Sunday, November 27, 2022

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: PFI ಬ್ಯಾನ್ ಬಗ್ಗೆ M.K ಪೈಝಿ ರಿಯಾಕ್ಷನ್

ಮಂಗಳೂರು: ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳ ಮೇಲೆ ನಿಷೇಧ ಹೇರಿರುವ ಒಕ್ಕೂಟ ಸರ್ಕಾರದ ನಿರ್ಧಾರ ದೇಶದ ಸಂವಿಧಾನ ಪ್ರಜೆಗಳಿಗೆ ಖಾತರಿಪಡಿಸಿರುವ ಹಕ್ಕುಗಳಿಗೆ ನೀಡಿರುವ ಬಲವಾದ ಪೆಟ್ಟು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ ಫೈಝಿ ಹೇಳಿದರು.


ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಮತ್ತು ಆಡಳಿತ ವಿರುದ್ಧ ಯಾರೇ ಧ್ವನಿ ಎತ್ತಿದರೂ ಸಹ ಅವರ ವಿರುದ್ಧ ತನಿಖಾ ಸಂಸ್ಥೆಗಳಿಂದ ದಾಳಿ ಮಾಡಿಸಿ ಅವರನ್ನು ಬಂಧಿಸಲಾಗುತ್ತಿದೆ.

ವಾಕ್‌ ಸ್ವಾತಂತ್ರ್ಯ, ಪ್ರತಿಭಟನೆ ಹಾಗೂ ಸಂಘಟನೆಯನ್ನು ಕ್ರೂರವಾಗಿ ಹತ್ತಿಕ್ಕಲಾಗುತ್ತದೆ. ಇದು ಸಂವಿಧಾನದ ಮೂಲಭೂತ ಹಕ್ಕುಗಳ ಉಲ್ಲಂಘನೆ.

ಈ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷಗಳನ್ನು ಬೆದರಿಸುವ ಮತ್ತು ಪ್ರತಿರೋಧದ ಧ್ವನಿಯನ್ನು ಅಡಗಿಸುವ ಕೆಲಸ ಮಾಡುತ್ತಿದೆ. ಇದು ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ.

ಇದರ ವಿರುದ್ಧ ಎಲ್ಲಾ ಜಾತ್ಯಾತೀತ ಪಕ್ಷಗಳು ಮತ್ತು ಜನರು ಈ ಸರ್ವಾಧಿಕಾರಿ ಸರ್ಕಾರದ ಧೋರಣೆಗಳ ವಿರುದ್ಧ ಪ್ರತಿರೋಧ ಒಡ್ಡಿ ಅದನ್ನು ಮೆಟ್ಟಿ ನಿಲ್ಲುವ ಮೂಲಕ ಈ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡುವ ಕರ್ತವ್ಯ ನಿರ್ವಗಹಿಸಬೇಕು ಎಂದು ಅವರು ಕರೆಕೊಟ್ಟರು.

LEAVE A REPLY

Please enter your comment!
Please enter your name here

Hot Topics

ಉಡುಪಿ: ಹೊಟೇಲ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ….

ಉಡುಪಿ: ಹೊಟೇಲ್‌ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್...

ಸುಳ್ಯದಲ್ಲಿ ಪತ್ನಿಯನ್ನು ಕೊಂದು ಮೃತದೇಹವನ್ನು ಗೋಣಿಚೀಲದಲ್ಲಿಟ್ಟಿದ್ದ ಪಾಪಿ ಪತಿ ಪ.ಬಂಗಾಳದಲ್ಲಿ ಅರೆಸ್ಟ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೀರಮಂಗಲ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಲದಲ್ಲಿ ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ಇಬ್ರಾನ್ ಶೇಖ್...

ನಂತೂರಿನಲ್ಲಿ ಜೋಡಿ ಮೇಲೆ ದಾಳಿ-ಮೂವರು ಹಿಂದೂ ಕಾರ್ಯಕರ್ತರು ಅರೆಸ್ಟ್

ಮಂಗಳೂರು:ಮಂಗಳೂರಿನ ನಂತೂರು ಸರ್ಕಲ್‌ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಸುರತ್ಕಲ್‌ ನಿವಾಸಿ ಮುತ್ತು(18), ಪ್ರಕಾಶ್‌(21) ಮತ್ತು ಅಸೈಗೋಳಿ...