Friday, August 12, 2022

ಟೈಲರ್ ಕನ್ನಯ್ಯ ಲಾಲ್ ಕೊಲೆಗೈದವರಿಗೆ ಮರಣದಂಡನೆ ವಿಧಿಸಿ: ಶಾಸಕ ಕಾಮತ್‌ ಆಗ್ರಹ

ಮಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಬಡ ಟೈಲರ್ ಕನ್ನಯ್ಯ ಲಾಲ್ ಹತ್ಯೆಗೈದು ಪ್ರಧಾನಮಂತ್ರಿಗಳಿಗೆ ಬೆದರಿಕೆಯೊಡ್ಡಿದ ಹಂತಕರಿಗೆ ಮರಣ ದಂಡನೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಕುಕೃತ್ಯ ಎಸಗುವವರಿಗೆ ಎಚ್ಚರಿಕೆಯ ಸಂದೇಶ ನೀಡಬೇಕೆಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ.


ಮತಾಂಧ ಮನೋಭಾವ ದೇಶದ ಆಂತರಿಕ ಭದ್ರತೆಗೆ ಸವಾಲಾಗಿ ಪರಿಣಮಿಸಿದೆ. ಇಂತಹ ಭಯೋತ್ಪಾದಕ ಕೃತ್ಯಗಳನ್ನು ರಾಜಕೀಯ ದೃಷ್ಟಿಯಿಂದ ಖಂಡಿಸದಿರುವ ನಾಯಕರ ಓಲೈಕೆಯ ರಾಜಕಾರಣದಿಂದ ಇಂತಹ ಕೃತ್ಯಗಳು ಮರುಕಳಿಸುತ್ತಿವೆ ಎಂದು ಹೇಳಿದ್ದಾರೆ.
ಕನ್ನಯ್ಯ ಲಾಲ್ ಸಾವಿಗೆ ರಾಜಸ್ಥಾನ ಸರಕಾರವೇ ನೇರ ಕಾರಣ.

ಜೀವ ಬೆದರಿಕೆಯಿರುವ ಬಗ್ಗೆ ಕನ್ನಯ್ಯ ಲಾಲ್ ದೂರು ನೀಡಿದ್ದರೂ ಸೂಕ್ತ ಭದ್ರತೆ ಕಲ್ಪಿಸದ ರಾಜಸ್ಥಾನ ಸರಕಾರ ಘಟನೆಗೆ ನೇರ ಹೊಣೆಯಾಗಿದೆ. ಹಿಂದುಗಳ ಜೀವವನ್ನು ತೃಣದಂತೆ ಕಾಣುವ ಕಾಂಗ್ರೇಸ್ ನಾಯಕರು ಈ ಘಟನೆಗೆ ಜವಬ್ದಾರರು ಎಂದು ಶಾಸಕ ಕಾಮತ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

Hot Topics

ದುಬೈನಿಂದ ಬಂದಿಳಿದ ಓರ್ವನ ನಿಕ್ಕರ್‌ನಲ್ಲಿತ್ತು 43 ಲಕ್ಷದ ಚಿನ್ನ: ಮತ್ತೋರ್ವನಲ್ಲಿ 5 ಲಕ್ಷ ರೂ ಮೌಲ್ಯದ ಫಾರಿನ್‌ ಕರೆನ್ಸಿ..!

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಹಾಗೂ ವಿದೇಶಿ ಕರೆನ್ಸಿ ಸಾಗಾಟ ಪ್ರಕರಣಗಳು ನಡೆದಿವೆದುಬೈಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಮಂಗಳೂರಿಗೆ ಬಂದಿಳಿದ ಕಾಸರಗೋಡಿನ ಪ್ರಯಾಣಿಕರೊಬ್ಬರು ಒಳ...

ಆದಾಯಕ್ಕಿಂತ ಅಧಿಕ ಆಸ್ತಿ: ಮಂಗಳೂರು ಮೂಲದ ಸರ್ಕಾರಿ ಅಧಿಕಾರಿಗೆ 3 ವರ್ಷ ಜೈಲು, 50 ಲಕ್ಷ ದಂಡ

ಮಂಗಳೂರು: ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಗಳಿಸಿದ್ದ ಚಿಕ್ಕಮಗಳೂರು ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕರ ಮೇಲಿನ ಆರೋಪಕ್ಕೆ ಸಂಬಂಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು3 ವರ್ಷ 6...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿಗಳು 5 ದಿನ ಪೊಲೀಸ್ ಕಸ್ಟಡಿಗೆ

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಬಂಧಿತರಾದ ಮೂವರು ಮುಖ್ಯ ಆರೋಪಿಗಳನ್ನು ಸುಳ್ಯ ನ್ಯಾಯಾಲಯ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.ಬಂಧಿತ ಆರೋಪಿಗಳಾದ ಸುಳ್ಯದ ಶಿಹಾಬುದ್ದೀನ್ (33), ರಿಯಾಝ್ ಅಂಕತ್ತಡ್ಕ (27),...