Connect with us

    DAKSHINA KANNADA

    “ಪತ್ರಕರ್ತರಿಂದ ದಕ್ಷಿಣ ಕನ್ನಡ ಜಿಲ್ಲೆ ಹೆಮ್ಮೆ ಪಡುವಂತಹ ಕೆಲಸ”- ಡಿಸಿ ಮುಲ್ಲೈ ಮುಗಿಲನ್

    Published

    on

    ಮಂಗಳೂರು: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು.

    ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋಸ್ಟ್ ಮಾರ್ಟಂ ಬಳಿಕ ಮೃತದೇಹವನ್ನು ಮನೆಯಿದ್ದ ಜಾಗಕ್ಕೆ ಸಾಗಿಸಿ ಅಂತಿಮ ಸಂಸ್ಕಾರ ನಡೆಸಲು ಪತ್ರಕರ್ತರಾದ ಶಶಿ ಬೆಳ್ಳಾಯರು, ಮೋಹನ್ ಕುತ್ತಾರ್, ಆರಿಫ್ ಯು.ಆರ್. ಗಿರೀಶ್ ಮಳಲಿ ಹಾಗೂ ಶಿವಶಂಕರ್ ನೆರವಾಗಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಂದ ಪತ್ರಕರ್ತರ ಮಾಹಿತಿ ಪಡೆದು ಕಚೇರಿಯಲ್ಲಿ ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಅವರು ಜಿಲ್ಲಾಧಿಕಾರಿಯವರಿಗೆ ಪತ್ರಕರ್ತರ ಪರಿಚಯ ಮಾಡಿಕೊಟ್ಟರು.

    ಬಳಿಕ ಮಾತಾಡಿದ ಜಿಲ್ಲಾಧಿಕಾರಿ ಅವರು, “ನಿಮ್ಮ ಈ ಕಾರ್ಯ ಶ್ಲಾಘನೀಯವಾಗಿದೆ. ಇದೊಂದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆ ತರುವಂತಹ ಕಾರ್ಯ. ಮುಂದೆಯೂ ಇಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ, ಏನಾದರೂ ಅಗತ್ಯ ನೆರವು ಬೇಕಾದಲ್ಲಿ ಜಿಲ್ಲಾಡಳಿತ ನಿಮ್ಮ ಜೊತೆಗಿದೆ. ನಿಮ್ಮಂತಹ ಉತ್ಸಾಹಿ ತರುಣರ ಅವಶ್ಯಕತೆ ಸಮಾಜಕ್ಕೆ ಇದೆ“ ಎಂದು ಬೆನ್ನುತಟ್ಟಿದರು.

    ಶಿರೂರು ಮತ್ತು ಉಳುವರೆ ಗ್ರಾಮದ ಸದ್ಯದ ಸ್ಥಿತಿಗತಿಯ ಬಗ್ಗೆ ಪತ್ರಕರ್ತರಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಷಾ,ಕಾರ್ಯನಿರತ ಪತ್ರಕರ್ತರ ಸಂಘದ ಉಳ್ಳಾಲ ತಾಲೂಕು ಅಧ್ಯಕ್ಷ ವಸಂತ್ ಎನ್. ಕೊಣಾಜೆ, ಗಣೇಶ್ ತಲಪಾಡಿ ಉಪಸ್ಥಿತರಿದ್ದರು.

    DAKSHINA KANNADA

    ಬಂಟ್ವಾಳ :ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾ*ತ; ಪತ್ನಿ ಸಾ*ವು; ಪತಿ ಗಂಭೀ*ರ

    Published

    on

    ಬಂಟ್ವಾಳ : ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸಾ*ವನ್ನಪ್ಪಿದ್ದು, ಪತಿ ಗಂ*ಭೀರವಾಗಿ ಗಾ*ಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾ*ವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಅನಿಶ್ ಕೃಷ್ಣ ಗಂಭೀ*ರವಾಗಿ ಗಾ*ಯಗೊಂಡಿದ್ದಾರೆ.

    ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿಯ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿದೆ. ಬಳಿಕ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿ*ಕ್ಕಿ ಹೊಡೆದಿದೆ.

    ಡಿ*ಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

    ಎರಡು ದಿನದ ಹಿಂದಷ್ಟೇ ಮದುವೆ : 

    ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮಾನಸ ಹಾಗೂ ಅನಿಶ್ ಕೃಷ್ಣ  ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ ‌ಘ‌ಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ

    Continue Reading

    DAKSHINA KANNADA

    ಯಕ್ಷಗಾನ ಕಲಾವಿದ ಕುಪ್ಪೆಪದವು ಉಮೇಶ್ ಸಾಲ್ಯಾನ್ ರಿಗೆ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ

    Published

    on

    ಮಂಗಳೂರು : ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಹಿರಿಯ ಅರ್ಚಕ ದಿ.ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಪ್ರಯುಕ್ತ ಕಟೀಲು ಮೇಳದ ಹಿರಿಯ ಯಕ್ಷಗಾನ ವೇಷಧಾರಿ ಕುಪ್ಪೆಪದವು ಉಮೇಶ್ ಸಾಲ್ಯಾನ್ ಅವರಿಗೆ ಈ ವರ್ಷದ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ ನೀಡಲಾಗುವುದು.

    ಆಸ್ರಣ್ಣ ಅಭಿಮಾನಿ ಬಳಗ ಕದ್ರಿ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಚಿನ್ನದ ಪದಕದೊಂದಿಗೆ ಕುಪ್ಪೆಪದವು ಉಮೇಶ್ ಸಾಲ್ಯಾನ್ ರವರನ್ನು ಗೌರವಿಸಲಾಗುವುದು.

    ಇದನ್ನೂ ಓದಿ : ಮಂಗಳೂರು: ‘ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಗಿ ಹಿಂಪಡೆಯುವುದಿಲ್ಲ’ – ಡಿಸಿ ಮುಗಿಲನ್

    ಕಟೀಲು ಲಕ್ಷ್ಮಿ ನಾರಾಯಣ ಆಸ್ರಣ್ಣ ಮತ್ತು ಬಂಧುಗಳು ಸೆಪ್ಟೆಂಬರ್ 14 ರ ಶನಿವಾರ ಸಂಜೆ ಶ್ರೀ ಗೋಪಾಲಕೃಷ್ಣ ಆಸ್ರ ಣ್ಣ ಸಭಾಭವನದಲ್ಲಿ ಹಮ್ಮಿಕೊಡಿರುವ ಸಂಸ್ಮರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಆಸ್ರಣ್ಣ ಅಭಿಮಾನಿ ಬಳಗದ, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ನವನೀತ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Continue Reading

    DAKSHINA KANNADA

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಸೆ. 12 ರವರೆಗೆ ಕರಾವಳಿಯಲ್ಲಿ ಭಾರೀ ಮಳೆ

    Published

    on

    ಮಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಸೆಪ್ಟೆಂಬರ್ 12 ರವರೆಗೆ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

    ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಇಂದು ಮೋಡಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

    Continue Reading

    LATEST NEWS

    Trending