Home ಪ್ರಮುಖ ಸುದ್ದಿ ಕೊರೊನಾ ಸೋಂಕು ಜಿಲ್ಲೆಯಲ್ಲಿ ಪತ್ತೆಯಾಗಿಲ್ಲ ಬಂಟ್ವಾಳದಲ್ಲಿ ತಾ.ಆರೋಗ್ಯಧಿಕಾರಿ ದೀಪಾ ಮಾಹಿತಿ

ಕೊರೊನಾ ಸೋಂಕು ಜಿಲ್ಲೆಯಲ್ಲಿ ಪತ್ತೆಯಾಗಿಲ್ಲ ಬಂಟ್ವಾಳದಲ್ಲಿ ತಾ.ಆರೋಗ್ಯಧಿಕಾರಿ ದೀಪಾ ಮಾಹಿತಿ

ಕೊರೊನಾ ಸೋಂಕು ಜಿಲ್ಲೆಯಲ್ಲಿ ಪತ್ತೆಯಾಗಿಲ್ಲ ಬಂಟ್ವಾಳದಲ್ಲಿ ತಾ.ಆರೋಗ್ಯಧಿಕಾರಿ ದೀಪಾ ಮಾಹಿತಿ

ಬಂಟ್ವಾಳ:ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಮುಂಜಾಗ್ರತಾ ದೃಷ್ಟಿಯಿಂದ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಯಾವುದೇ ವ್ಯಕ್ತಿಗಳಲ್ಲಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಆರೋಗ್ಯ ಇಲಾಖೆಯನ್ನು ಸಂರ್ಪಕಿಸುವಂತೆ ತಾಲೂಕು ಆರೋಗ್ಯ ಆಧಿಕಾರಿ ದೀಪಾ ಪ್ರಭು ಹೇಳಿದರು.

ಅವರು ಬಂಟ್ವಾಳ ಎಸ್.ಜಿ.ಎಸ್.ವೈ.ಸಭಾಂಗಣದಲ್ಲಿ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೊರೊನಾ ಸೋಂಕಿನ ಕುರಿತು ಮಾಹಿತಿ ನೀಡಿದರು. ಈ ಸೋಂಕು ಬಾಧಿತರಿಗೆ ನಿರ್ದಿಷ್ಟ ಚಿಕಿತ್ಸೆ ಕಂಡುಹಿಡಿಯಲಾಗಿಲ್ಲ, ರೋಗ ಲಕ್ಷಣಗಳಿಗನುಗುಣವಾಗಿ ಚಿಕಿತ್ಸೆ ನೀಡಲು ಅವಕಾಶವಿದೆ. ಈ ವರೆಗೆ ಯಾವುದೇ ಪ್ರಕರಣ ಜಿಲ್ಲೆಯಲ್ಲಿ ಪತ್ತೆಯಾಗಿಲ್ಲ. ಇದು ಹೆಚ್ಚಾಗಿ ಪ್ರವಾಸಿಗರಿಂದ ಬರುವ ಸಾಧ್ಯತೆ ಗಳಿದ್ದು, ಏರ್ ಪೊರ್ಟ್ ಗಳಲ್ಲಿ ಹೆಚ್ಚಿನ ತನಿಖೆಗೆ ಒಳಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ , ತಾಲೂಕು ಪಂಚಾಯತ್, ಉಪಾಧ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ಪ್ರಭಾರ ಸಿ.ಡಿ.ಪಿ.ಒ. ಗಾಯತ್ರಿ ಕಂಬಳಿ ತಾಲೂಕು ಪಂ.ಇ.ಒ.ರಾಜಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

- Advertisment -

RECENT NEWS

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ 

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ  ಚೀನಾ: ಚೀನಾದ ಹುಬೈನಲ್ಲಿ ಕೊರೊನಾ ವೈರಸ್ ಗೆ ಮತ್ತೆ 115 ಜನರು ಬಲಿಯಾಗಿದ್ದು ಮೃತರ ಸಂಖ್ಯೆ 2,236ಕ್ಕೆ ತಲುಪಿದೆ. ಚೀನಾದಲ್ಲಿ 75,000 ಜನರು...

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ.ಚೆನ್ನಿಗಪ್ಪ ಇನ್ನಿಲ್ಲ

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ. ಚೆನ್ನಿಗಪ್ಪ ಇನ್ನಿಲ್ಲ ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಸಿ. ಚೆನ್ನಿಗಪ್ಪ ಇಂದು ನಿಧನರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಚೆನ್ನಿಗಪ್ಪ ಅವರಿಗೆ...

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ ಮಂಗಳೂರು: ತ್ಯಾಜ್ಯ ಸಂಸ್ಕರಣಾ ಘಟಕ ಹೊಂದುವಂತೆ ಮಹಾನಗರ ಪಾಲಿಕೆ ಆಯುಕ್ತರು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ ಹತ್ತು ಅಪಾರ್ಟ್ ಮೆಂಟ್ ಗಳಿಗೆ ದಂಡ ವಿಧಿಸಲಾಗಿದೆ. ಕಳೆದ ಸೆಪ್ಟಂಬರ್...

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿ ಸಮಾವೇಶದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾಳನ್ನು ಬಂಧಿಸಿದ ಪೋಲಿಸರು...