Thursday, September 29, 2022

ತುಳುನಾಡ ಪ್ರದೇಶವನ್ನು ಟೆಂಪಲ್ ಸಿಟಿ ಘೋಷಿಸಿ : ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಗೆ ಬಹುಭಾಷ ನಟ ತುಳುವ ಸುಮನ್ ಮನವಿ..!

ಹೈದ್ರಾಬಾದ್ :  ತೆಲುಗು, ತಮಿಳು ಮತ್ತು ಕನ್ನಡ ಚಲನಚಿತ್ರಗಳಲ್ಲಿ ಅತ್ಯಂತ ಜನಪ್ರಿಯವಾಗಿರುವ ಭಾರತೀಯ ನಟ ಮತ್ತು ತುಳುನಾಡಿನ ಹೆಮ್ಮೆಯ ಪುತ್ರ ಸುಮನ್ ಅವರು ಇಂದು ಹೈದರಾಬಾದ್‌ನಲ್ಲಿ ನಮ್ಮ ದೇಶದ ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿದ್ದಾರೆ.

ಇದೇ ಸಂದರ್ಭ ತುಳು ನಾಡಿನವರಾದ ಸುಮನ್ ಮಾಜಿ ಉಪರಾಷ್ಟ್ರಪತಿ  ಅವರೊಂದಿಗೆ ತುಳುನಾಡಿನ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

ತುಳು ಭಾಷೆ, ಸಂಸ್ಕೃತಿ, ಪರಂಪರೆ ಮತ್ತು ದೇವಾಲಯಗಳ ಇತಿಹಾಸವನ್ನು ಇದೇ ಸಂದರ್ಭದಲ್ಲಿ ವೆಂಕಯ್ಯನಾಯ್ಡು ಅವರಿಗೆ ತಿಳಿಸಿದರು.

ದೇವಾಲಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ತುಳುನಾಡಿನ ಹಬ್ಬಗಳು ಮತ್ತು ಆಚರಣೆಗಳಿಗೆ ವಿಶೇಷ ರಜೆ ಘೋಷಿಸಲು ಸುಮನ್ ಸರ್ಕಾರಕ್ಕೆ ಮನವಿ ಮಾಡಿದರು.

ಅಲ್ಲದೆ ತುಳು ನಾಡ ಪ್ರದೇಶವನ್ನು ಟೆಂಪಲ್ ಸಿಟಿ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.

LEAVE A REPLY

Please enter your comment!
Please enter your name here

Hot Topics

ಅಪರಿಚಿತರಿಂದ ಕಾಲಿವುಡ್‌ ‘ಆ್ಯಕ್ಷನ್‌ ಸ್ಟಾರ್’ ವಿಶಾಲ್ ಮನೆಗೆ ಕಲ್ಲು ತೂರಾಟ

ಚೆನ್ನೈ: ಕಾಲಿವುಡ್‌ನ 'ಆ್ಯಕ್ಷನ್‌ ಸ್ಟಾರ್' ನಟ ವಿಶಾಲ್ ಅವರ ಮನೆಗೆ ಯಾರೋ ಅಪರಿಚಿತ ಗನ್‌ಮ್ಯಾನ್‌ಗಳು ನುಗ್ಗಿ ಆಕ್ರಮಣ ಮಾಡಿ ಕಲ್ಲುತೂರಾಟ ಮಾಡಿದ್ದಾರೆ. ಅದರ ಪರಿಣಾಮವಾಗಿ ಮನೆಯ ಕಿಟಕಿ ಗಾಜುಗಳು ಒಡೆದಿರುವ ಘಟನೆ ಚೆನ್ನೈಯಲ್ಲಿ...

ಉಳ್ಳಾಲ: ಫ್ಲೆಕ್ಸ್‌ನಲ್ಲಿ ಅನುಮತಿಯಿಲ್ಲದೆ ಗರ್ಭಿಣಿ ಭಾವಚಿತ್ರ ಅಳವಡಿಕೆ: ಕೆರಳಿದ ಭಜರಂಗದಳ

ಉಳ್ಳಾಲ: ಕಾರ್ಯಕ್ರಮವೊಂದರ ಫ್ಲೆಕ್ಸ್ ನಲ್ಲಿ ಮಹಿಳೆಯ ಅನುಮತಿ ಇಲ್ಲದೆ ಫೊಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಉಳ್ಳಾಲದ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು.ದಕ್ಷಿಣ...

ಉಡುಪಿ: ರಸ್ತೆ ಅವ್ಯವಸ್ಥೆ-ಕೋಣಗಳ ಜೊತೆ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ

ಉಡುಪಿ: ಮಲ್ಪೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ಪ್ರವಾಸಿಗರ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಸದ್ಯ ಪ್ರವಾಸಿಗರ ಸಂಖ್ಯೆ ಹೆಚ್ಚಳದಿಂದ ದಿನನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದೆ. ಪ್ರವಾಸಿಗರು ಹಾಗೂ ಸ್ಥಳೀಯರು ಅನುಭವಿಸುತ್ತಿರುವ ಕಷ್ಟವನ್ನು...