Saturday, November 26, 2022

ದೆಹಲಿ ಸಚಿವ ಸತ್ಯೇಂದರ್ ಜೈನ್‌ಗೆ ತಿಹಾರ್ ಜೈಲಿನಲ್ಲಿ ‘ಬಾಡಿ ಮಸಾಜ್’-ವೀಡಿಯೋ ವೈರಲ್..!

ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ದಿಲ್ಲಿಯ ಆರೋಗ್ಯ ಸಚಿವ, ಎಎಪಿ ನಾಯಕ ಸತ್ಯೇಂದರ್ ಜೈನ್ ಇದೀಗ ಜೈಲನ್ನೇ ಮಸಾಜ್ ಪಾರ್ಲರ್ ಮಾಡಿಕೊಂಡಂತೆ ಕಾಣುತ್ತಿದೆ. ತಿಹಾರ್ ಜೈಲಿನಲ್ಲಿರುವ ಜೈನ್ ಅವರಿಗೆ ಮಸಾಜ್ ಮಾಡುವ ವಿಡಿಯೋ ವೈರಲ್ ಆಗಿದೆ. ಆರೋಪಿಗೆ ಎಎಪಿ ಸರ್ಕಾರ ಐಷಾರಾಮಿ ಸವಲತ್ತು ನೀಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.


ಆರ್ಥಿಕವಾಗಿ ಬಲಿಷ್ಠರಾಗಿರುವ ಅದರಲ್ಲೂ ರಾಜಕೀಯ ಕ್ಷೇತ್ರದಲ್ಲಿ ಮೇಲಿನ ಸ್ತರದಲ್ಲಿ ಗುರುತಿಸಿಕೊಂಡಿರುವವರನ್ನು ತಿಹಾರ್ ಜೈಲಿನಲ್ಲಿ ರಾಜಾತಿಥ್ಯದೊಂದಿಗೆ ಸತ್ಕರಿಸಲಾಗುತ್ತದೆ ಎಂಬ ಸುದ್ದಿ ಇಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದೀಗ ಬಿಜೆಪಿಯ ಅನೇಕ ನಾಯಕರು ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದು, ಜೈಲಿನಲ್ಲಿ ಜೈನ್ ಅವರಿಗೆ ವಿಶೇಷ ಸೌಲಭ್ಯ ನೀಡಲಾಗುತ್ತಿದೆ ಎಂಬ ಆರೋಪವನ್ನು ಪುನರುಚ್ಚರಿಸಿದ್ದಾರೆ.

ಮೇ ತಿಂಗಳಲ್ಲಿ ಬಂಧಿತರಾಗಿರುವ ಎಎಪಿ ಸಚಿವ ಜೈನ್ ಅವರಿಗೆ ಜೈಲಿನಲ್ಲಿ ವಿಐಪಿ ಸವಲತ್ತು ಒದಗಿಸಲಾಗುತ್ತಿದೆ ಎಂಬ ಆರೋಪದಲ್ಲಿ ತಿಹಾರ್ ಜೈಲಿನ ಸುಪರಿಂಟೆಂಡೆಂಟ್ ಅಜಿತ್ ಕುಮಾರ್ ಅವರನ್ನು ಅಮಾನತು ಮಾಡಿದ ಕೆಲವು ದಿನಗಳ ಬಳಿಕ ವಿಡಿಯೋ ಬಿಡುಗಡೆಯಾಗಿದೆ.

ವೈರಲ್ ಆಗಿರುವ ವೀಡಿಯೋದಲ್ಲಿ ತಿಹಾರ್ ಜೈಲಿನ ಕೊಠಡಿ ಒಳಗೆ ಸತ್ಯೇಂದರ್ ಜೈನ್ ಅವರಿಗೆ ಕಾಲು, ಬೆನ್ನು ಹಾಗೂ ತಲೆಗೆ ಮಸಾಜ್ ಮಾಡುವುದು ವಿಡಿಯೋದಲ್ಲಿ ಸೆರೆಯಾಗಿದೆ. ಜೈನ್ ಅವರನ್ನು ಬಂಧಿಸಿದ್ದ ಜಾರಿ ನಿರ್ದೇಶನಾಲಯ ಕೂಡ, ಜೈಲಿನಲ್ಲಿ ಅವರಿಗೆ ಐಷಾರಾಮಿ ಜೀವನ ಸವಲತ್ತು ನೀಡಲಾಗುತ್ತಿದೆ ಎಂದು ಕಳೆದ ತಿಂಗಳು ಆರೋಪಿಸಿತ್ತು.

