BANTWAL
ಬಂಟ್ವಾಳ: ಅನಧಿಕೃತ ಅಂಗಡಿ ಮಳಿಗೆಗಳನ್ನು ತೆರವು ಮಾಡಲು ಆಗ್ರಹ
ಬಂಟ್ವಾಳ: ಅಂಗಡಿ ಮಳಿಗೆಗಳನ್ನು ಅನಧಿಕೃತವಾಗಿ ನಿರ್ಮಾಣ ಮಾಡಲಾಗಿದ್ದು, ಅದನ್ನು ತೆರವು ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯರು ಶುಕ್ರವಾರ ಪುರಸಭೆಗೆ ಬೀಗ ಹಾಕಿ ಮುತ್ತಿಗೆ ಹಾಕಿ ಅಧಿಕಾರಿಗಳಿಗೆ ಧಿಕ್ಕಾರದ ಘೋಷಣೆ ಕೂಗಿದ ಘಟನೆ ಬಂಟ್ವಾಳದ ಮೆಲ್ಕಾರ್ನಲ್ಲಿ ನಡೆದಿದೆ.
ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರತಿಭಟನಾಕಾರರಲ್ಲಿ ಬೀಗ ತೆಗೆಯುವಂತೆ ಹೇಳಿದ ಬಳಿಕ ಬೀಗ ತೆರವು ಮಾಡಿ ಪ್ರತಿಭಟನೆ ನಡೆಸಿದರು.
ಮೆಲ್ಕಾರ್ನಲ್ಲಿ ಅಕ್ರಮ ಅಂಗಡಿಗಳನ್ನು ತೆರವು ಮಾಡುವಂತೆ ಸ್ಥಳೀಯರ ದೂರಿನಂತೆ ಎ.ಸಿ ಸ್ಥಳ ಪರಿಶೀಲನೆ ನಡೆಸಿದ್ದರು, ಆ ಬಳಿಕ ನ್ಯಾಯಾಲಯದ ಆದೇಶದಂತೆ ಅಂಗಡಿಗಳನ್ನು ತೆರವು ಮಾಡುಂತೆ ನೋಟಿಸ್ ಜಾರಿಮಾಡಲಾಗಿತ್ತು.
ಆದರೆ ಪುರಸಭೆ ನೋಟಿಸ್ ಜಾರಿ ಮಾಡಿ ಅಂಗಡಿ ತೆರವು ಮಾಡುವುದಕ್ಕೆ ಮುಂದಾಗಿಲ್ಲ ಎಂದು ಅರೋಪಿಸಿ ಇದಕ್ಕೆ ಪುರಸಭೆಯ ಒಳ ಒಪ್ಪಂದ ಕಾರಣ ಎಂದು ಪ್ರತಿಭಟನೆ ನಿರತರು ಬೀಗ ಹಾಕಿ ಅಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಎ.ಸಿ ಬರುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಪುರಸಭೆಯ ಮುಂದೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.
ಬುಡಾ ಸದಸ್ಯ ಸಚಿನ್ ಮೆಲ್ಕಾರ್ ನೇತೃತ್ವದಲ್ಲಿ
ಪ್ರಮುಖರಾದ ರೂಪೇಶ್ ಆಚಾರ್ಯ, ಲೋಹಿತ್ ಪಣೋಲಿಬೈಲ್, ಗುರುರಾಜ್ ಬಂಟ್ವಾಳ, ಖಾಲಿದ್ ನಂದಾವರ, ಪ್ರಸನ್ನ ಮೆಲ್ಕಾರ್, ಸುದರ್ಶನ್ ಮೆಲ್ಕಾರ್, ಪ್ರದೀಪ್ ಅಜ್ಜಿಬೆಟ್ಟು, ಸುರೇಶ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
BANTWAL
ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು
ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.
ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.
ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ
BANTWAL
ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ
ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.
ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.
ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.
BANTWAL
ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!
ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