BANTWAL
ಡಿ.22, 23 : ಪೆರಾಜೆ ಮಾಣಿಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಕ್ಯಾಂಪಸ್ ಉದ್ಘಾಟನೆ, ವಾರ್ಷಿಕೋತ್ಸವ
Published
11 months agoon
By
Adminಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನೂತನ ಕ್ಯಾಂಪಸ್ನ ಉದ್ಘಾಟನಾ ಸಮಾರಂಭ ಮತ್ತು ವಾರ್ಷಿಕ ದಿನ ಕಾರ್ಯಕ್ರಮವು ಡಿ.22 ಮತ್ತು 23 ರಂದು ಬಾಲವಿಕಾಸ ಸಭಾಂಗಣದಲ್ಲಿ ನಡೆಯಲಿದೆ.
ಡಿ.22 ರಂದು ನಡೆಯುವ ಸಮಾರಂಭ ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಉದ್ಘಾಟನೆ ಮಾಡಲಿದ್ದಾರೆ. ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷರು ಪ್ರಹ್ಲಾದ ಶೆಟ್ಟಿ ಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸತ್ತಿನ ಸದಸ್ಯ ನಳಿನ್ ಕುಮಾರ್ ಕಟೀಲ್, ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ , ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಕರ್ನಾಟಕ ಮಾಜಿ ಮಂತ್ರಿ, ಸಚಿವ ರಮಾನಾಥ ರೈ, ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಎಂ. ಪೆರಾಜೆ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಇಬ್ರಾಹಿಂ ಕೆ ಮಾಣಿ, ಮಂಗಳೂರಿನ ಶಕ್ತಿ ಶಿಕ್ಷಣ ಸಂಸ್ಥೆಯ ಮುಖ್ಯ ಸಲಹೆಗಾರ ರಮೇಶ.ಕೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.
ಯಮುನಾ ಹೋಮ್ಸ್ ಡಿಸೆನ್ಸ್ ವ್ಯವಸ್ಥಾಪಕ ಮತ್ತು ನಿರ್ದೇಶಕ ಪುರುಶೋತ್ತಮ ಆರ್ ಶೆಟ್ಟಿ, ಬೆಂಗಳೂರಿನ ವಾಸ್ತುಶಿಲ್ಪಿ ನಿರ್ದೇಶಕ ಸೂರಾಜ್ ಅಂಚನ್, ಎಸ್ಎಸ್ ಇಂಜಿನಿಯರಿಂಗ್ ಮತ್ತು ಸಲಹೆಗಾರ ಸಂತೋಷ್ ಶೆಟ್ಟಿ ಗೌರವ ಅತಿಥಿಗಳಾಗಿ ಭಾಗವಹಿಸಲಿರುವರು.
ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಬಿಗ್ ಬಾಸ್ ಖ್ಯಾತಿಯ ಧ್ವನಿ ಕಲಾವಿದ, ನಟ, ನಿರೂಪಕ ಬಡಕ್ಕಿಲ ಪ್ರದೀಪ್ ಅವರಿಗೆ ‘ಬಾಲವಿಕಾಸ ರತ್ನ ಅವಾರ್ಡ್ 2023 ‘ ನೀಡಿ ಗೌರವಿಸಲಿದ್ದಾರೆ.
ಡಿ.23ರಂದು ನಡೆಯುವ ಕಾರ್ಯಕ್ರಮದಲ್ಲಿ ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷರು ಪ್ರಹ್ಲಾದ ಶೆಟ್ಟಿ ಜೆ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಖಾಸಗಿ ಮಾಧ್ಯಮದ ಸಂಸ್ಥಾಪಕ ವಾಲ್ಟರ್ ನಂದಳಿಕೆ, ರೋಹನ್ ಕಾರ್ಪೋರೇಷನ್ ಸಂಸ್ಥಾಪಕ, ಅಧ್ಯಕ್ಷ ರೋಹನ್ ಮೊಂತೇರೊ, ಸೂರಜ್ ಶಿಕ್ಷಣ ಸಂಸ್ಥೆಯ ಮತ್ತು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾ.ಮಂಜುನಾಥ ರೇವಣಕರ್, ದೇರಳಕಟ್ಟೆಯ ರತ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ ರವೀಂದ್ರ ಶೆಟ್ಟಿ ಉಳಿದೊಟ್ಟು, ಜನಪ್ರಿಯ ಫೌಂಡೇಷನ್ ಅಧ್ಯಕ್ಷ ಡಾ.ವಿ.ಕೆ. ಅಬ್ದುಲ್ ಬಶೀರ್, ಕಾಂಚೂರು ಇಸ್ಲಾಮಿಕ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಹಜಿ ಯು.ಕೆ ಮೋನು, ಮೈಸೂರು ಮಲಯದ ಕಾಲೇಜು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಪಾಂಡುರಂಗ ಕೆಎಎಸ್, ದಕ್ಷಣ ಕನ್ನಡ ಜಿಲ್ಲೆಯ ಡಿಡಿಪಿಐ ಸಯಾನಂದ ರಾಮಚಂದ್ರ ನಾಯ್ಕ್ , ಬಂಟ್ವಾಳ ವಲಯ ಶಿಕ್ಷಣಾಧಿಕಾರಿ ಮಂಜುನಾಥ ಎಂ.ಜಿ ಉಪಸ್ಥಿತರಿರುವರು. ಬಾಲವಿಕಾಸ ಟ್ರಸ್ಟ್ ಮತ್ತು ಆಡಳಿತ ಮಂಡಳಿಯ ಅಧ್ಯಕ್ಷ ಪ್ರಹ್ಲಾದ ಶೆಟ್ಟಿ, ಆಡಳಿತ ಅಧಿಕಾರಿ ರವೀಂದ್ರ ದರ್ಬೆ, ಮುಖ್ಯೋಪಾಧ್ಯಯಿನಿ ವಿಜಯಲಕ್ಷಮಿ ವಿ. ಶೆಟ್ಟಿ, ಪಿಟಿಎ ಅಧ್ಯಕ್ಷರು ಮತ್ತು ಸದಸ್ಯ ಕಸ್ತೂರಿ ಶೆಟ್ಟಿ, ಹಳೆಯ ವಿದ್ಯಾರ್ಥಿ ಸಂಘ, ಶಾಲಾ ವ್ಯವಸ್ಥಾಪಕರು, ಮಾಣಿ ವಿದ್ಯಾನಗರ ಪೆರಾಜೆ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಈ ಎರಡು ದಿನದ ಕಾರ್ಯಕ್ರಮದಲ್ಲಿ ಶಾಲೆಯ ಆವರಣದಲ್ಲಿ ಫುಡ್ ಪೆಸ್ಟಿವಲ್ ನಡೆಯಲಿದೆ.
ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.
ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್ ಸಪ್ವಾನ್( 25), ಮಹಮ್ಮದ್ ರಿಜ್ವಾನ್ (25), ಇರ್ಪಾನ್(27), ಅನೀಸ್ ಅಹಮ್ಮದ್ (19), ನಾಸೀರ್ (27), ಇಬ್ರಾಹಿಂ, ಶಾಕೀರ್ (18)ನನ್ನು ಬಂಧಿಸಲಾಗಿದೆ.
ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.
ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ
ಮಹಮ್ಮದ್ ಮುಸ್ತಾಫ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್ ಮುಸ್ತಾಫ್ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.
ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.
ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LIFE STYLE AND FASHION1 day ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