Connect with us

    DAKSHINA KANNADA

    ಮನೆ-ಮನದಲ್ಲಿಂದು ಬೆಳಕಿನ ಹಬ್ಬ-ನರಕ ಚತುರ್ದಶಿ ಸಂಭ್ರಮ

    Published

    on

    ಮಂಗಳೂರು: ನಾಡಿನೆಲ್ಲೆಡೆ ಇದೀಗ ದೀಪಾವಳಿ ಹಬ್ಬದ ಸಂಭ್ರಮ. ಈಗಾಗಲೇ ಜನತೆ ದೀಪಾವಳಿ ಹಬ್ಬದ ಸಡಗರದಲ್ಲಿ ಖರೀದಿಯಲ್ಲಿ ತೊಡಗಿಸಿಕೊಂಡಿದ್ದಾರೆ.

    ಇಂದು ನರಕಚತುರ್ದಶಿ ಸಂಭ್ರಮವಾಗಿದ್ದು, ನಾಡಿನ ಜನತೆ ಎಣ್ಣೆ ಹಚ್ಚಿ ಸ್ನಾನ ಮಾಡಿ, ದೇವರಿಗೆ ವಿಶೇಷ ಪೂಜೆ ಮಾಡಿದರು. ಇನ್ನು ದೀಪಾವಳಿ ಅಂದರೆ ಪಟಾಕಿ ಇರಲೇಬೇಕು. ಆದರೆ ಪಟಾಕಿ ಸಿಡಿಸುವ ಮುನ್ನ ಇರಲಿ ಎಚ್ಚರ ಎನ್ನುವುದು ಕಿವಿಮಾತು. ಕ್ಷಣ ಮಾತ್ರದ ಸಂಭ್ರಮಕ್ಕೆ ಇಡೀ ಬದುಕನ್ನು ಕತ್ತಲೆ ಮಾಡಿಕೊಳ್ಳುವವರು ಇದ್ದಾರೆ.


    ಹೀಗಾಗಿ ಪಟಾಕಿಸಿಡಿಸುವುದಿದ್ದರೂ ಅತ್ಯಂತ ಜಾಗರೂಕರಾಗಿ ಪಟಾಕಿ ಸಿಡಿಸಿರಿ ಎನ್ನುವುದು ಹಿರಿಯರ ಎಚ್ಚರಿಕೆ. ಇನ್ನು ಜನತೆ ಹಸಿರು ಪಟಾಕಿಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ.

    ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ಧ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ 125 ಡೆಸಿಬಲ್‌ ಅಥವಾ 145 ಡಿಸಿಬಲ್‌ ಹೆಚ್ಚು ಶಬ್ಧ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳ ಮಾರಾಟ ಮತ್ತು ಉಪಯೋಗವನ್ನು ನಿಷೇಧಿಸಲಾಗಿದೆ.


    ರಾತ್ರಿ 10ರಿಂದ ಬೆಳಿಗ್ಗೆ 6ಗಂಟೆಯವರೆಗೆ ಪಟಾಕಿ, ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದೆ. ದಿನದ ಯಾವುದೇ ಸಮಯದಲ್ಲಿ ನಿಶ್ಯಬ್ಧ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳ ಸುತ್ತಮುತ್ತ ಯಾವುದೇ ರೀತಿಯ ಶಬ್ಧ ಉಂಟುಮಾಡುವ ನಿಷೇಧಿತ, ಪಟಾಕಿ ಸಿಡಿಮದ್ದು ಬಳಸಬಾರದು.

    ಸುಪ್ರೀಂಕೋರ್ಟ್ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಬೇಕು. ಸಾರ್ವಜನಿಕರು ಪಟಾಕಿ ಹಾಗೂ ಸಿಡಿಮದ್ದುಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ಸಿಡಿಸಬೇಕು.

    ಸಾರ್ವಜನಿಕರಲ್ಲಿ ದೀಪಾವಳಿ ಹಬ್ಬವನ್ನು ಸಿಡಿಮದ್ದು ಪಟಾಕಿಗಳನ್ನು ಉಪಯೋಗಿಸದೇ ದೀಪದ ಹಬ್ಬವನ್ನಾಗಿ ಆಚರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ತಿಳಿಸಿದ್ದಾರೆ.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending