Wednesday, December 1, 2021

ರಾಜ್ಯದಲ್ಲಿ ಈ ಬಾರಿ ಹಸಿರು ಪಟಾಕಿಯೊಂದಿಗೆ ದೀಪಾವಳಿ

ಬೆಂಗಳೂರು :ಪಟಾಕಿ ಸಿಡಿಸುವುದರಿಂದ ಕೊರೊನಾ ಸೊಂಕಿತರಿಗೆ ಸಮಸ್ಯೆಯಾಗುವ ಸಾಧ್ಯತೆ ಹಿನ್ನಲೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ದಿಪಾವಳಿ ಸಂದರ್ಭ ಎಲ್ಲಾ ರೀತಿಯ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧಿಸಿ ಆದೇಶಿಸಿದ್ದರು. ಆದರೆ ಈ ಆದೇಶಕ್ಕೆ ಹಿಂದೂ ಸಂಘಟನೆಗಳ ವಿರೋಧ ಬಂದ ಹಿನ್ನಲೆ ಈಗ ಆದೇಶದಲ್ಲಿ ನಿರ್ಧಾರದಲ್ಲಿ ಸಣ್ಣ ಮಾರ್ಪಾಡು ಮಾಡಿರುವ ಸರಕಾರ ಹಸಿರು ಪಟಾಕಿ ಬಳಕೆಗೆ ಅನುಮತಿ ನೀಡಿದೆ.


ಈ ಬಗ್ಗೆ ರಾಜ್ಯದ ಜನತೆಗೆ ಮನವಿ ಮಾಡಿರುವ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹಸಿರು ಪಟಾಕಿ ಬಳಸಿ, ಸರಳ ದೀಪಾವಳಿ ಆಚರಿಸಿ ಎಂದು ಕರೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೊರೊನಾ ವೈರಸ್‌ ನಿಯಂತ್ರಣಕ್ಕೆ ರಾಜ್ಯ ಸರಕಾರ ಇಲ್ಲಿಯವರೆಗೂ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಇಂತಹ ಸಮಯದಲ್ಲಿ ಸಾರ್ವಜನಿಕರ ಹಾಗೂ ಮಕ್ಕಳ ಆರೋಗ್ಯದ ಹಿತದೃಷ್ಠಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.


ಈ ಬಾರಿಯ ದೀಪಾವಳಿಯನ್ನು ಹಸಿರು ಪಟಾಕಿಯೊಂದಿಗೆ ಆಚರಿಸಿ ಎಂದು ಹೇಳಿರುವ ಸಿಎಂ ಬಿಎಸ್‌ವೈ, ಸರಳವಾಗಿ, ಅರ್ಥಗರ್ಭಿತವಾಗಿ, ಭಕ್ತಿಪೂರ್ವಕವಾಗಿ ಹಬ್ಬ ಆಚರಿಸುವುದು ಸೂಕ್ತ ಎಂದು ಮುಂಚಿತವಾಗಿಯೇ ರಾಜ್ಯದ ಜನತೆಗೆ ದೀಪಾವಳಿಯ ಶುಭಾಶಯಗಳನ್ನು ಬಿಎಸ್‌ ಯಡಿಯೂರಪ್ಪ ಕೋರಿದ್ದಾರೆ.

ಕಳೆದ ವರ್ಷ ಸಿಎಸ್‌ಐಆರ್‌ ಮತ್ತು ಎನ್‌ಇಆರ್‌ಐ ವಿಜ್ಞಾನಿಗಳು ಹಸಿರು ಪಟಾಕಿಗಳನ್ನು ಅಭಿವೃದ್ಧಿಪಡಿಸಿದ್ದರು. ಶೇ.30ಕ್ಕಿಂತ ಕಡಿಮೆ ವಾಯುಮಾಲಿನ್ಯಕಾರಕ ಅಂಶಗಳನ್ನು ಹೊಂದಿರುವ ಹಾಗೂ ಸಾಮಾನ್ಯ ಪಟಾಕಿಗಳಿಗಿಂತ ಕಡಿಮೆ ಶಬ್ಧ ಮಾಡುವ ಪಟಾಕಿಗಳನ್ನು ಹಸಿರು ಪಟಾಕಿ ಎಂದು ಕರೆಯಲಾಗುತ್ತಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...