Saturday, July 2, 2022

ಇಷ್ಟಪಟ್ಟ ಹುಡುಗಿಯಿಂದ ಮದುವೆ ನಿರಾಕರಣೆ : ಹಾಸದಲ್ಲಿ ನಡುರಸ್ತೆಯಲ್ಲೇ ಕೊಚ್ಚಿಕೊಂದು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ ..!  

ಇಷ್ಟಪಟ್ಟ ಹುಡುಗಿಯಿಂದ ಮದುವೆ ನಿರಾಕರಣೆ : ಹಾಸದಲ್ಲಿ ನಡುರಸ್ತೆಯಲ್ಲೇ ಕೊಚ್ಚಿಕೊಂದು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ ..!  ..!  

ಹಾಸನ: ಪ್ರೀತಿ ನಿರಾಕರಿಸಿದ ಯುವತಿಯನ್ನು ನಡುರಸ್ತೆಯಲ್ಲೇ ಪಾಗಲ್​ ಪ್ರೇಮಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಹೇಮಂತ್ (25) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಸಕಲೇಶಪುರ ತಾಲೂಕಿನ ಬಾಳೆಗದ್ದೆ ಸಮೀಪದ ಸಿದ್ದಾಪುರ ಗ್ರಾಮದ 21 ವರ್ಷದ ಯುವತಿ ಕೊಲೆಯಾದವಳು.

ಪ್ರೀತಿ ನಿರಾಕರಣೆಯೇ ಕೊಲೆಗೆ ಕಾರಣ ಎನ್ನಲಾಗ್ತಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಅದೇ ಗ್ರಾಮದ ಹೇಮಂತ್ ಎಂಬಾತ ಯುವತಿಯನ್ನು ಪ್ರೀತಿಸುತ್ತಿದ್ದ.

ವರ್ಷದ ಹಿಂದೆ ಮದುವೆಯಾಗಲು ಆಕೆಗೆ ಮನವಿ ಮಾಡಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲವಂತೆ. ಮತ್ತೆ ಈ ಬಾರಿ ತನ್ನ ಪ್ರೇಮ ನಿವೇದನೆಯನ್ನು ಆಕೆಯೊಂದಿಗೆ ಯುವಕ ತೋಡಿಕೊಂಡಿದ್ದ.

ಆದರೂ ಮದುವೆಗೆ ನಿರಾಕರಣೆ ಮಾಡಿದ ಹಿನ್ನೆಲೆ, ಆರೋಪಿ ಹೇಮಂತ್ ಇಂದು ಯುವತಿಯನ್ನು ಕೊಲೆಗೈದಿದ್ದಾನೆ ಎಂದು ತಿಳಿದುಬಂದಿದೆ.

ಮನೆಯಿಂದ ಹೊರಬಂದು ಬೇರೆಡೆಗೆ ತೆರಳುತ್ತಿದ್ದ ಯುವತಿಯನ್ನು ಕಂಡ ಆರೋಪಿ ಹೇಮಂತ್, ಮಾರಕಾಸ್ತ್ರದಿಂದ ಆಕೆಯ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾನೆ.

ಏಕಾಏಕಿ ದಾಳಿ ನಡೆದ ಹಿನ್ನೆಲೆ, ಆಕೆ ಸಹಾಯಕ್ಕೆ ಬೇರೆಯವರನ್ನು ಕೂಗಲು ಸಹ ಸಾಧ್ಯವಾಗದೆ ರಕ್ತಸಿಕ್ತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಘಟನೆ ನಡೆದ ಬಳಿಕ ಆರೋಪಿ ಹೇಮಂತ ತಲೆಮರೆಸಿಕೊಂಡಿದ್ದು, ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಒಟ್ಟಾರೆ ಇಷ್ಟಪಟ್ಟ ಹುಡುಗಿ ಮದುವೆಯಾಗಲು ನಿರಾಕರಣೆ ಮಾಡಿದಳು ಅನ್ನೋ ಒಂದೇ ಕಾರಣಕ್ಕೆ ಆಕೆಯನ್ನು ಬರ್ಬರವಾಗಿ ಕೊಲೆಗೈದು ತಾನು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾನೆ.

ಆದರೆ ನಾಪತ್ತೆಯಾಗಿರುವ ಆರೋಪಿ  ಆತ್ಮಹತ್ಯೆ  ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. .

ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪೋಷಕರು ದೂರು ನೀಡಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

3ನೇ ಸೌತ್ ಇಂಡಿಯಾ ಪ್ರಾಜೆಕ್ಟ್ ಎಕ್ಸಿಬಿಷನ್‌ನಲ್ಲಿ ಉಜಿರೆ SDM ಇಂಜಿನಿಯರಿಂಗ್ ವಿಭಾಗಕ್ಕೆ ಪ್ರಶಸ್ತಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ವಿಭಾಗದ, ಕಲ್ಪತರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ತಿಪಟೂರು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವು ದಕ್ಷಿಣ ಭಾರತದ ಸುಮಾರು ಹದಿಮೂರು ಎಂಜಿನಿಯರಿಂಗ್ ವಿಭಾಗಗಳಲ್ಲಿ 3ನೇ ಸೌತ್...

ಹೆಜಮಾಡಿ: ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ವೇಗದೂತ ಬಸ್‌

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಮರಿಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.ಖಾಸಗಿ ವೇಗದೂತ ಬಸ್ ಉಡುಪಿಯಿಂದ ಮಂಗಳೂರಿಗೆ...

ಮಳೆ ಹಾನಿ ಪರಿಶೀಲಿಸಿದ ಶಾಸಕ ಡಾ. ಭರತ್‌ ಶೆಟ್ಟಿ

ಸುರತ್ಕಲ್‌: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುರಿದ ಭಾರಿ ಮಳೆಯಿಂದ ಕೆಲವು ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಪರಿಶೀಲಿಸಲು ಶಾಸಕರಾದ ಡಾ.ಭರತ್ ಶೆಟ್ಟಿ ನಿನ್ನೆ ಪಾಲಿಕೆ ವ್ಯಾಪ್ತಿಯ ಕೆಲವು ಪ್ರದೇಶಗಳಿಗೆ ಅಧಿಕಾರಿಗಳೊಂದಿಗೆ...