Tuesday, October 19, 2021

ಅಮೇರಿಕಾದಲ್ಲಿ ಡೆಲ್ಟಾ ಉಲ್ಬಣ : ಪ್ರತೀ ದಿನ ಲಕ್ಷಕ್ಕೂ ಅಧಿಕ ಜನರಿಗೆ ಸೋಂಕು..! 

ವಾಷಿಂಗ್ಟನ್, ಆಗಸ್ಟ್ 10: ಅಮೆರಿಕದಲ್ಲಿ ಡೆಲ್ಟಾ ರೂಪಾಂತರಿ ಉಲ್ಬಣಗೊಂಡಿದ್ದು, ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ.

ಕೊರೊನಾ ವೈರಸ್‌ ಡೆಲ್ಟಾ ರೂಪಾಂತರಿಯಿಂದಾಗಿ ಅಮೆರಿಕದಲ್ಲಿ ಸೋಂಕಿಗೀಡಾಗುತ್ತಿರುವ ಮತ್ತು ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ 6 ತಿಂಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ.

ಕಳೆದ ಮೂರು ದಿನಗಳಿಂದ ಅಮೆರಿಕದಲ್ಲಿ ಸರಾಸರಿ ಒಂದು ಲಕ್ಷ ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ. ಇದರೊಂದಿಗೆ ಹೊಸ ಪ್ರಕರಣಗಳ ಪ್ರಮಾಣದಲ್ಲಿ ಶೇ.35ರಷ್ಟು ಏರಿಕೆಯಾಗಿದೆ.

ಲೂಯಿಸಿಯಾನ, ಫ್ಲೋರಿಡಾ, ಅರ್ಕಾನ್ಸಾಸ್‌ಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ.ಫ್ಲೋರಿಡಾದಲ್ಲಿ ಒಂದೇ ದಿನ 28,317 ಪ್ರಕರಣಗಳು ವರದಿಯಾಗಿವೆ,

ಫ್ಲೋರಿಡಾದಲ್ಲಿ ಆಸ್ಪತ್ರೆಗೆ ದಾಖಲಾಗುವ ಕೋವಿಡ್ ಸೋಂಕಿತರ ಸಂಖ್ಯೆಯೂ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ ಎಂದು ಅಮೆರಿಕ ರೋಗ ನಿಯಂತ್ರಣ ಮತ್ತು ತಡೆ ಕೇಂದ್ರ ತಿಳಿಸಿದೆ.

ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣವೂ ಶೇ.40ರಷ್ಟು ಹೆಚ್ಚಾಗಿದೆ. ಕಳೆದ ವಾರಕ್ಕೆ ಹೋಲಿಸಿದರೆ ಇದು ಶೇ.18ರಷ್ಟು ಹೆಚ್ಚಾಗಿದೆ.

ಕೊರೊನಾ ವೈರಸ್ ಸೋಂಕಿನ ಡೆಲ್ಟಾ ಪ್ರಭೇದ ವೈರಸ್‌ ಕುರಿತು ಈವರೆಗೂ ತಿಳಿದಿರುವ ಲಕ್ಷಣಗಳಿಗಿಂತಲೂ ಹೆಚ್ಚು ಗಂಭೀರ ಕಾಯಿಲೆಗೆ ಕಾರಣವಾಗಬಹುದು ಮತ್ತು ಚಿಕನ್‌ಪಾಕ್ಸ್‌ನಂತೆ ಬಹಳ ಸುಲಭವಾಗಿ ಹರಡಬಹುದು ಎಂದು ಅಮೆರಿಕ ಆರೋಗ್ಯ ಪ್ರಾಧಿಕಾರದ ಆಂತರಿಕ ದಾಖಲೆಗಳನ್ನು ಉಲ್ಲೇಖಿಸಿ ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ.

ಕಾಯಿಲೆ ನಿಯಂತ್ರಣ ಮತ್ತು ತಡೆ ಕೇಂದ್ರ (ಸಿಡಿಸಿ) ನೀಡಿರುವ ದಾಖಲೆಗಳ ಪ್ರಕಾರ, ಸಂಪೂರ್ಣವಾಗಿ ಲಸಿಕೆ ಡೋಸ್ ಪಡೆದುಕೊಂಡಿರುವ ವ್ಯಕ್ತಿಗಳು, ಲಸಿಕೆ ಪಡೆದುಕೊಳ್ಳದ ಜನರಷ್ಟೇ ಪ್ರಮಾಣದಲ್ಲಿ ಡೆಲ್ಟಾ ಪ್ರಭೇದದ ವೈರಸ್ ಹರಡುತ್ತಾರೆ ಎಂದು ವರದಿ ತಿಳಿಸಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...