Connect with us

BELTHANGADY

‘ಸ್ವಂತಕ್ಕಾಗಿ ಬದುಕದೆ ಸಮಾಜಕ್ಕಾಗಿ ಬದುಕಿದ ದಿ. ಡೀಕಯ್ಯ’ಗೆ ನುಡಿನಮನ

Published

on

ಬೆಳ್ತಂಗಡಿ: ‘ಸ್ವಂತಕ್ಕಾಗಿ ಬದುಕದೆ ಸಮಾಜ ಹಿತಕ್ಕಾಗಿ ಬದುಕಿದವರು ಪಿ.ಡೀಕಯ್ಯರವರು. ಅವರು ಮನುಷ್ಯ ಮನುಷ್ಯರ ಮಧ್ಯೆ ಸಾಮರಸ್ಯದಿಂದ ಹೇಗೆ ಬದುಕಬೇಕು ಎಂದು ತೋರಿಸಿಕೊಟ್ಟವರು. ನಿಜವಾದ ಅರ್ಥದಲ್ಲಿ ಪರಿವರ್ತನೆಯ ಹರಿಕಾರರಾಗಿದ್ದು, ಎಲ್ಲಾ ವರ್ಗದ ಜನ ಗೌರವಿಸುವ ವ್ಯಕ್ತಿತ್ವ ಅವರದಾಗಿತ್ತು’ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹೇಳಿದರು.

ಅವರು ಭಾನುವಾರ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಭಾಭವನದಲ್ಲಿ ಇತ್ತೀಚೆಗೆ ನಿಧನರಾದ ಪಿ. ಪಿ.ಡೀಕಯ್ಯರಿಗೆ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಮತ್ತು ಬಹುಜನ ಪ್ರಗತಿಪರ ಸಂಘಟನೆಗಳ ಒಕ್ಕೂಟ ಕರ್ನಾಟಕ ಇದರ ವತಿಯಿಂದ ನಡೆದ ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮಾಜಿ ಶಾಸಕ ಕೆ ವಸಂತ ಬಂಗೇರ ಮಾತನಾಡಿ, ‘ಪಿ.ಡೀಕಯ್ಯನವರು ಓರ್ವ ಮಹಾನ್ ಹೋರಾಟಗಾರ. ಅವರು ದಲಿತರ ಪರವಾಗಿ ಮಾತ್ರ ಹೋರಾಟ ಮಾಡದೆ, ಅಲ್ಪ ಸಂಖ್ಯಾತರು ಹಾಗೂ ಹಿಂದುಳಿದವರ ಪರವಾಗಿಯೂ ಹೋರಾಟ ಮಾಡಿದ್ದಾರೆ.

ನನ್ನ ಮತ್ತು ಅವರ ಮಧ್ಯೆ 35 ವರ್ಷಗಳ ಆತ್ಮೀಯತೆ ಇದ್ದು, ಅವರ ಚಿಂತನೆ ಸಮಾಜದ ಹಿತವೇ ಆಗಿತ್ತು. ಬೆಳ್ತಂಗಡಿ ಶ್ರೀ ಗುರುನಾರಾಯಣ ಸಂಘದ ವತಿಯಿಂದ ನಡೆದ ನಾರಾಯಣ ಗುರು ಪಠ್ಯವನ್ನು 10 ನೇ ತರಗತಿಯ ಸಮಾಜ ವಿಜ್ಞಾನದಲ್ಲಿ ಸೇರಿಸಬೇಕು ಎಂಬ ಹೋರಾಟ ಅವರ ಬದುಕಿನ ಕಡೆಯ ಹೋರಾಟವಾಗಿದೆ ಮತ್ತು ಅದಕ್ಕೆ ಫಲವೂ ಸಿಕ್ಕಿದೆ’ ಎಂದರು.

ಅವರ ಪತ್ನಿ ಆತ್ರಾಡಿ ಅಮೃತ ಶೆಟ್ಟಿ ಮಾತನಾಡಿ, ‘ಡೀಕಯ್ಯರವರು ನನ್ನ ಸುತ್ತ ಭದ್ರವಾದ ಕೋಟೆಯನ್ನು ಕಟ್ಟಿ ಕೋಟೆಯ ಮಧ್ಯೆ ನನ್ನನ್ನು ಬಿಟ್ಟು ಹೋದರು.
ಈ ಕೋಟೆ ನನ್ನನ್ನು ಕೊನೆವರೆಗೂ ಕಾಯುತ್ತೆ ಅಂತ ನಾನು ನಂಬಿದ್ದೇನೆ’ ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಸಮಾಜ ಪರಿವರ್ತನಾ ಮುಖಂಡ ಅಚ್ಚುತ ಸಂಪಿಗೆ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬಿಎಸ್ ಪಿ ರಾಜ್ಯ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್, ಉಪನ್ಯಾಸಕ ವಾಸುದೇವ ಬೆಳ್ಳೆ, ಬೆಂಗಳೂರು ಐಎಎಸ್ ಅಕಾಡೆಮಿಯ ಶಿವಕುಮಾರ್, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕ ರಾಜೀವ್ ಸಾಲಿಯಾನ್ ವೇದಿಕೆಯಲ್ಲಿ ಇದ್ದರು.

