Wednesday, October 5, 2022

ಕಾಸರಗೋಡು ಮಾರುಕಟ್ಟೆಯಲ್ಲಿ ಕೊಳೆತ 2 ಕ್ವಿಂಟಾಲ್ ಮೀನು ಪತ್ತೆ

ಕಾಸರಗೋಡು: ಮಾರುಕಟ್ಟೆಯಲ್ಲಿ ಹಳಸಿ ಹೋಗಿದ್ದ ಎರಡು ಕ್ವಿಂಟಾಲ್ ಮೀನುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ನಿನ್ನೆ ಕಾಸರಗೋಡಿನಲ್ಲಿ ನಡೆದಿದೆ.


ರಾಸಾಯಿನಿಕ ಬೆರಕೆಯ ಮೀನುಗಳನ್ನು ಮಾರುಕಟ್ಟೆಯಲ್ಲಿ ಮಾರಲಾಗುತ್ತದೆ ಎಂಬ ಬಂದ ದೂರಿನ ಹಿನ್ನೆಲೆ ಮಾರುಕಟ್ಟೆಗೆ ತೆರಳಿದ್ದ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷಾ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ್ದು ಆ ಸಂದರ್ಭ ಭಾರೀ ಪ್ರಮಾಣದ ಕೊಳೆತ ಮೀನುಗಳನ್ನು ವಶಪಡಿಸಿಕೊಂಡಿದ್ದಾರೆ.

ತಮಿಳುನಾಡಿನಿಂದ ಆಮದು ಮಾಡಿಕೊಂಡಿದ್ದ 50 ಬಾಕ್ಸ್ ಮೀನುಗಳಲ್ಲಿ 8 ಬಾಕ್ಸ್ ಮೀನುಗಳು ಸಂಪೂರ್ಣವಾಗಿ ಕೊಳೆತಿರುವ ವಿಚಾರ ಬಯಲಿಗೆ ಬಂದಿದೆ.

ಅಷ್ಟೇ ಅಲ್ಲದೆ ಈ ಮೀನಿಗೆ ರಾಸಾಯಿನಿಕ ಪದಾರ್ಥ ಬೆರೆಸಿರುವುದು ಕೂಡ ದೃಢವಾಗಿದೆ.

ಮೀನುಗಳನ್ನು ತಪಾಸಣೆ ನಡೆಸಿದ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಈ ಬಗ್ಗೆ ನಿಗಾ ಇರಿಸಲಾಗುವುದು ಎಂದು ಅಧಿಕಾರಿಗಳು ತೀರ್ಮಾನಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...