Connect with us

DAKSHINA KANNADA

ಎಲ್ಲರಿಗೂ ಸಮಾನ ಗುಣಮಟ್ಟದ ಉಚಿತ ಚಿಕಿತ್ಸೆಗೆ ಒತ್ತಾಯ: ಸರ್ಕಾರಗಳ ವಿರುದ್ದ ಡಿವೈಎಫ್‌ ಐ ಪ್ರತಿಭಟನೆ

Published

on

ಎಲ್ಲರಿಗೂ ಸಮಾನ ಗುಣಮಟ್ಟದ ಉಚಿತ ಚಿಕಿತ್ಸೆಗೆ ಒತ್ತಾಯ: ಸರ್ಕಾರಗಳ ವಿರುದ್ದ ಡಿವೈಎಫ್‌ ಐ ಪ್ರತಿಭಟನೆ

ಮಂಗಳೂರು : ಸರಕಾರಿ ಆಸ್ಪತ್ರೆ ಬಲಪಡಿಸಲು, ಖಾಸಗೀ ಆಸ್ಪತ್ರೆ ‌ನಿಯಂತ್ರಿಸಲು, ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗಾಗಿ ಹಾಗು ಕೊರೋನಾ ಹೆಸರಲ್ಲಿ ಖಾಸಗೀ ಆಸ್ಪತ್ರೆಗಳ ಲೂಟಿಕೋರ ನೀತಿಯನ್ನು ಖಂಡಿಸಿ, ಸರಕಾರಿ ಆಸ್ಪತ್ರೆಯ ಅವ್ಯವಸ್ಥೆಯನ್ನು ವಿರೋಧಿಸಿ, ಎಲ್ಲರಿಗೂ ಸಮಾನ ಗುಣಮಟ್ಟದ ಉಚಿತ ಚಿಕಿತ್ಸೆಗಾಗಿ ಒತ್ತಾಯಿಸಿ ಇಂದು ಬೆಂಗರೆ ಪ್ರದೇಶದ ನಗರ ಆರೋಗ್ಯ ಕೇಂದ್ರದ ಎದುರು ಡಿವೈಎಫ್ಐ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದರು.

ಈ ವೇಳೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಕೊರೊನಾ ರೋಗದ ವಿರುದ್ದ ಸರಕಾರಗಳು ಕೈಗೊಂಡ ಪರಿಹಾರ ಕ್ರಮಗಳೆಲ್ಲಾ ವಿಫಲಗೊಂಡಿದೆ.

ಕೊರೊನಾ ಕಾಲಘಟ್ಟವನ್ನು ಬಳಸಿಕೊಂಡು ನಮ್ಮನ್ನಾಳುವ ಕೇಂದ್ರ ಸರಕಾರ ಇದ್ದ ನೀತಿಗಳನ್ನು ತಿದ್ದುಪಡಿ ಮಾಡಿದಲ್ಲದೆ ಸಾರ್ವಜನಿಕ ರಂಗ ಉದ್ದಿಮೆಗಳನ್ನೆಲ್ಲಾ ಶ್ರೀಮಂತ ಧಣಿಗಳಿಗೆ ಸಂಪೂರ್ಣ ಮಾರಲೊರಟಿದೆ.

ರಾಜ್ಯ ಸರಕಾರ ಕೊರೊನಾ ಹೆಸರಲ್ಲಿ ಮಾಸ್ಕ್ , ವೆಂಟಿಲೇಟರ್ ಇನ್ನಿತರ ಸಾಮಾಗ್ರಿಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆಸಿದೆ ಮತ್ತು ಖಾಸಗೀ ಆಸ್ಪತ್ರೆಗಳಿಗೆ ದುಬಾರಿ ದರ ವಸೂಲಿ ಮಾಡಲು ಅವಕಾಶ ಮಾಡಿಕೊಟ್ಟಿದೆ.

ಇಲ್ಲಿ ಸ್ಥಳೀಯ ನಗರ ಪಾಲಿಕೆ ಆಡಳಿತ ಈ ಸಂದರ್ಭದಲ್ಲಿ ಕಳೆದ ಎರಡು ತಿಂಗಳುಗಳಿಂದ ಕುಡಿಯುವ ನೀರನ್ನು ಶುದ್ದೀಕರಿಸದೆ ಅದರಲ್ಲಿರುವ ವಿಷಕಾರಿ ಬ್ಯಾಕ್ಟೀರಿಯಾ ಗಳನ್ನು ನಾಶಪಡಿಸದೆ ವಿತರಿಸಿ ಜನರ ಆರೋಗ್ಯದ ಜೊತೆ ಚೆಲ್ಲಾಟವಾಡಿದೆ. ಬಿಜೆಪಿ ಸರಕಾರದ ಈ ಆಡಳಿತ ನೀತಿಯು ಕೊರೊನಾಕ್ಕಿಂತಲೂ ಅಪಾಯಕಾರಿಯಲ್ಲದೆ ಮತ್ತಿನ್ನೇನು ಎಂದು ಪ್ರಶ್ನಿಸಿದರು.

ಡಿವೈಎಫ್ ಐ ಜಿಲ್ಲಾದ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಮಾತನಾಡಿ ಬೆಂಗರೆ ತೀರಾ ಹಿಂದುಳಿದ ಪ್ರದೇಶ ಇಲ್ಲಿನ ನಿವಾಸಿಗಳನ್ನು ಮೂಲಭೂತ ಸೌಕರ್ಯಗಳಿಂದ ವಂಚಿಸಲಾಗಿದೆ.