ಬಿಎಸ್ ಪಿ ಜಿಲ್ಲಾಧ್ಯಕ್ಷ ದಾಸಪ್ಪ ಎಡಪದವು, ಸಿಪಿಐ(ಎಂ) ಬೆಳ್ತಂಗಡಿ ಸಮಿತಿ ಕಾರ್ಯದರ್ಶಿ ಶಿವಕುಮಾರ್ ಎಸ್.ಎಂ., ಡಿ ವೈ ಎಪ್ ಐ ರಾಜ್ಯ ಸಮಿತಿ ಅಧ್ಯಕ್ಷ ಮುನೀರ್ ಕಾಟಿಪಳ್ಳ, ಬೆಳ್ತಂಗಡಿ ಆದಿ ದ್ರಾವಿಡ ಸಂಘದ ಅಧ್ಯಕ್ಷ ಶೇಖರ್ ಧರ್ಮಸ್ಥಳ, ಮುಖಂಡ ಅಮ್ಮು ಕುಮಾರ್, ದಲಿತ ಮುಖಂಡ ಚೆನ್ನಕೇಶವ, ಪ್ರಮುಖರಾದ ಚಂದು ಎಲ್, ಪ್ರಭಾಕರ ಶಾಂತಿಕೋಡಿ, ಹರಿಯಪ್ಪ ಮುತ್ತೂರು, ಶೈಲೇಶ್ ಕುಮಾರ್, ಶೇಖರ ಕುಕ್ಕೇಡಿ, ಜನಾರ್ದನ ಕೆಸರುಗದ್ದೆ, ನೇಮಿರಾಜ್ ಕೆ, ಪಿ.ಎಸ್.ಶ್ರೀನಿವಾಸ್, ಶೈಲೇಶ್ ಆರ್. ಜೆ, ಲಕ್ಷ್ಮಣ ಜಿ.ಎಸ್., ಶೇಖರ ಲಾಯಿಲ ವೆಂಕಣ್ಣ ಕೊಯ್ಯೂರು, ನಾದಮಣಿ ನಾಲ್ಕೂರು, ಪೇರೂರು ಜಾರು, ರಘು ಧರ್ಮಸೇನ, ಗೌರಿ, ಧಮ್ಮಾನಂದ ಬೆಳ್ತಂಗಡಿ ಮುಂತಾದವರು ಭಾಗವಹಿಸಿದ್ದರು.

ಪಿ.ಡೀಕಯ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಮೈಸೂರು ವಿಭಾಗ ಸಂಚಾಲಕ ಬಿ.ಕೆ. ವಸಂತ್ ಸ್ವಾಗತಿಸಿದರು. ಸತೀಶ್ ಕಕ್ಕೆಪದವು ಪ್ರಸ್ತಾವಿಸಿದರು. ರಾಜೀವ್ ಕಾರ್ಯಕ್ರಮ ನಿರೂಪಿಸಿದರು.

Click to comment

Leave a Reply

Your email address will not be published. Required fields are marked *

BELTHANGADY

ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

Published

on

ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮ‌ಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.

bison

ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.

Continue Reading

BELTHANGADY

ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

Published

on

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ 8 ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ಏ.19ರಂದು ನಡೆದಿದೆ. ಉಪ್ಪಿನಂಗಡಿಯ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿ ವಿದ್ಯಾರ್ಥಿಯಾಗಿದ್ದ ನಂದನ್ (13) ಎಂಬಾತ ಆತ್ಮಹತ್ಯೆಗೆ ಶರಣಾದ ಬಾಲಕ.

Read More..; ನಗರ ಸಭೆ ಉಪಾಧ್ಯಕ್ಷೆ ಮಗ ಸೇರಿ ನಾಲ್ವರ ಹ*ತ್ಯೆ! ಹಂ*ತಕರ ಪತ್ತೆಗೆ ವಿಶೇಷ ತಂಡ ರಚನೆ

ಪಂಜದ ದಿವಂಗತ ರೋಹಿತ್ ಗೌಡ ಎಂಬವರ ಮಗನಾಗಿದ್ದ ಈತ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ಮಾವನ ಮನೆಯಲ್ಲಿದ್ದ. ಅಲ್ಲಿಂದಲೆ ಉಪ್ಪಿನಂಗಡಿಯ ಖಾಸಗಿ ಶಾಲೆಗೆ ಹೋಗುತ್ತಿದ್ದ. ಈತ ಈ ಬಾರಿ ಏಳನೇ ತರಗತಿ ಉತ್ತೀರ್ಣನಾಗಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ 8 ನೇ ತರಗತಿಗೆ ತೇರ್ಗಡೆ ಹೊಂದಿದ್ದ. ಏ.19ರಂದು ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮನೆಯಲ್ಲಿ ಒತ್ತಾಯಿಸಿದ್ದ. ಮನೆಯ ಇನ್ವಾರ್ಟರ್ ರಿಪೇರಿಗೆ ಬಂದಿರುವುದರಿಂದ ಇವತ್ತು ಬೇಡ ನಾಳೆ ಸೈಕಲ್ ರಿಪೇರಿ ಮಾಡಿಕೊಡಲಾಗುವುದೆಂದು ಮನೆಯವರು ಹೇಳಿದ್ದಾರೆ ಎನ್ನಲಾಗಿದೆ. ಇದೇ ನೆಪವನ್ನು ಇಟ್ಟುಕೊಂಡು ಮನನೊಂದ ಬಾಲಕ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಎಲ್ಲಾ ವಿಚಾರವನ್ನು ಮನೆಯವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಸದ್ಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Continue Reading

BELTHANGADY

ಶ್ವಾನ ಪ್ರಿಯರೇ ಎಚ್ಚರ..ಎಚ್ಚರ..! ಮಾಲಕಿಯ ತಲೆ ಸೀಳಿದೆ ಸಾಕು ನಾಯಿ..!

Published

on

ಬೆಳ್ತಂಗಡಿ : ಮನೆಯಲ್ಲಿ ಪ್ರಾಣಿಗಳನ್ನು ಸಾಕುವುದೆಂದರೆ ಹೆಚ್ಚಿನವರಿಗೆ ಇಷ್ಟ. ಅದರಲ್ಲೂ ನಾಯಿ ಪ್ರಿಯರು ಅನೇಕ ಮಂದಿ ಇದ್ದಾರೆ. ತಮ್ಮ ಮನೆಗಳಲ್ಲಿ ವಿವಿಧ ತಳಿಯ ನಾಯಿಗಳನ್ನು ಸಾಕುತ್ತಾರೆ. ಈ ನಾಯಿಗಳನ್ನು ಪ್ರೀತಿಸಿದಾಗ ಅವೂ ಅದಕ್ಕೆ ಪ್ರತಿಯಾಗಿ ಪ್ರೀತಿ ಕೊಡೋದು ಸಹಜ. ಆದರೆ, ಅದಕ್ಕೆ ವಿರುದ್ಧವಾದ ಘಟನೆಯೂ ನಡೆಯಬಹುದು ಎಂಬುದಕ್ಕೆ ಗುರುವಾರ(ಏ.18) ಬೆಳ್ತಂಗಡಿಯಲ್ಲಿ ನಡೆದ ಈ ಸುದ್ದಿ ನಿದರ್ಶನವಾಗಿದೆ.


ಮನೆ ಮಾಲಕಿ ತನ್ನ ಸಾಕು ನಾಯಿಯನ್ನು ಮುದ್ದಾಡುವಾಗ ಅದು ಏಕಾಏಕಿ ದಾ*ಳಿ ಮಾಡಿ, ತಲೆ ಭಾಗವನ್ನು ಸೀಳಿ ಹಾಕಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಮುಂಡಾಜೆ ಗ್ರಾಮ ನಿಡಿಕಲ್ ಓಂಕಾರ್ ನಿವಾಸಿ ದಿವಂಗತ ರಾಮ್ ದಾಸ್ ಎಂಬವರ ಪತ್ನಿ 49 ವರ್ಷದ ಪೂರ್ಣಿಮಾ ಗಂಭೀ*ರ ಗಾ*ಯಗೊಂಡ ಮಹಿಳೆ.

ಇದನ್ನೂ ಓದಿ : Viral Video; ಸ್ಮೋಕ್ ಬಿಸ್ಕೆಟ್ ತಿನ್ನುತ್ತಿದ್ದಂತೆಯೇ ಬಾಲಕ ಅಸ್ವಸ್ಥ

ಪೂರ್ಣಿಮಾ ತನ್ನ ಮನೆಯ ಸಾಕು ನಾಯಿಯನ್ನು ಎಂದಿನಂತೆ ಮುದ್ದಾಡುತ್ತಿದ್ದರು. ಈ ವೇಳೆ ಅವರು ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾರೆ. ಅದೇನಾಯ್ತೋ ಗೊತ್ತಿಲ್ಲ, ಸಾಕು ನಾಯಿ ಪೂರ್ಣಿಮಾ ಮೇಲೆ ದಾ*ಳಿ ನಡೆಸಿದೆ. ತಲೆ ಭಾಗ ಸೀ*ಳಿ ಹಾಕಿದೆ. ಕೈ ಕಚ್ಚಿ ಗಂಭೀ*ರ ಗಾ*ಯಗೊಳಿಸಿದೆ. ಸದ್ಯ, ಪೂರ್ಣಿಮಾ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

LATEST NEWS

Trending