DAKSHINA KANNADA
ಡಿ.14ರಿಂದ 17ರವರೆಗೆ 29ನೇ ವರ್ಷದ ‘ಆಳ್ವಾಸ್ ವಿರಾಸತ್ 2023’ ಅನಾವರಣ
ಮೂಡುಬಿದಿರೆ: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ವೈಭವದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್’ಗೆ ಈ ವರ್ಷ 29ನೇ ವರ್ಷವಾಗಿದ್ದು, ಅಪೂರ್ವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ, ಸಂಸ್ಕೃತಿ ಪ್ರಿಯರಿಗೆ ರಸದೌತಣವನ್ನು ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಈಗಾಗಲೇ ಸಿದ್ಧತೆಯಲ್ಲಿ ತೊಡಗಿದ್ದು, ‘ಆಳ್ವಾಸ್ ವಿರಾಸತ್ 2023’ ಅತ್ಯಂತ ಯಶಸ್ವಿ ಉತ್ಸವವಾಗಿಸುವಲ್ಲಿ ಪ್ರಯತ್ನಿಸಲಾಗುತ್ತಿದೆ.
ಆಳ್ವಾಸ್ ವಿರಾಸತ್ 2023ಕ್ಕೆ ದಿನಾಂಕ ನಿಗದಿಯಾಗಿದ್ದು ಡಿ. 14ರಂದು ಪ್ರಾರಂಭವಾಗಿ 17 ರಂದು ಮುಕ್ತಾಯಗೊಳ್ಳಲಿದೆ. ಗುರುವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳು ಸೇರಿ ನಾಲ್ಕು ದಿನಗಳ ಕಾಲ ಈ ಸಾಂಸ್ಕೃತಿಕ ಉತ್ಸವವು ಜರುಗಲಿದೆ. ಪ್ರತಿದಿನ ಮುಸ್ಸಂಜೆ 6 ಗಂಟೆಗೆ ಪ್ರಾರಂಭವಾಗುವ ಈ ಉತ್ಸವವು ರಾತ್ರಿ 9.30ಕ್ಕೆ ಮುಕ್ತಾಯಗೊಳ್ಳಲಿದೆ. ಪುತ್ತಿಗೆ ವಿವೇಕಾನಂದ ನಗರದಲ್ಲಿರುವ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಆಳ್ವಾಸ್ ವಿರಾಸತ್ ಕಾರ್ಯಕ್ರಮಗಳು ನಡೆಯಲಿದೆ. 50 ಸಾವಿರಕ್ಕಿಂತ ಹೆಚ್ಚಿನ ಪ್ರೇಕ್ಷಕರು ಏಕಕಾಲದಲ್ಲಿ ಕಾರ್ಯಕ್ರಮ ವೀಕ್ಷಣೆಗೆ ಇಲ್ಲಿ ಆಸನದ ವ್ಯವಸ್ಥೆ ಮಾಡಲಾಗಿದೆ. ಡಿಸೆಂಬರ್ 14, 15, 16 ಮತ್ತು 17ನೇ ದಿನಾಂಕಗಳಂದು ನಾಲ್ಕು ದಿನಗಳ ಕಾಲ ನಡೆಯುವ ರಾಷ್ಟೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ 2023ಕ್ಕೆ ಎಲ್ಲರೂ ಪಾಲ್ಗೊಳ್ಳಬೇಕೆಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ವಿನಂತಿಸಿದ್ದಾರೆ.
DAKSHINA KANNADA
Surathkal: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ- ವಿದ್ಯಾರ್ಥಿನಿಯರು ಗಂಭೀರ..!
ಸುರತ್ಕಲ್: ರಸ್ತೆ ದಾಟುತ್ತಿದ್ದ ವೇಳೆ ರಾಂಗ್ ಸೈಡ್‌ನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ಜಂಕ್ಷನ್ ಬಳಿ ನಡೆದಿದೆ.
ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿನಿ ಗಾಯಗೊಂಡವರು ಎಂದು ತಿಳಿದು ಬಂದಿದೆ. ಇನ್ನೋರ್ವಳ ಸ್ಥಿತಿ ಚಿಂತಾಜನಕವಾಗಿದ್ದು. ಇನ್ನೊಬ್ಬಳಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಅಗಮಿಸಿದ ಸುರತ್ಕಲ್ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
BANTWAL
ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!
ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.
ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.
ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BELTHANGADY
ದ.ಕ ದಲ್ಲಿ ಭಾರಿ ಮಳೆ: ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿದ್ದ ಅಂಗಡಿಗಳಿಗೆ ಹಾನಿ..!!
ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ.
ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ. ಮಳೆಗೆ ಅಂಗಡಿಯೊಳಗಿದ್ದ ಕೆಲವು ವಸ್ತುಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ.
ಧರ್ಮಸ್ಥಳ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ವಸ್ತು ಪ್ರದರ್ಶನಕ್ಕೆ ಬಹಳ ಸಮಸ್ಯೆ ಆಗಿದೆ. ಸಭಾಂಗಣದ ಬಳಿ ಹಾಕಿದ್ದ ಕುರ್ಚಿಗಳು ಒದ್ದೆಯಾಗಿದೆ.
- FILM5 days ago
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
- FILM4 days ago
ನಮೃತಾ ಗೌಡ ಆವಾಜ್ ಗೆ ಸಂಗೀತಾ ಕಣ್ಣೀರು
- bengaluru7 days ago
Film: ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಟಾಲಿವುಡ್ ಗೆ ಎಂಟ್ರಿ
- bengaluru5 days ago
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್