ಕನಿಷ್ಟ ಹಕ್ಕು ಪತ್ರ , ನೀರು , ಆರೋಗ್ಯ ಕಾಳಜಿಯನ್ನು ನೀಡಲು ಸಾದ್ಯವಾಗಿಲ್ಲ .ಇರುವ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಬೇಕು ದಿನದ 24 ಗಂಟೆ ವೈದ್ಯರು ಸಹಿತ ನುರಿತ ಸಿಬ್ಬಂದಿಗಳನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಡಿವೈಎಫ್ಐ ಜಿಲ್ಲಾ ಮುಖಂಡರಾದ ಸುನೀಲ್ ತೇವುಲ, ನೌಶಾದ್ ಬೆಂಗರೆ, ಬೆಂಗರೆ ಗ್ರಾಮ ಸಮಿತಿ ಅದ್ಯಕ್ಷ ಹನೀಫ್ ಬೆಂಗರೆ ಕಾರ್ಯದರ್ಶಿ ರಿಜ್ವಾನ್, ಬಿಲಾಲ್, ನಾಸಿರ್ ಮುಂತಾದವರು ಉಪಸ್ಥಿತರಿದ್ದರು.

DAKSHINA KANNADA

MANGALURU : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟು; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿ ಅನಾಹುತ

Published

on

ಮಂಗಳೂರು : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟಿನಿಂದ ಕಾರಿಗೆ ಪೆಟ್ರೋಲ್ ತುಂಬಿಸುವ ಬದಲು ಡೀಸೆಲ್ ತುಂಬಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪರಿಣಾಮ ಕಾರು ಇಂಜಿನ್ ಸಂಪೂರ್ಣ ಹಾಳಾಗಿ ಲಕ್ಷಾಂತರ ರೂ.ನಷ್ಟವಾಗಿದೆ ಎಂದು ಕಾರು ಮಾಲಕ ಆರೋಪಿಸಿದ್ದಾರೆ.

ಹೊಟೇಲ್ ಉದ್ಯಮಿ ಜೀವನ್ ಶೆಟ್ಟಿ ಎಂಬವರು ತಮ್ಮ ಹುಂಡೈ ಐ 10 ಗ್ರ್ಯಾಂಡ್ ಕಾರ್ ಗೆ ಪೆಟ್ರೋಲ್ ತುಂಬಿಸುವ ಸಲುವಾಗಿ, ಎಪ್ರಿಲ್ 5 ರಂದು ಮಧ್ಯಾಹ್ನ 12 ರ ಸುಮಾರಿಗೆ ಬಲ್ಮಠದ ಜ್ಯೂಸ್ ಜಂಕ್ಷನ್ ಮುಂಭಾಗದ ಹೆಚ್ ಪಿ ಪೆಟ್ರೋಲ್ ಬಂಕ್ ಗೆ ಬಂದಿದ್ದರು. ಕ್ಯಾಪ್ ಮೇಲೆ ಪೆಟ್ರೋಲ್ ಎಂದು ಬರೆದಿದ್ದರೂ, ಸಿಬ್ಬಂದಿ ಮಾತ್ರ ಕಾರಿಗೆ ಡೀಸೆಲ್ ತುಂಬಿಸಿದ್ದಾರೆ.

 

ಪರಿಣಾಮ ಕಾರು ಕೆಲವೇ ಕಿಲೋ ಮೀಟರ್ ಸಂಚರಿಸಿ ಮುಂದಕ್ಕೆ ಹೋಗದೆ ನಿಂತಿದೆ. ಪರಿಶೀಲಿಸಿದಾಗ ಬಂಕ್ ಸಿಬ್ಬಂದಿ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪ್ರಶ್ನಿಸಿದಾಗ ಪೆಟ್ರೋಲ್ ಬಂಕ್ ಮ್ಯಾನೇಜರ್ ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂದು ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರು ಇಂಜಿನ್ ದುರಸ್ಥಿಗೆ 2 ಲಕ್ಷಕ್ಕೂ ಅಧಿಕ ಖರ್ಚು ಆಗಲಿದೆ. ಆದರೆ, ಪೆಟ್ರೋಲ್ ಬಂಕ್ ಮಾಲಕ ಬರೀ 30 ಸಾವಿರ ಕೊಟ್ಟು ಸುಮ್ಮನಾಗಿದ್ದಾರೆ ಎಂದು ಜೀವನ್ ಶೆಟ್ಟಿ ದೂರಿದ್ದಾರೆ. ಕಡಿಮೆ ಸಂಬಳಕ್ಕೆ ಅನುಭವವಿಲ್ಲದ ಕಾರ್ಮಿಕರನ್ನು ನೇಮಿಸುತ್ತಾರೆ. ಇಂತಹ ಸಮಸ್ಯೆಯಾದಾಗ ತಮ್ಮ ಇನ್ಶೂರೆನ್ಸ್ ನಲ್ಲಿ ಪರಿಹಾರ ನೀಡುವ ಅವಕಾಶವಿದ್ದರೂ ಬಂಕ್ ಮಾಲಕರು ಮಾತ್ರ ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ತಾನು ಪರಿಹಾರಕ್ಕಾಗಿ ಗ್ರಾಹಕ ನ್ಯಾಯಾಲಯದ ಮೊರೆ ಹೋಗುವುದಾಗಿ ಜೀವನ್ ಶೆಟ್ಟಿ ಹೇಳಿದ್ದಾರೆ.

Continue Reading

DAKSHINA KANNADA

ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್‌..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು

Published

on

ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.

sweet corn burn

ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.

Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

sweet corn burn 2

Continue Reading

DAKSHINA KANNADA

ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!

Published

on

ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.

ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.

ಪೊಲೀಸ್‌ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.

ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.

ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ‌ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.

ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

LATEST NEWS

Trending