BANTWAL
ಮಂಗಳೂರು: ಸರ್ಕಾರಿ ಕೆಲಸಗಳಲ್ಲಿ ವಿಳಂಬ- ನೌಕರರ ವಿರುದ್ಧ ದೂರು ನೀಡಲು ಲೋಕಾಯುಕ್ತ ಮನವಿ
Published
2 years agoon
By
Adminಮಂಗಳೂರು: ಸಾರ್ವಜನಿಕರ ಕುಂದು ಕೊರತೆ, ಅಹವಾಲುಗಳನ್ನು ಆಲಿಸಲು ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಮಾ.18 ರಿಂದ 28ರ ವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಭೆಗಳನ್ನು ಹಮ್ಮಿಕೊಂಡಿದ್ದಾರೆ.
ವಿವರ ಇಂತಿದೆ
ಮುಲ್ಕಿ ತಾಲೂಕಿನಲ್ಲಿ ಮಾ.18ರ ಶನಿವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1ರ ವರೆಗೆ ಮುಲ್ಕಿ ನಗರ ಪಂಚಾಯತ್ ಸಮುದಾಯ ಭವನದಲ್ಲಿ, ಬಂಟ್ವಾಳದಲ್ಲಿ ಮಾ. 21ರ ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರ ವರೆಗೆ ಬಂಟ್ವಾಳ ತಾಲೂಕು ಕಚೇರಿಯಲ್ಲಿ, ಪುತ್ತೂರು ತಾಲೂಕಿನಲ್ಲಿ ಮಾ.27ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ವರೆಗೆ ಪುತ್ತೂರು ತಾಲೂಕು ಕಚೇರಿಯಲ್ಲಿ ಹಾಗೂ ಸುಳ್ಯ ತಾಲೂಕಿನಲ್ಲಿ ಮಾ.28ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1ರ ವರೆಗೆ ಸುಳ್ಯ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ, ಅಹವಾಲುಗಳನ್ನು ಆಲಿಸುವರು.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿಗಳು, ನೌಕರರ ವಿರುದ್ಧ ಸಾರ್ವಜನಿಕರು ಈ ಸಂದರ್ಭದಲ್ಲಿ ದೂರು ನೀಡಬಹುದಾಗಿದೆ.
ಇದಲ್ಲದೇ ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಕೂಡ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ಸಲ್ಲಿಸಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಅರ್ಜಿಗಳನ್ನು ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬಹುದು.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ
ಪೊಲೀಸ್ ಅಧೀಕ್ಷಕರ ಕಚೇರಿ-0824 – 2950997, 9448125325, ಪೊಲೀಸ್ ಉಪಾಧೀಕ್ಷಕರು-0824–2453420, 9448635348.
ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಸಿ.ಎ. ಸೈಮನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BANTWAL
ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟರಿಗೆ ಕಾರು ಢಿಕ್ಕಿ; ಸವಾರ ದುರ್ಮರಣ
Published
1 week agoon
16/01/2025By
NEWS DESK3ಬಂಟ್ವಾಳ : ಕಾರೊಂದು ಢಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಗಂಭಿರ ಗಾಯಗೊಂಡು ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಂಟ್ವಾಳ ತಾಲೂಕಿನ ಪೆರಮುಗೇರು ಸತ್ತಿಕಲ್ಲು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.
ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಕುದ್ಮಾನ್ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಉಸ್ಮಾನ್ (24) ಮೃತರು ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಪೈಂಟರ್ ಆಗಿದ್ದ ಉಸ್ಮಾನ್ ಅವರು ತನ್ನ ಸ್ಕೂಟರ್ ನಲ್ಲಿ ಮನೆಗೆ ತೆರಳುತ್ತಿದ್ದು ಸತ್ತಿಕಲ್ಲಿನಲ್ಲಿ ರಸ್ತೆ ಬದಿಯಲ್ಲಿ ಸ್ಕೂಟರ್ ನಿಲ್ಲಿಸಿ ಮೊಬೈಲ್ ನಲ್ಲಿ ಮಾತನಾಡುತ್ತಿರುವ ವೇಳೆ ನೋಂದಣಿಯಾಗದ ಕಾರೊಂದು ಏಕಾಏಕಿ ಅವರ ಸ್ಕೂಟರ್ ಗೆ ಢಿಕ್ಕಿಯಾಗಿತ್ತು.
ಇದನ್ನೂ ಓದಿ: ಬೈಕ್‌ಗಳು ಪರಸ್ಪರ ಮು*ಖಾಮು*ಖಿ ; ಬಾಲಕಿ ಸಾ*ವು
ಈ ಸಂದರ್ಭ ಸ್ಕೂಟರ್ ನಲ್ಲಿ ಕುಳಿತಿದ್ದ ಉಸ್ಮಾನ್ ಅವರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆಯಿಂದ ಕಾರು ಮತ್ತು ಬೈಕ್ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಬಂಟ್ವಾಳ: ಬೈಕ್ ಗಳ ನಡುವೆ ಭೀ*ಕರ ಅ*ಪಘಾ*ತ ಸಂಭವಿಸಿ ಬೈಕ್ ನಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃ*ತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಿನ್ನೆ (ಜ.14) ರಾತ್ರಿ ನಡೆದಿದೆ.
ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃ*ತ ಬಾಲಕಿ ಎಂದು ಗುರುತಿಸಲಾಗಿದೆ.
ಬಾಲಕಿಯ ತಂದೆ ಬೈಕ್ ಚಾಲಕ ಅಬ್ದುಲ್ ರಹಮಾನ್ ಕೂಡ ಗಾ*ಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ : ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ
ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ ರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿ*ಕ್ಕಿ ಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾ*ಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.
ಅ*ಪಘಾ*ತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜ*ಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.
ಬೆಳ್ತಂಗಡಿ,ಸುಳ್ಯ ತಾಲೂಕಿನಲ್ಲಿ ಮಳೆಯಿಂದಾಗಿ ರೈತರು ಒಣ ಹಾಕಿದ್ದ ಅಡಿಕೆಗಳು ಒದ್ದೆಯಾಗಿ ನಷ್ಟ ಉಂಟಾಗಿದೆ. ಬಂಟ್ವಾಳದಲ್ಲಿ ಸಾಧಾರಣ ಮಳೆಯಾಗಿದ್ದು, ಮೆಲ್ಕಾರಿನಲ್ಲಿ ನಡೆಯುತ್ತಿದ್ದ ಕಟೀಲು ಯಕ್ಷಗಾನ ಬಯಲಾಟ ವೀಕ್ಷಣೆ ಮಾಡುತ್ತಿದ್ದವರು ಎದ್ದು ಮಳೆಯಿಂದ ರಕ್ಷಣೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ
ಮಂಗಳೂರು ಸುತ್ತಮುತ್ತ ಕೂಡಾ ಮಳೆಯಾಗಿದ್ದು ,ಉಳ್ಳಾಲದಲ್ಲಿ ಅರ್ಧಗಂಟೆಗೂ ಅಧಿಕ ಕಾಲ ಮಳೆ ಸುರಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಧ್ಯ ಪಾಕಿಸ್ತಾನ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಉಂಟಾದ ಹವಾಮಾನ ವೈಪರೀತ್ಯದಿಂದ ಈಶಾನ್ಯ ಅರೇಬಿಯನ್ ಸಮುದ್ರದಿಂದ ಪಶ್ಚಿಮ ಮಾರುತ ಬೀಸುತ್ತಿರುವುದು ಈ ಮಳೆಗೆ ಕಾರಣ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
LATEST NEWS
ಕಳ್ಳತನ ನಡೆದ 7 ಗಂಟೆಯೊಳಗೆ ಆರೋಪಿ ದಂಪತಿ ಅಂದರ್
ಮಹಾಕುಂಭ ಮೇಳದಲ್ಲಿ ಭಾಗಿಯಾದ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್
ಕಡಬ : ಐಷಾರಾಮಿ ಕಾರಿನಲ್ಲಿ ಬಂದು ಡೀಸಿಲ್ ಖರೀದಿ ಮಾಡಿ ಪರಾರಿ
ಪ್ರೀತಿ ಗುಟ್ಟು ರಟ್ಟು: ಆ*ತ್ಮಹ*ತ್ಯೆಗೆ ಶರಣಾದ ಪಿಯುಸಿ ವಿದ್ಯಾರ್ಥಿನಿ
ಗೌತಮಿ-ಧನರಾಜ್ ಬೆನ್ನಲ್ಲೇ ಈ ವಾರ ಫಸ್ಟ್ ಎಲಿಮಿನೇಟ್ ಆಗೋದ್ಯಾರು ?
ಮಹಾಕುಂಭ ಮೇಳ : ಪುಣ್ಯಸ್ನಾನದಲ್ಲಿ ಭಾಗಿಯಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್
Trending
- BIG BOSS19 hours ago
ಗೌತಮಿ-ಧನರಾಜ್ ಬೆನ್ನಲ್ಲೇ ಈ ವಾರ ಫಸ್ಟ್ ಎಲಿಮಿನೇಟ್ ಆಗೋದ್ಯಾರು ?
- BIG BOSS3 days ago
ಬಿಗ್ ಬಾಸ್ ತೊರೆಯುವ ಬಗ್ಗೆ ಮತ್ತೊಮ್ಮೆ ಘೋಷಣೆ ಮಾಡಿದ ಕಿಚ್ಚ
- BIG BOSS3 days ago
ಬಿಗ್ ಬಾಸ್ ಸೀಸನ್ 11ರ ವಿನ್ನರ್ ಒಬ್ಬರಲ್ಲ ಇಬ್ಬರು… ಅಷ್ಟಕ್ಕೂ ಟ್ರೋಫಿ ನೀಡಿದ ಸುಳಿವೇನು ?
- FILM3 days ago
ಕಾಂತಾರ ಚಿತ್ರತಂಡಕ್ಕೆ ಎಚ್ಚರಿಕೆ ಕೊಟ್ಟ ಗ್ರಾಮಸ್ಥರು