Wednesday, January 27, 2021

ಉಡುಪಿ: ವಿಶೇಷ ಶಿಕ್ಷಕರ ಗೌರವ ಧನ ದ್ವಿಗುಣಗೊಳಿಸಲು ಆಗ್ರಹ: ಸರಕಾರ, ಇಲಾಖೆಯ ನಿರ್ಲಕ್ಷ್ಯಕ್ಕೆ ಶಿಕ್ಷಕರಿಂದ ಖಂಡನೆ..!

ಉಡುಪಿ: ವಿಶೇಷ ಶಿಕ್ಷಕರ ಗೌರವ ಧನ ದ್ವಿಗುಣಗೊಳಿಸಲು   ಆಗ್ರಹ :ಸರಕಾರ, ಇಲಾಖೆಯ ನಿರ್ಲಕ್ಷ್ಯಕ್ಕೆ ಶಿಕ್ಷಕರಿಂದ ಖಂಡನೆ..!

ಉಡುಪಿ: ಈ ವರ್ಷ ನವೆಂಬರ್  ಅಂತ್ಯದೊಳಗಾಗಿ ರಾಜ್ಯದ ವಿಶೇಷ ಶಾಲೆಗಳಲ್ಲಿ ಸೇವಾ ನಿರತರಾಗಿರುವ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರ ಸಿಬ್ಬಂದಿಗಳ ಗೌರವಧನವನ್ನು ದ್ವಿಗುಣಗೊಳಿಸಲು ಕ್ರಮ ಕೈಗೊಳ್ಳಬೇಕಾಗಿ ಮುಖ್ಯಮಂತ್ರಿಗಳಿಗೆ, ಸಚಿವರಿಗೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಮನವಿ ಮಾಡಿಕೊಳ್ಳಲಾಗಿತ್ತು.

ಆದರೆ ಮನವಿಗೆ ಇಲಾಖೆಯಿಂದಾಗಲಿ, ಸರಕಾರದಿಂದಲೀ ಸಕಾರಾತ್ಮಕ ಸ್ಪಂದನೆ ದೊರೆಯಲಿಲ್ಲ.ಹೀಗಾಗಿ ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರರ ಸಂಘ ಹಾಗೂ ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳ ಒಕ್ಕೂಟ ನೀಡಿದ ಕರೆಯಂತೆ

ಡಿಸೆಂಬರ್ ಎರಡರಂದು ರಾಜ್ಯದ ಎಲ್ಲಾ ವಿಶೇಷ ಶಾಲೆಗಳ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳೊಂದಿಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಕಛೇರಿ  ಮುಂಭಾಗದಲ್ಲಿ ಒಂದು ದಿನದ ಸಾಂಕೇತಿಕ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷೆ ಡಾ.ಕಾಂತಿ ಹರೀಶ್ ಹೇಳಿದ್ದಾರೆ.

ಈ ಕುರಿತು ಸುದ್ದಿಗೋಷ್ಡಿ ನಡೆಸಿದ ಸಂಘದ ಪದಾಧಿಕಾರಿಗಳು  ಇಲಾಖೆಯಿಂದ ಅಥವಾ ಸರಕಾರದಿಂದ ಆದೇಶ ಜಾರಿಯಾಗದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಮಟ್ಟದ ಹೋರಾಟ ನಡೆಯಲಿದೆ ಎಂದು ಎಚ್ಚರಿಸಿದರು.

ವಿಶೇಷ ಶಾಲಾ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗದ ಸಮಸ್ಯೆಗಳಿಗೆ ಸರಕಾರದಿಂದ ಯಾವುದೇ ರೀತಿಯ ಸ್ಪಂದನೆ ದೊರೆಯುತ್ತಿಲ್ಲ. ಶ್ರೀಮತಿ ಶಶಿಕಲಾ ಜೊಲ್ಲೆಯವರನ್ನು ಈ ವಿಚಾರವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಕಷ್ಟು ಬಾರಿ ಭೇಟಿ ಮಾಡಿ ಮನವರಿಕೆ ಮಾಡಿಕೊಂಡೆವು.

ಈ ಬಗ್ಗೆ ಭರವಸೆ ನೀಡಿರುವ ಸಚಿವರು ನಮ್ಮನ್ನು ಕರೆದು ಸಭೆ ನಡೆಸುವುದಾಗಿ ಹೇಳಿದ್ದರು.ಆದರೆ ನಮ್ಮನ್ನು ನಿರ್ಲಕ್ಯ ಮಾಡಿದ್ದರಿಂದ ಮುಷ್ಕರಕ್ಕೆ ಮುಂದಾಗಿದ್ದೇವೆ ಅಂತ ಅವರು ಹೇಳಿದ್ರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.