Connect with us

LATEST NEWS

ಏ.21ರಂದು ಬೆಂಗಳೂರಿನಲ್ಲಿ ರೈತರ ಬೃಹತ್‌ ಸಮಾವೇಶ: ಕೇಜ್ರಿವಾಲ್‌ ಭಾಗಿ

Published

on

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರು ಏಪ್ರಿಲ್‌ 21ರಂದು ಬೆಂಗಳೂರಿಗೆ ಆಗಮಿಸಲಿದ್ದು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದಲ್ಲಿ ನಡೆಯಲಿರುವ ಬೃಹತ್‌ ರೈತ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.


ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, “ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಸಮಾವೇಶ ಆರಂಭವಾಗಲಿದೆ.

ದೆಹಲಿ ಮಾದರಿಯಿಂದ ಪ್ರೇರಣೆ ಹೊಂದಿರುವ ರಾಜ್ಯ ರೈತ ಸಂಘವು ಸಿಎಂ ಕೇಜ್ರಿವಾಲ್‌ರವರಿಗೆ ವಿಶೇಷ ಆಹ್ವಾನ ನೀಡಿದ್ದು, ಅವರು ಆಗಮಿಸಿ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ” ಎಂದರು.

ರಾಜ್ಯದ ಸುಮಾರು 50 ಸಾವಿರ ರೈತರು ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಿನವಾಗಲಿದೆ ಎಂದು ಅವರು ಹೇಳಿದರು.

ಜನಸಾಮಾನ್ಯರ ಕುಂದುಕೊರತೆಗಳನ್ನು ಅರಿತುಕೊಂಡು ಬದಲಾವಣೆ ತರುತ್ತಿರುವ ಏಕೈಕ ಪಕ್ಷವೆಂದರೆ ಆಮ್‌ ಆದ್ಮಿ ಪಾರ್ಟಿ.

ಪ್ರಾಮಾಣಿಕ ವ್ಯಕ್ತಿಗಳು ರಾಜಕಾರಣಕ್ಕೆ ಬಂದರೆ ಜನಪರ ಕೆಲಸಗಳನ್ನು ದೊಡ್ಡ ಮಟ್ಟದಲ್ಲಿ ಮಾಡಬಹುದು, ಭ್ರಷ್ಟಾಚಾರವಿಲ್ಲದ ಆಡಳಿತ ನೀಡಬಹುದು ಎಂಬುದನ್ನು ದೆಹಲಿಯ ಕೇಜ್ರಿವಾಲ್‌ ನೇತೃತ್ವದ ಸರ್ಕಾರ ಕಳೆದ ಏಳು ವರ್ಷಗಳಲ್ಲಿ ತೋರಿಸಿಕೊಟ್ಟಿದೆ.

ತೆರಿಗೆ ಹಣವು ಕಳ್ಳ ರಾಜಕಾರಣಿಗಳ ಜೇಬು ಸೇರುವುದನ್ನು ತಪ್ಪಿಸಿ, ಅಲ್ಲಿನ ಆರೋಗ್ಯ, ಶಿಕ್ಷಣ, ನೀರು, ವಿದ್ಯುತ್ ಮುಂತಾದ ಮೂಲಸೌಕರ್ಯ ನೀಡುವುದಕ್ಕೆ ಬಳಸಲಾಗಿದೆ” ಎಂದು ಪೃಥ್ವಿ ರೆಡ್ಡಿ ಹೇಳಿದರು.
ಕಳೆದ 75 ವರ್ಷಗಳಲ್ಲಿ ಕರ್ನಾಟಕದ ರೈತರು ಮೂರೂ ಪಕ್ಷಗಳಿಗೆ ಮತ ನೀಡಿ ಗೆಲ್ಲಿಸಿ ಕಳಿಸಿದರು. ಮೂರೂ ಪಕ್ಷಗಳಲ್ಲಿ ಯಾರೂ ರೈತನ ಬವಣೆ ಅರ್ಥ ಮಾಡಿಕೊಳ್ಳಲಿಲ್ಲ. ಎಲ್ಲರಿಂದ ಅನ್ಯಾಯ ಎದುರಿಸಿ ತಾವೇ ರಾಜಕಾರಣಕ್ಕಿಳಿಯಲು ರೈತರು ತೀರ್ಮಾನಿಸಿದ್ದಾರೆ.

ಅವರ ಮುಂದಿರುವ ಎಲ್ಲಾ ಆಯ್ಕೆಗಳನ್ನು ಪರಿಶೀಲಿಸಿ, ಆಮ್ ಆದ್ಮಿ ಪಾರ್ಟಿಯೊಂದೇ ತಮಗೆ ನ್ಯಾಯ ದೊರಕಿಸಿಕೊಡಲು ಸಾಧ್ಯ ಎಂಬ ತೀರ್ಮಾನಕ್ಕೆ ರೈತರು ಬಂದಿದ್ದಾರೆ” ಎಂದು ಪೃಥ್ವಿ ರೆಡ್ಡಿ ಹೇಳಿದರು.
ಪತ್ರಿಕಾ ಗೋಷ್ಟಿಯಲ್ಲಿ ಭಾಸ್ಕರ್ ರಾವ್ ಮಾತನಾಡಿ “ಇತ್ತೀಚೆಗೆ ನಡೆದ ಪಂಜಾಬ್ ಚುನಾವಣೆಯಲ್ಲಿ 117 ಸ್ಥಾನಗಳ ಪೈಕಿ 92 ಸ್ಥಾನಗಳಲ್ಲಿ ಎಎಪಿ ಗೆದ್ದಿದೆ.

ಇದರಲ್ಲಿ 82 ಜನರು ಇದೇ ಮೊದಲ ಬಾರಿಗೆ ಚುನಾವಣೆ ಎದುರಿಸಿದವರು. ಬೇರೆ ಪಕ್ಷದವರ ರೀತಿ ಎಎಪಿ ವ್ಯಕ್ತಿಯ ಬ್ಯಾಂಕ್ ಬ್ಯಾಲೆನ್ಸ್ ನೋಡುವುದಿಲ್ಲ.

ಬದಲಾಗಿ, ಆತನ ಸಾಮಾಜಿಕ ಕಾಳಜಿ ಹಾಗೂ ಮತದಾರರ ಬಗ್ಗೆ ಇರುವ ಕಳಕಳಿಯನ್ನು ನೋಡುತ್ತದೆ. ಸಾಮಾನ್ಯರನ್ನು ನಾಯಕರನ್ನಾಗಿ ಮಾಡುವ ಎಎಪಿಯನ್ನು ಜನಸಾಮಾನ್ಯರು ಬಳಸಿಕೊಳ್ಳಬೇಕು” ಎಂದರು.

ಸುದ್ದಿಗೋಷ್ಠಿಯಲ್ಲಿ ಎಎಪಿ ರಾಜ್ಯ ಉಪಾಧ್ಯಕ್ಷ ವಿಜಯ್ ಶರ್ಮಾ, ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ, ಸಂಚಿತ್ ಸೆಹ್ವಾನಿ , ಜಗದೀಶ್‌ ವಿ ಸದಂ, ಬಿ.ಟಿ ನಾಗಣ್ಣ, ಸುರೇಶ್ ರಾಥೋಡ್ , ಚನ್ನಪ್ಪಗೌಡ ನಲ್ಲೂರು ,ಜಗದೀಶ್ ಚಂದ್ರ , ಅಶೋಕ್ ಮೃತ್ಯುಂಜಯ, ವಿಜಯ್ ಶಾಸ್ತ್ರಿಮಠ ಕುಶಲ ಸ್ವಾಮಿ, ಉಷಾ ಮೋಹನ್ ಸೇರಿದಂತೆ ಹಲವಾರು ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.

bengaluru

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ಕಸ್ಟಮ್ಸ್ ಅಧಿಕಾರಿಗಳಿಗೆ ಶಾಕ್; ಅದರಲ್ಲಿತ್ತು 10 ಅನಕೊಂಡಾ!

Published

on

ಬೆಂಗಳೂರು : ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣೆ ನಡೆಸುತ್ತಿದ್ದ ಕಸ್ಟಮ್ಸ್ ಅಧಿಕಾರಿಗಳು ಶಾಕ್ ಗೆ ಒಳಗಾಗಿದ್ದಾರೆ. ಯಾಕೆಂದರೆ, ಪ್ರಯಾಣಿಕನೊಬ್ಬನ ಬ್ಯಾಗ್ ನಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ 10 ಅನಕೊಂಡಾ ಪತ್ತೆಯಾಗಿವೆ. ಆತ ಬ್ಯಾಂಕಾಕ್​ನಿಂದ ಅಕ್ರಮವಾಗಿ 10 ಅನಕೊಂಡಾ ಹಾವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಬ್ಯಾಂಕಾಕ್​ನಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರ ಲಗೇಜ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬನ ಲಗೇಜ್​ ತಪಾಸಣೆ ಮಾಡುವಾಗ 10 ಹಳದಿ ಅನಕೊಂಡ ಪತ್ತೆಯಾಗಿವೆ.

ಕೂಡಲೇ ಅಧಿಕಾರಿಗಳು ಪ್ರಯಾಣಿಕನನ್ನ ವಶಕ್ಕೆ ಪಡೆದಿದ್ದು, ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಹಳದಿ ಬಣ್ಣ ಆನಕೊಂಡಾ ಹಾವುಗಳನ್ನು ರಕ್ಷಿಸಿ, ಅರಣ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ.

ಇದನ್ನೂ ಓದಿ : ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

ವನ್ಯಜೀವಿಗಳ ಕಳ್ಳಸಾಗಣೆ ಮಾಡಿದ ಆರೋಪದಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

Published

on

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್‌ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್‌ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

mobile not allowed

ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

ಮತದಾನ ಮಾಡುವಾಗ ಫೋನ್‌ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್‌ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್‌ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

LATEST NEWS

Trending