ದಿಲ್ಲಿ ನ್ಯಾಯಾಲಯಕ್ಕೆ ಅದು ಸಿಸಿಟಿವಿ ವಿಡಿಯೋ ದೃಶ್ಯಗಳನ್ನು ಸಲ್ಲಿಸಿತ್ತು. ಜೈನ್ ಅವರು ತಮ್ಮ ಅಧಿಕಾರ ಬಳಸಿಕೊಂಡು ಲಾಭ ಪಡೆಯುತ್ತಿದ್ದಾರೆ ಎಂದು ಹೇಳಲಾಗಿತ್ತು.

ಇನ್ನು ಈ ಬಗ್ಗೆ ಹೇಳಿಕೆ ನೀಡಿರುವ ದಿಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ‘ಜೈಲಿನಲ್ಲಿ ಗಾಯಗೊಂಡಿರುವ ಸತ್ಯೇಂದರ್ ಜೈನ್ ಅವರು ಎರಡು ಬಾರಿ ಬೆನ್ನಹುರಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಅವರಿಗೆ ಫಿಸಿಯೋಥೆರಪಿ ನಡೆಸುವಂತೆ ಆಸ್ಪತ್ರೆ ಸಲಹೆ ನೀಡಿದೆ’ ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ಬಗ್ಗೆ ವ್ಯಂಗ್ಯವಾಡಿದ ಬಿಜೆಪಿ ವಕ್ತಾರ ಗೌರವ್ ಭಾಟಿಯಾ ‘ಆಮ್ ಆದ್ಮಿ ಪಕ್ಷವು ‘ಸ್ಪಾ ಮತ್ತು ಮಸಾಜ್ ಪಾರ್ಟಿ’ಯಾಗಿ ಬದಲಾಗಿದೆ’ ಎಂದು ಹೇಳಿದ್ದಾರೆ.

ಈ ಎಲ್ಲಾ ವಿವಾದ, ಆರೋಪ, ವ್ಯಂಗ್ಯ ಹೇಳಿಕೆಗಳ ನಡುವೆ ಗುಜರಾತ್‌ನಲ್ಲಿ ಮುಂದಿನ ತಿಂಗಳು ನಡೆಯಲಿರುವ ಚುನಾವಣೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಮಾಡಿರುವ ತಂತ್ರ ಈ ವಿಡಿಯೋ ಎಂದು ಮನೀಶ್ ಸಿಸೋಡಿಯಾ ಟೀಕಿಸಿದ್ದಾರೆ.

ಕೋರ್ಟ್ ನಿರ್ದೇಶನಗಳಿಗೆ ವಿರುದ್ಧವಾಗಿ ವಿಡಿಯೋ ಸೋರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು ಬಲ್ಮಠ ರಸ್ತೆಯಲ್ಲಿ ಕಾರ್ ಬೆಂಕಿಗಾಹುತಿ..!

ಮಂಗಳೂರು : ನಗರದ ಬಲ್ಮಠ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಇಂದು ಅಪರಾಹ್ನ ಸಂಭವಿಸಿದೆ.ಬಲ್ಮಠ ಜ್ಯೂಸ್ ಜಂಕ್ಷನ್ ಬಳಿ ಪಾರ್ಕ್ ಮಾಡಲಾಗಿದ್ದ ಫೋರ್ಡ್‌ ಕಂಪೆನಿ ಕಾರು ಬೆಂಕಿಗಾಹುತಿಯಾಗಿದೆ.ಕಾರಿನ ಇಂಜಿನ್...

ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿ..! 2 ದಿನದಲ್ಲಿ ಇಬ್ಬರು ಬಲಿ..!

ಬೆಳ್ತಂಗಡಿ:  ಬೆಳ್ತಂಗಡಿಯಲ್ಲಿ 2 ದಿನದಲ್ಲಿ ಒಂದೇ ಕಾಲೇಜಿನ  ಇಬ್ಬರು ವಿದ್ಯಾರ್ಥಿಗಳು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಜೀವಕಳಕೊಂಡಿದ್ದಾರೆ. ಎಳೆ ವಯಸ್ಸಿನ ಮಕ್ಕಳಿಗೆ ದ್ವಿಚಕ್ರವಾಹನಗಳನ್ನು ಕೊಡುವ ಪೋಷಕರಿಗೆ ಎಚ್ಚರಿಕೆಯ ಕರೆ ಗಂಟೆಯಾಗಿದೆ.  ಮಡಂತ್ಯಾರು ಸೆಕ್ರೆಡ್ ಹಾರ್ಟ್...