Thursday, April 22, 2021

ಅರಣ್ಯಾಧಿಕಾರಿ  ಲೇಡಿ ಸಿಂಗಂ ಖ್ಯಾತಿಯ ದೀಪಾಲಿ ಚೌಹಾಣ್ ಮೊಹೈತ್ ಆತ್ಮಹತ್ಯೆ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಿ..!

ಮಹಾರಾಷ್ಟ್ರ: ಮಹಿಳಾ ಅರಣ್ಯಾಧಿಕಾರಿ ದೀಪಾಲಿ ಚೌಹಾಣ್ ಮೊಹೈತ್ ರ ಮೃತದೇಹವು ಆತ್ಮಹತ್ಯೆ ಮಾಡಿಕೊಂಡಿರುವ ಮಾದರಿಯಲ್ಲಿ  ಪತ್ತೆಯಾಗಿದೆ.  ದೀಪಾಲಿ ಅವರು 2013ರಲ್ಲಿ ಮಹಾರಾಷ್ಟ್ರ ಸರ್ಕಾರ ಸೇವೆಗೆ ಆಯ್ಕೆಯಾಗಿದ್ದರು.ದೀಪಾಲಿ ಅವರನ್ನು ಮಹಾರಾಷ್ಟ್ರದ ಮೇಲ್ಘಟ್ ಹುಲಿ ಸಂರಕ್ಷಿತಾರಣ್ಯ (ಎಂಆರ್ ಟಿ) ಕ್ಕೆ ನೇಮಕ ಮಾಡಲಾಗಿತ್ತು. ಭಾರತೀಯ  (ಐಫ್ ಎಸ್) ಅರಣ್ಯಾಧಿಕಾರಿಯ ಲೈಂಗಿಕ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟಿನಲ್ಲಿ ಉಲ್ಲೇಖಿಸಿರುವುದಾಗಿ ತನಿಖಾಧಿಕಾರಿಗಳು ತಿಳಿಸಿದ್ದಾರೆ.

28ವರ್ಷ ವಯಸ್ಸಿನ ಅಧಿಕಾರಿ ದೀಪಾಲಿ ಹರಿಸಾಲ್ ಗ್ರಾಮದಲ್ಲಿರುವ ಹೆಡ್ ಕ್ವಾಟ್ರಸ್ ನಲ್ಲಿ ತಮ್ಮ ಸರ್ವೀಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಅವರ ಸಂಬಂಧಿಕರ ಮಾಹಿತಿಯಂತೆ ಆಕೆಯ ಮೃತದೇಹದ ಪಕ್ಕದಲ್ಲಿ ರಿವಾಲ್ವರ್ ಬಿದ್ದಿರುವುದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿರುವುದಾಗಿ ತಿಳಿದು ಬಂದಿದೆ.

ಆತ್ಮಹತ್ಯೆ ಸಂದರ್ಭ ಅವರ ತಾಯಿ ಸತಾರದಲ್ಲಿದ್ದರು ಮತ್ತು ಆಕೆಯ ಪತಿ ಕೆಲಸದಲ್ಲಿದ್ದರು. ಡೆತ್ ನೋಟ್ ನಲ್ಲಿ ಉಲ್ಲೇಖವಾಗಿರುವ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವವರೆಗೆ ದೀಪಾಲಿಯವರ ಮೃತದೇಹದ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ದೀಪಾಲಿ ಕುಟುಂಬಿಕರು ಹೇಳಿದ್ದಾರೆ.

ಈ ಕುರಿತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸಮಗ್ರ ತನಿಖೆಗೆ ಸೂಚಿಸಿದ್ದಾರೆ. ತಪ್ಪಿತಸ್ಥರಿಗೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಡೆತ್ ನೋಟ್ನಲ್ಲಿ ಉಲ್ಲೇಖವಾಗಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿನೋದ್ ಶಿವಕುಮಾರ್​ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು  ಅಮರಾವತಿ ಗ್ರಾಮೀಣ ಪೊಲೀಸ್​ ವರಿಷ್ಠಾಧಿಕಾರಿ ಡಾ. ಹರಿ ಬಾಲಾಜಿ ಎನ್​ ಮಾಹಿತಿ ನೀಡಿದ್ದಾರೆ.

ಕಳೆದ ಕೆಲ ತಿಂಗಳಿಂದ ಶಿವಕುಮಾರ್, ದೀಪಾಲಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದ್ದು  ಇದರಿಂದ ಆಕೆ ಮಾನಸಿಕ ಹಿಂಸೆಗೆ ಒಳಗಾಗಿದ್ದರು  ಎಂದು ಡೆತ್​ನೋಟ್​ನಲ್ಲಿ ಉಲ್ಲೇಖವಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...