Sunday, December 4, 2022

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.

ಕೊತ್ತಲಮಜಲು ನಿವಾಸಿ ದಿ| ವಿಶ್ವನಾಥ ಆಚಾರ್ಯ ರವರ ಪುತ್ರ ಪ್ರಸಾದ್ ಆಚಾರ್ಯ ರವರು ವಿಟ್ಲದ ಕೇಪು ಕುಕ್ಕೆಬೆಟ್ಟುವಿನಲ್ಲಿ ಸಂಬಂಧಿಕರೋರ್ವರ ಮನೆಯಲ್ಲಿದ್ದು ಚಿನ್ನದ ಕೆಲಸ ಮಾಡುತ್ತಿದ್ದರು.

ಡಿ.23ರ ತಡರಾತ್ರಿ ಮನೆಯ ಟೆರೇಸ್ ಮೇಲೆ ನಡೆದಾಡಿಕೊಂಡು ಫೋನ್ ನಲ್ಲಿ ಮಾತನಾಡುತ್ತಿದ್ದ  ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ತಕ್ಷಣ ವಿಟ್ಲದ ಆಸ್ಪತ್ರೆಗೆ ಸಾಗಿಸಲಾಯಿತಾದರೂದಾರಿ ಮಧ್ಯೆ ಅಸು ನೀಗಿದ್ದಾರೆ.

ತೀರಾ ಬಡ ಕುಟುಂಬದವರಾಗಿರುವ ಇವರು, ತಾಯಿ ಕುಸುಮಾ, ಸಹೋದರಿಯರಾದ ಪವಿತ್ರಾ, ರಾಧಿಕಾ, ಹರ್ಷಲಾ, ರೇಖಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

ಮೃತ ಯುವಕನ ಮರಣೋತ್ತರ ಪರೀಕ್ಷೆಯನ್ನು ದೇರಳಕಟ್ಟೆ ಆಸ್ಪತ್ರೆಯಲ್ಲಿ ನಡೆಸಲಾಯಿತು. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics