫೆರ್ನಾಂಡೀಸ್ (32) ಸಾವನ್ನಪ್ಪಿದ್ದಾರೆ.
    ಎರಡು ದಿನಗಳ ಹಿಂದೆ ಫಾರ್ಮ್‌ಗೆ ಆಗಮಿಸಿದ ಈಕೆ ಕೆರೆಯ ಸಮೀಪಕ್ಕೆ ಒಂಟಿಯಾಗಿ ಹೋಗಿದ್ದಾರೆನ್ನಲಾಗಿದೆ.

    ತುಂಬಾ ಸಮಯವಾದರೂ ಬಾರದ ಹಿನ್ನೆಲೆ ಕೆರೆಯಲ್ಲಿ ಹುಡುಕಾಡಿ ನೀರಿನಡಿಗೆ ಹೋಗಿದ್ದ ಈಕೆಯ ದೇಹವನ್ನು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದರು.
    ವಿಟ್ಲ ಪೊಲೀಸ್ ನಿರೀಕ್ಷಕ ನಾಗರಾಜ್ ಎಚ್. ಇ. ಅವರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ಕೆರೆಯಲ್ಲಿ ಶೋಧ
    ಮಹಿಳೆ ಒಂಟಿಯಾಗಿ ಬಂದು ಬಟ್ಟೆ ಹಾಗೂ ಪಾದರಕ್ಷೆಯನ್ನು ಕಟ್ಟೆಯ ಮೇಲೆ ಇಟ್ಟು ಕೆರೆಯಲ್ಲಿ ನೀರಿನಾಟಕ್ಕೆ ಇಳಿದಿರಬಹುದೆನ್ನಲಾಗಿದೆ.

    ಈ ಸಂದರ್ಭ ನೀರಿನ ಒಳಗೆ ಮುಳುಗಿದ್ದು, ಸಮಯವಾದರೂ ಮರಳಿ ಬಾರದ ಸಂದರ್ಭ ಇವರು ಕೆರೆಯ ಕಡೆಗೆ ಹೋಗುವುದನ್ನು ಗಮನಿಸಿದ ಈಜು ಕಲಿಯುವ ವಿದ್ಯಾರ್ಥಿಗಳು ಕೆರೆಯ ಬಳಿ ಬಂದು ಹುಡುಕಾಡಿದಾಗ ದೇಹ ಪತ್ತೆಯಾಗಿದೆ.
    ಈ ಹಿಂದೆ ಬಾಲಕ ಸಾವು
    ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ನಿರ್ಮಾಣವಾದ ಈ ಕೆರೆಯಲ್ಲಿ ಸಾಹಸ ಕ್ರೀಡೆಗಳನ್ನು ನಡೆಸಲಾಗುತ್ತದೆ.

    ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಈ ಭಾಗದಲ್ಲಿ ಬಂದು ಠಿಕ್ಕಾಣಿಯೂ ಹೂಡುತ್ತಿರುತ್ತಾರೆ. ಕೆಲವು ವರ್ಷಗಳ ಹಿಂದೆ ಬಾಲಕನೊಬ್ಬ ಇದೇ ಕೆರೆಯಲ್ಲಿ ಬಿದ್ದು ಮೃತಪಟ್ಟ ಘಟನೆ ನಡೆದಿತ್ತು.

    Click to comment

    Leave a Reply

    Your email address will not be published. Required fields are marked *

    BANTWAL

    ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು

    Published

    on

    ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.

    ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    Continue Reading

    BANTWAL

    ಮಂಗಳೂರು: ಯುವತಿ ವಿಚಾರದಲ್ಲಿ ಯುವಕನಿಗೆ ಥಳಿತ; ಆರೋಪಿಗಳು ಅರೆಸ್ಟ್

    Published

    on

    ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್‌ ಸಪ್ವಾನ್( 25), ಮಹಮ್ಮದ್‌ ರಿಜ್ವಾನ್‌ (25), ಇರ್ಪಾನ್‍(27), ಅನೀಸ್‍ ಅಹಮ್ಮದ್‍ (19), ನಾಸೀರ್‍ (27), ಇಬ್ರಾಹಿಂ, ಶಾಕೀರ್‍ (18)ನನ್ನು ಬಂಧಿಸಲಾಗಿದೆ.

    ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್‍ ಮುಸ್ತಾಫ್‍ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.

     

    ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ

     

    ಮಹಮ್ಮದ್‍ ಮುಸ್ತಾಫ್‍ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್‍ ಮುಸ್ತಾಫ್‍ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.

    Continue Reading

    BANTWAL

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕ ಆತ್ಮಹ*ತ್ಯೆ

    Published

    on

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.

    ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending