Connect with us

DAKSHINA KANNADA

ಕತ್ತಲೆಯಿಂದ ಬೆಳಕಿನೆಡೆ: ಅಜ್ಞಾನದಿಂದ ಜ್ಞಾನದೆಡೆ ಸಾಗುವ ಬೆಳಕಿನ ಹಬ್ಬ ದೀಪಾವಳಿ ..

Published

on

ಕತ್ತಲೆಯಿಂದ ಬೆಳಕಿನೆಡೆ ಅಜ್ಞಾನದಿಂದ ಜ್ಞಾನದೆಡೆ ಸಾಗುವ ಬೆಳಕಿನ ಹಬ್ಬ ದೀಪಾವಳಿ 

ಮಂಗಳೂರು: ಚಾಂದ್ರಮಾನ  ಪಂಚಾಂಗದ ಪ್ರಕಾರ ಅಶ್ವಯುಜ ಮಾಸದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತದೆ. ಶ್ರೀ ರಾಮ ರಾವಣನನ್ನು ಜಯಿಸಿ ಸಹೋದರ ಲಕ್ಷ್ಮಣ ಹಾಗೂ ಪತ್ನಿ ಸೀತಾ ಮಾತೆಯೊಂದಿಗೆ ಅಯೋಧ್ಯೆಗೆ ಮರಳಿದ ಕಾಲವೆಂದು ಪರಿಗಣಿಸಲಾಗುತ್ತದೆ. ದೀಪಾವಳಿ ಹಬ್ಬದಂದು ನಾವು ಬೆಳಗುವ ದೀಪಗಳು, ಮನೆಯಲ್ಲಿ ಪ್ರೀತಿ ಮತ್ತು ಸಂತೋಷವನ್ನು ತರುತ್ತದೆ.

ಮನೆಯಲ್ಲಿ ಬಹುನಿರೀಕ್ಷಿತ ಭರವಸೆ ಮತ್ತು ಉತ್ಸಾಹವನ್ನು ಪೂರ್ಣಗೊಳಿಸುತ್ತದೆ. ಪ್ರತಿಯೊಬ್ಬರು ದೀಪಾವಳಿ ದಿನದಂದು ಮನೆಯನ್ನು ಶುದ್ಧಗೊಳಿಸಿ, ದೀಪಗಳನ್ನು ಬೆಳಗಿ, ಹೂಮಾಲೆಯಿಂದ ಮನೆಯನ್ನು ಅಲಂಕರಿಸಿ, ಸಿಹಿ ಖಾದ್ಯವನ್ನು ತಯಾರಿಸಿ, ಮನೆಯವರೆಲ್ಲಾ ಹೊಸ ಉಡುಪುಗಳನ್ನು ಧರಿಸಿ ಪಟಾಕಿಯನ್ನು ಸಿಡಿಸಿ ಹಬ್ಬದ ಉತ್ಸಾಹವನ್ನು ವ್ಯಕ್ತಪಡಿಸುತ್ತಾರೆ.

ದೀಪಾವಳಿ ಅತ್ಯಂತ ಜನಪ್ರಿಯ ಹಿಂದೂ ಹಬ್ಬಗಳಲ್ಲಿ ಒಂದು. ಕತ್ತಲೆಯ ವಿರುದ್ಧ ಬೆಳಕಿನ ಜಯ, ಕೆಟ್ಟದ್ದರ ವಿರುದ್ಧ ಉತ್ತಮದ ಮತ್ತು ಅಜ್ಞಾನದ ಮೇಲಿನ ಜ್ಞಾನದ ಜಯವನ್ನು ಇದು ಪ್ರತಿನಿಧಿಸುತ್ತದೆ.

ದೀಪಾವಳಿ ಮುನ್ನಾದಿನದಂದು ಜನರು ದೀಪಗಳನ್ನು ಬೆಳಗಿಸಿ ಲಕ್ಷ್ಮಿ ದೇವಿಯನ್ನು ಪೂಜಿಸುತ್ತಾರೆ. ದೀಪಾವಳಿಯ ಮಾರನೆ ದಿನ ಜನರು ಹೊಸ ಬಟ್ಟೆಗಳನ್ನು ಧರಿಸುತ್ತಾರೆ. ಸಿಹಿತಿಂಡಿಗಳನ್ನು ತಯಾರಿಸಲಾಗುತ್ತದೆ ಮತ್ತು ಉಡುಗೊರೆಗಳನ್ನು ನೀಡಲಾಗುತ್ತದೆ.ಕಾರ್ತಿಕ ಮಾಸದಲ್ಲಿ ಮೂರು ದಿನ ದೀಪಾವಳಿಯನ್ನು ಆಚರಿಸಲಾಗುತ್ತದೆ. ಈ ಬಾರಿ ಕೊರೊನಾ ಹಿನ್ನೆಲೆ ಎಲ್ಲೆಡೆ ದೀಪಾವಳಿಯು ಸಡಗರ ಸಂಭ್ರಮವಿಲ್ಲದೆ ಸರಳವಾಗಿ ಆಚರಿಸಲಾಗುತ್ತಿದೆ.ಕತ್ತಲೆಯ ವಿರುದ್ದ ಬೆಳಕಿನ ಸಮರವೆಂಬಂತೆ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತದೆ.

ದೀಪಾವಳಿ ಸಂದರ್ಭದಲ್ಲಿ ಜನರು ಐಶ್ವರ್ಯ ವೃದ್ಧಿಗಾಗಿ ಲಕ್ಷ್ಮೀ ಪೂಜೆ ನೆರವೇರಿಸುವುದು ವಾಡಿಕೆ. ಇಂದಿನಿಂದ ಕಾರ್ತಿಕ ಮಾಸ ಮುಗಿಯುವವರೆಗೆ ಮನೆ ಮುಂದೆ ಹಣತೆಗಳನ್ನಿರಿಸಿ ದೀಪಾವಳಿ ಆಚರಿಸಲಾಗುತ್ತದೆ. ಮನೆಯಂಗಳದಲ್ಲಿ ಹಣತೆಯನ್ನಿರಿಸಿ ಪೂಜಿಸಲಾಗುತ್ತದೆ. ದೀಪಾವಳಿ ಸಂದರ್ಭದಲ್ಲಿ ಗೋಪೂಜೆ, ಅಂಗಡಿ ಪೂಜೆಗಳನ್ನೂ ನೆರವೇರಿಸಲಾಗುತ್ತದೆ.

ಒಟ್ನಲ್ಲಿ ಒಂದು ತಿಂಗಳ ಕಾಲ ದೀಪಾವಳಿ ಹಬ್ಬದ ಆಚರಣೆಯಿರಲಿದೆ.

bangalore

ಮಹಿಳೆಯ ಅತಿಯಾದ ಕಾಮದಾಹ…! ದಾಹಕ್ಕೆ ಅಂತ್ಯ ಹಾಡಿದ ಯುವಕ..!

Published

on

ಬೆಂಗಳೂರು : ಆಕೆ 48 ವರ್ಷ ಪ್ರಾಯದ ಮಹಿಳೆಯಾಗಿದ್ದು, ತನ್ನಿಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿ ಗಂಡನ ಮನೆಗೆ ಕಳುಹಿಸಿ ಕೊಟ್ಟಿದ್ದಾಳೆ. ಬೆಂಗಳೂರಿನ ಕೊಡಿಗೆ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿದ್ದ ಆಕೆಯ ದೇಹ ನಗ್ನವಾಗಿ ಬೆಡ್‌ರೂಮಿನಲ್ಲಿ ಪತ್ತೆಯಾಗಿತ್ತು. ಎಪ್ರಿಲ್ 19 ರಂದು ನಡೆದಿದ್ದ ಈ ಘಟನೆಯನ್ನು ಭೇದಿಸಿದ ಪೊಲೀಸರಿಗೆ ಶಾಕ್ ಆಗುವಂತ ವಿಚಾರಗಳು ಗೊತ್ತಾಗಿದೆ.

ಕೊಡಿಗೆ ಹಳ್ಳಿಯ ಭದ್ರಪ್ಪ ಲೇಔಟ್‌ನಲ್ಲಿ ನಡೆದಿದ್ದ ಶೋಭಾ ಎಂಬ ಮಹಿಳೆಯ ಕೊ*ಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಕೊಲೆ ಆರೋಪಿಯಾಗಿರುವ ನವೀನ್ ಎಂಬ ಯುವಕನನ್ನು ಕೊಡಿಗೆ ಹಳ್ಳಿಯ ಪೊಲೀಸರು ಬಂದಿಸಿದ್ದಾರೆ. ವಿಚಾರಣೆ ವೇಳೆ ಬಾಯ್ಬಿಟ್ಟ ವಿಚಾರ ಕೇಳಿ ಪೊಲೀಸರೇ ಸುಸ್ತಾಗಿದ್ದಾರೆ. ಬಳಿಕ ಹೆಚ್ಚಿನ ತನಿಖೆ ನಡೆಸಿದ ಪೊಲೀಸರಿಗೆ ಶೋಭಾಳ ಕಾಮದಾಹ ಬೆಳಕಿಗೆ ಬಂದಿದೆ.

ಇದನ್ನೂ ಓದಿ ಗಂಡ-ಹೆಂಡತಿ ಬೇರೆ ಬೇರೆ ಮಲಗಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?

ಶೋಭಾಳಿಗೆ ಇನ್‌ಸ್ಟಾಗ್ರಾಂ ಮೂಲಕ ಪರಿಚಿತನಾಗಿದ್ದ ನವೀನ್ ಬಳಿಕ ಸ್ನೇಹಿತನಾಗಿ, ಅದು ಪ್ರೀತಿಗೆ ತಿರುಗಿ ಬಳಿಕ ಇಬ್ಬರ ನಡುವೆ ಅನೈತಿಕ ಸಂಬಂಧದವರೆಗೂ ಬಂದು ನಿಂತಿತ್ತು. ಮಗನ ವಯಸ್ಸಿನ ಹುಡುಗನ ಜೊತೆಯಲ್ಲಿ ನಿರಂತರ ಸೆಕ್ಸ್ ಮಾಡುತ್ತಿದ್ದ ಶೋಭಾಳ ಅತಿಯಾದ ಕಾಮಧಾಹದಿಂದ ಬೇಸತ್ತು ಆಕೆಯನ್ನು ಕೊಲೆ ಮಾಡಿದ್ದಾಗಿ ಹೇರೋಹಳ್ಳಿ ಮೂಲದ ಆರೋಪಿ ನವೀನ್ ಹೇಳಿಕೆ ನೀಡಿದ್ದಾನೆ.

ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್‌ಗೆ ಸೆಕ್ಸ್‌ಗೆ ಒತ್ತಾಯಿಸಿದ್ದು ನಿರಾಕರಿಸಿದಾಗ ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ. ಈಕೆ ಅತಿಯಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಬೇಸರಗೊಂಡ ನವೀನ್‌ ಬೆಡ್‌ ರೂಮಿನಲ್ಲೇ ಆಕೆಯ ಕಥೆ ಮುಗಿಸಿದ್ದ.

48ರ ಮಹಿಳೆಗೆ ಯುವಕರ ಮೇಲೆ ಹುಚ್ಚು

48ರ ಶೋಭಾ ಕೇವಲ ನವೀನ್ ಮಾತ್ರವಲ್ಲದೇ ಅನೇಕ ಯುವಕರ ಸಹವಾಸ ಬೆಳೆಸಿದ್ದಳು. ಒಬ್ಬೊಬ್ಬ ಹುಡುಗರಿಗೂ ಒಂದೊಂದು ಹಣ್ಣಿನ ಹೆಸರಿಟ್ಟಿದ್ದು, ನವೀನ್‌ಗೆ ಆ್ಯಪಲ್ ಎಂದು ಹೆಸರಿಟ್ಟಿದ್ದಳಂತೆ. ಆ್ಯಪಲ್, ಆರೆಂಜ್, ಬನಾನ ಹೆಸರಿನಲ್ಲಿ ಹುಡುಗರ ಹೆಸರು ಸೇವ್ ಮಾಡಿಕೊಳ್ಳುತ್ತಿದ್ದಳು. ಆ್ಯಪ್‌ಗಳಲ್ಲಿಯೂ ಆ್ಯಕ್ಟಿವ್ ಆಗಿದ್ದ ಶೋಭಾ ಸುಮಾರು 20 ಕ್ಕೂ ಹೆಚ್ಚು ಹುಡುಗರನ್ನು ಖೆಡ್ಡಾಗೆ ಬೀಳಿಸಿಕೊಂಡಿದ್ದಳು. ಈಕೆ ಕರೆದಾಗ ಯುವಕರು ಏನಾದರೂ ಬಾರದೆ ಇದ್ದರೆ ಅವರ ಮನೆ ಬಳಿಯೇ ಹೋಗುತ್ತಿದ್ದಳು. ನಂತರ ಕಾರಿನ ಹಾರ್ನ್ ಜೋರಾಗಿ ಹಾಕುತ್ತಿದ್ದಳು. ಇಷ್ಟಕ್ಕೂ ಜಗ್ಗದೆ ಹೋದರೆ ಮನೆಯವರಿಗೆ ಖಾಸಗಿ ಫೋಟೊವನ್ನು ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು. ಅಷ್ಟೇ ಅಲ್ಲದೆ ಆ ಯುವಕರ ಮದುವೆಗೂ ಅಡ್ಡಿ ಪಡಿಸಿ ಮದುವೆ ನಿಲ್ಲಿಸಿದ್ದಳು.

ಇದನ್ನೂ ಓದಿ ರಿಯಾಲಿಟಿ ಶೋಗಳಲ್ಲೂ ಕಾಸ್ಟಿಂಗ್ ಕೌಚ್! ಡ್ಯಾನ್ಸಿಂಗ್ ಕ್ವೀನ್ ಬಿಚ್ಚಿಟ್ಟ ಸತ್ಯವೇನು?

ಕೊಲೆಯಾದ ದಿನವೂ ನವೀನ್‌ಗೆ ಬ್ಲಾಕ್ ಮೇಲ್ ಮಾಡಿ ಕರೆಸಿಕೊಂಡಿದ್ದಳು. ನವೀನ್‌ ಎಡಗೈಗೆ ಗಾಯವಾಗಿತ್ತು, ಗಾಯದ ಮೇಲೆ ಕೂತು ನೀನು‌ ಮದುವೆ ಆಗಬಾರದು, ಹೀಗೆ ನನ್ನ ಜತೆ ಇರಬೇಕು. ಮದುವೆ ಆದರೆ ಅಲ್ಲೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಬೇಸತ್ತ ನವೀನ್‌, ಶೋಭಾಳ ಕತ್ತು ಹಿಸುಕಿ ಕೊ*ಲೆ‌ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ.

Continue Reading

BANTWAL

ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು

Published

on

ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್‌ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.


ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.

Continue Reading

DAKSHINA KANNADA

ಗಂಡ-ಹೆಂಡತಿ ಬೇರೆ ಬೇರೆ ಮಲಗಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?

Published

on

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಜನರು ರಾತ್ರಿಯ ಹೊತ್ತನ್ನು ಮೊಬೈಲ್, ಆನ್ಲೈನ್ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಕಳೆಯುತ್ತಾರೆ. ಇದು ಅವರಿಗೆ ನಿದ್ರಾಹೀನತೆ ಸಮಸ್ಯೆಗೂ ಕಾರಣವಾಗುತ್ತದೆ. ರಾತ್ರಿ ಬೇಗ ಮಲಗದೇ ಇರುವುದು ಮತ್ತು ಮಧ್ಯಾಹ್ನ ನಿದ್ದೆ ಮಾಡುವುದು ಹೀಗೆ ಮಾಡಿದರೆ ಆರೋಗ್ಯ ಹಾಳಾಗುತ್ತದೆ. ರಾತ್ರಿಯ ಹೊತ್ತು ಚಿಕ್ಕ ಮಕ್ಕಳು ಅಪ್ಪ ಅಮ್ಮನ ಒಟ್ಟಿಗೆ ಮಲಗುತ್ತಾರೆ. ಅದೇ ರೀತಿ ಗಂಡ ಹೆಂಡತಿಯರು ಒಟ್ಟಿಗೆ ಮಲಗುವುದು ಸರ್ವೇ ಸಾಮಾನ್ಯ.

ಮದುವೆಯ ನಂತರ ಸಾಮಾನ್ಯವಾಗಿ ಗಂಡ ಹೆಂಡತಿ ಒಟ್ಟಿಗೆ ಮಲಗುತ್ತಾರೆ. ಇದು ಸಮಾಜದ ಸಾಮಾನ್ಯ ನಿಯಮ ಸಹ ಹೌದು ಎನ್ನಬಹುದು. ಮದುವೆಯ ನಂತರ ಪತಿ-ಪತ್ನಿಯರ ನಡುವಿನ ಚರ್ಚೆಗಳು, ಮಾತುಗಳು ಸಾಮಾನ್ಯವಾಗಿ ಮಲಗುವ ಸಮಯದಲ್ಲೇ ಆಗುತ್ತದೆ. ಇನ್ನು ಪತಿ-ಪತ್ನಿಯರು ಪ್ರತ್ಯೇಕವಾಗಿ ಮಲಗುವುದರಿಂದಲೂ ಹಲವಾರು ರೀತಿಯ ಪ್ರಯೋಜನಗಳಿವೆ ಎಂದು ವರದಿ ಮೂಲಕ ತಿಳಿದುಬಂದಿದೆ.

ಮೊದಲಿಗೆ, ಈ ವಿಷಯದ ಬಗ್ಗೆ ಮಾಡಿದ ಎಲ್ಲಾ ಸಂಶೋಧನೆಗಳು ಗಂಡ ಮತ್ತು ಹೆಂಡತಿ ಪ್ರತ್ಯೇಕವಾಗಿ ಮಲಗುವುದು ತಪ್ಪಲ್ಲ ಎಂದು ತೋರಿಸುತ್ತದೆ ಮತ್ತು ಪ್ರತಿ ದಂಪತಿಗಳು ತಮ್ಮದೇ ಆದ ನಿಯಮಗಳನ್ನು ಮಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ತಿಳಿಸಿದೆ. ಆದರೆ ಅನೇಕ ಬಾರಿ ಜನರು ಇಂತಹ ಮಾತುಗಳನ್ನು ಕೇಳಲು ವಿಭಿನ್ನವಾಗಿ ಪ್ರತಿಕ್ರಿಯಿಸುತ್ತಾರೆ ಮತ್ತು ಈ ದಂಪತಿಗಳ ಜೀವನದಲ್ಲಿ ಏನೋ ಸರಿಯಾಗಿಲ್ಲ ಎಂದು ಭಾವಿಸುತ್ತಾರೆ.

ಆದರೆ ಅಷ್ಟೇ ಅಲ್ಲ, ಕೆಲವೊಮ್ಮೆ ಬೇರೆ ಬೇರೆ ಕೋಣೆಗಳಲ್ಲಿ ದಂಪತಿಗಳಿಗೆ ಮಲಗುವುದರಿಂದ ದಂಪತಿಗಳಿಗೆನೇ ಹೆಚ್ಚು ಅನುಕೂಲಕರವಾಗಿರುತ್ತದೆ. ಸಂಶೋಧನೆಯ ಪ್ರಕಾರ ನೀವು ಪ್ರತ್ಯೇಕವಾಗಿ ಏಕೆ ಮಲಗುವುದರಿಂದ ಯಾವುದೇ ನಿದ್ರಾ ಭಂಗವನ್ನು ಉಂಟುಮಾಡುವುದಿಲ್ಲ. ಇದರಿಂದ ಸುಖಕರವಾಗಿ ನಿದ್ರೆ ಮಾಡಬಹುದು.

ರಾತ್ರಿಯಲ್ಲಿ ಗೊರಕೆ ಹೊಡೆಯುವುದು, ಒದೆಯುವುದು, ದೇಹದ ಉಷ್ಣತೆಯ ಬದಲಾವಣೆ ವಿಭಿನ್ನವಾಗಿರುತ್ತದೆ. ನೀವು ಕೆಲವೊಮ್ಮೆ ಪ್ರತ್ಯೇಕವಾಗಿ ಮಲಗಲು ಪ್ರಯತ್ನಿಸಿದರೆ ನಿಮ್ಮ ದೇಹವು ಅರಾಮವಾಗಲು ಸಹಾಯಕವಾಗುತ್ತದೆ. ಸ್ವಲ್ಪ ಸಮಯದ ಅಂತರವು ನಿಮ್ಮ ಸಂಬಂಧವನ್ನು ಹೆಚ್ಚು ಉತ್ತಮಗೊಳಿಸುತ್ತದೆ. ನಿಮಗೆ ವಿಶ್ರಾಂತಿ ಪಡೆಯಲು ಸಮಯ ಸಿಗುತ್ತದೆ.


ಜೊತೆಗೆ ಕೆಲವೊಮ್ಮೆ ದಂಪತಿಗಳ ನಡುವೆ ಮನಸ್ಥಾಪವಾದಾಗ ಈ ರೀತಿ ಕೆಲ ದಿನ ದೂರ ಮಲಗಿದರೆ ಆ ವಿರಹ ವೇದನೆಯಿಂದ ಕೋಪವೂ ತಣ್ಣಗಾಗುತ್ತದೆ. ದೈಹಿಕ ಅನ್ಯೋನ್ಯತೆ ಮತ್ತು ಭಾವನಾತ್ಮಕ ಪ್ರೀತಿಯ ಅವಶ್ಯಕತೆ ಯಾವಾಗಲೂ ಇರುತ್ತದೆ ಮತ್ತು ಆದ್ದರಿಂದ ಕೆಲವೊಮ್ಮೆ ಪ್ರತ್ಯೇಕವಾಗಿ ಮಲಗುವುದು ಉತ್ತಮ. ಜೊತೆಗೆ ಕೆಲವೊಮ್ಮೆ ಜ್ವರ ರೀತಿಯ ಅನಾರೋಗ್ಯವಿದ್ದಾಗ ದೂರ ಮಲಗಿದರೆ ಒಬ್ಬರಿಂದ ಒಬ್ಬರಿಗೆ ಅದು ಹರಡುವುದಿಲ್ಲ.

ಇದನ್ನೂ ಓದಿ ULLALA : ಮಲಗಿದ್ದಲ್ಲೇ ಹೃದಯಾಘಾ*ತಕ್ಕೆ ಬ*ಲಿಯಾದ ಯುವಕ

ಕೆಲವೊಮ್ಮೆ ದಂಪತಿಗಳಿಗೆ ಸ್ವಲ್ಪ ಅಂತರ ಕಾಯ್ದುಕೊಳ್ಳುವುದು ಅವರ ಲೈಂಗಿಕ ಜೀವನಕ್ಕೆ ಒಳ್ಳೆಯದು ಎಂದು ಸಂಶೋಧನೆ ಸೂಚಿಸುತ್ತದೆ. ಇದರಿಂದ ದಣಿವು ಆಗುವುದು ಕಡಿಮೆ ಆಗುತ್ತದೆ. ಪರಿಣಾಮವಾಗಿ, ಲೈಂಗಿಕ ಜೀವನವನ್ನು ಸುಧಾರಿಸಬಹುದು.

Continue Reading

LATEST NEWS

Trending