Tuesday, January 31, 2023

ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್ ಮೇಲೆ ಪೊಲೀಸ್ ಸಮ್ಮುಖದಲ್ಲೇ ದಾಳಿಗೆ ಯತ್ನ..!

ನವದೆಹಲಿ : ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಇತ್ತೀಚಿನ ಶ್ರದ್ಧಾ ವಾಕರ್ ಹತ್ಯೆ ಆರೋಪಿ ಅಫ್ತಾಬ್ ಪೂನಾವಾಲಾ ಇದ್ದ ಪೊಲೀಸ್‌ ವಾಹನದ ಮೇಲೆ ಸೋಮವಾರ ಸಂಜೆ ಗುಂಪೊಂದು ದಾಳಿಯೊಂದು ನಡೆಸಿದೆ.

ವಿಧಿವಿಜ್ಞಾನ ಪ್ರಯೋಗಾಲಯದಿಂದ ಅಫ್ತಾಬ್ ನನ್ನು ಸೋಮವಾರ ಸಂಜೆ ವಾಪಾಸ್ ಕರೆದೊಯ್ಯುವ ಸಂದರ್ಭದಲ್ಲಿ ಕತ್ತಿ ಹಿಡಿದಿದ್ದ ಉದ್ರಿಕ್ತರ ಗುಂಪೊಂದು ಬಂದು ಪೊಲೀಸ್‌ ವಾಹನದ ಮೇಲೆ ದಾಳಿ ನಡೆಸಿದೆ.

ಆ ಸಮಯದಲ್ಲಿ ಕೂಡಲೇ ಆರೋಪಿ ಅಫ್ತಾಬ್‌ನ ರಕ್ಷಣೆಗಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಆರೋಪಿ ಅಫ್ತಾಬ್‌ ಅನ್ನು ಪಶ್ಚಿಮ ದಿಲ್ಲಿಯಲ್ಲಿರುವ ರೋಹಿಣಿಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಶ್ರದ್ಧಾ ವಾಕರ್‌ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಎರಡನೇ ಬಾರಿ ಪಾಲಿಗ್ರಾಫ್‌ ಪರೀಕ್ಷೆಯನ್ನು ಸೋಮವಾರ ನಡೆಸಲು ಕರೆದುಕೊಂಡು ಬರಲಾಗಿತ್ತು.

ಪರೀಕ್ಷೆಯ ಬಳಿಕ ಅಫ್ತಾಬ್‌ ಅನ್ನು ಜೈಲಿಗೆ ಕರೆದೊಯ್ಯುವ ವೇಳೆ ಎಫ್‌ಎಸ್‌ಎಲ್‌ ಕಟ್ಟಡದ ಹೊರಗಡೆ ಪೊಲೀಸರ ವಾಹನ ಬರುತ್ತಿದ್ದಂತೆ ಕತ್ತಿಯಿಡಿದ ಜನರ ಗುಂಪು ದಾಳಿ ನಡೆಸಿದೆ.

ಕತ್ತಿ ಹಿಡಿದಿದ್ದ ಹದಿನೈದು ಮಂದಿಯ ಗುಂಪು ಪೊಲೀಸ್‌ ವಾಹನದ ಮೇಲೆ ಹತ್ತಿ ಅಫ್ತಾಬ್ ನನ್ನು ಹುಡುಕುತ್ತಿದ್ದಾಗಿ ವರದಿಯಾಗಿದೆ.

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಘಟನೆಯಲ್ಲಿ ಕೆಲವು ದಾಳಿಕೋರರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಅಫ್ತಾಬ್ ಸುರಕ್ಷಿತವಾಗಿದ್ದಾನೆ‌. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here

Hot Topics

ಮುಂಬೈ- ಅಹ್ಮದಾಬಾದ್ ಹೆದ್ದಾರಿಯಲ್ಲಿ ಬಸ್‌ ಗೆ ಕಾರು ಡಿಕ್ಕಿ : ನಾಲ್ವರು ಮೃತ್ಯು..!

ಮುಂಬೈ:ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದಹಾನು ಎಂಬಲ್ಲಿ ಮುಂಬೈ-ಅಹ್ಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಚರೋಟಿಯಲ್ಲಿ  ಮುಂಜಾನೆ ಐಷಾರಾಮಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್...

“ನಾಯಿ ಥರ ಅವರ ಹಿಂದೆ ಹೋಗ್ತಾರಲ್ವಾ..ನಾಚಿಕೆ ಇಲ್ವಾ.!?” ಉಳ್ಳಾಲ ಪೊಲೀಸರಿಗೆ ಶಾಸಕ ಖಾದರ್ ಕ್ಲಾಸ್..!

ಮಂಗಳೂರು: ಜನ ಸಾಮಾನ್ಯರ ಮನೆಯ ತಳಪಾಯ ಬಿದ್ದುಹೋಗುವ ಸ್ಥಿತಿ ನಿರ್ಮಾಣ ಮಾಡಿದ ಮರಳು ಮಾಫಿಯಾ ವಿರುದ್ದ ಉಳ್ಳಾಲ ಶಾಸಕ ಯು ಟಿ. ಖಾದರ್ ಗರಂ ಆಗಿದ್ದಾರೆ.ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಮುಂದಾಗದ ಉಳ್ಳಾಲ ಪೊಲೀಸರು...

ಕಾರವಾರ : ಕಾಡುಹಂದಿ ಮಾಂಸ ಎಂದು ನಂಬಿಸಿ ನಾಯಿ ಮಾಂಸ ಮಾರಾಟ..! ಇಬ್ಬರ ಬಂಧನ

ಕಾಡುಹಂದಿ ಮಾಂಸ ಎಂದು ನಂಬಿಸಿ ಊರು ಹಂದಿ, ನಾಯಿ ಮಾಂಸ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳನ್ನು ಹಿಡಿದು ಸಾರ್ವಜನಿಕರು ಥಳಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಕಾರವಾರ:...