HomeFILMನಟ ಶಿವರಾಜ್ ಕುಮಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್‌: ಸ್ವಲ್ಪ ಹೊತ್ತಲ್ಲೇ ಡಿಲೀಟ್‌ ಮಾಡಿದ ಪ್ರಶಾಂತ್‌ ಸಂಬರ್ಗಿ

ನಟ ಶಿವರಾಜ್ ಕುಮಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್‌: ಸ್ವಲ್ಪ ಹೊತ್ತಲ್ಲೇ ಡಿಲೀಟ್‌ ಮಾಡಿದ ಪ್ರಶಾಂತ್‌ ಸಂಬರ್ಗಿ

ಬೆಂಗಳೂರು: ಕನ್ನಡ ನಟ ಶಿವರಾಜ್ ಕುಮಾರ್  ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿರುವುದಕ್ಕೆ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಮಾಡಿದ್ದು, ಭಾರೀ ಟೀಕೆ ವ್ಯಕ್ತವಾಗಿದೆ.

ಶಿವರಾಜ್ ಕುಮಾರ್ ಬಗ್ಗೆ ವಿವಾದಾತ್ಮಕ ಕಾಮೆಂಟ್ ಮಾಡಿರುವ ಪ್ರಶಾಂತ್ ಸಂಬರ್ಗಿ. ‘ಶಿವಣ್ಣ ಯಾವತ್ತೂ ಸ್ಕ್ರಿಪ್ಟ್ ಕೇಳೋದೇ ಇಲ್ಲ. ಆದರೆ, ಪೇಮೆಂಟ್ ತುಂಬಾನೇ ಮುಖ್ಯ. ಒಪ್ಪಿಕೊಂಡಿದ್ದ ಸಿನಿಮಾ ಮಾಡ್ತಾರೆ. ತುಂಬಾ ಎಮೋಷನಲ್ ಜೀವಿ ನಮ್ಮ ಶಿವಣ್ಣ. ಸಿನಿಮಾ ಫ್ಲಾಪ್ ಆದರೂ, ಅವರು ಕೇರ್ ಮಾಡಲ್ಲ. ಮತ್ತೆ ಪೇಮೆಂಟ್ ತಗೊಂಡು ಇನ್ನೊಂದು ಫಿಲ್ಮ್ ಗೆ ಸೈನ್ ಮಾಡ್ಬಿಡ್ತಾರೆ.

ಅದೇ ಫಾರ್ಮುಲಾ ರಾಜಕೀಯದಲ್ಲೂ ಅನುಸರಿಸಿದ್ದಾರೆ. ಕ್ಯಾಂಡಿಡೇಟ್ ಗೆದ್ರೆ ಏನು ಸೋತ್ರೆ ಏನು ಎಲ್ಲಾ ಒಂದೇ. ಏನೋ ಹೇಳ್ತಾರಲ್ಲ ಗೆದ್ದರೆ ಬೆಟ್ಟ. ಇಲ್ಲ ಅಂದ್ರೆ.. ಬಂತಾ ಪ್ಯಾಕೆಟ್.. ಸರಿ ಆಲ್ ರೈಟ್ ಮುಂದೆ ಹೋಗೋಣ’ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿದ್ದಾರೆ.

ಈ ಪೋಸ್ಟ್ ಗೆ ಅನೇಕರು ಕಾಮೆಂಟ್ ಮಾಡಿದ್ದಾರೆ. ಶಿವರಾಜ್ ಕುಮಾರ್ ಬಗ್ಗೆ ಅವಹೇಳನಕಾರಿ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ, ಅನೇಕರು ಪ್ರಶಾಂತ್ ಸಂಬರ್ಗಿ ವಿರುದ್ಧವೇ ಗರಂ ಆಗಿದ್ದಾರೆ. ತಮ್ಮ ವಿರುದ್ಧ ಕಾಮೆಂಟ್ ಮಾಡಿದವರನ್ನು ಡಿಲಿಟ್ ಮಾಡಿ, ಡಸ್ಟ್ ಬಿನ್ ಗೆ ಹಾಕಲಾಗುವುದು ಎಂದು ಕಾಮೆಂಟ್ ಬೇರೆ ಮಾಡಿದ್ದಾರೆ.

ಮೊನ್ನೆಯಷ್ಟೇ ಸಂಸದ ಪ್ರತಾಪ್ ಸಿಂಹ ತಮ್ಮದೇ ಆದ ರೀತಿಯಲ್ಲಿ ಟಾಂಗ್ ಕೊಟ್ಟಿದ್ದರು. ನಂತರ ‘ನಾನು ಡಾ.ರಾಜ್ ಕುಟುಂಬ ಅಭಿಮಾನಿ’ ಎಂದು ಹೇಳುವ ಮೂಲಕ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದರು.

Latest articles

ಮಂಗಳೂರು: ಮಹಿಳಾ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿ ಮಂಗಳೂರಿನಲ್ಲಿ ಪ್ರತಿಭಟನೆ-ಬೃಜ್‌ ಭೂಷಣ್‌ ಬಂಧನಕ್ಕೆ ಆಗ್ರಹ

ಮಹಿಳಾ ಕುಸ್ತಿ ಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅರೋಪ ಹೊತ್ತ ಎಸಗಿದ ಉತ್ತರ ಪ್ರದೇಶದ ಬಿಜೆಪಿ ಸಂಸದ...

ಮಂಗಳೂರು: ಬೀದಿಬದಿ ವ್ಯಾಪಾರಿಗಳ ಮೇಲಿನ ಕಿರುಕುಳ, ಕೇಸುಗಳಿಗೆ ಖಂಡನೆ – ಸುಳ್ಳು ಮೊಕದ್ದಮೆ ವಾಪಾಸ್ ಪಡೆಯಲು ಒತ್ತಾಯಿಸಿ ಪ್ರತಿಭಟನೆ

ಜನಪರ ಹೋರಾಟಗಾರ, ಬೀದಿ ವ್ಯಾಪಾರಿಗಳ ಮುಂದಾಳು ಬಿ ಕೆ ಇಮ್ತಿಯಾಝ್‌ ಮತ್ತು ಮುಖಂಡರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ವಾಪಾಸ್...

ರಾಮನಗರ: ಟೋಲ್ ವಿಚಾರಕ್ಕೆ ಸಂಬಂಧಿಸಿ ಗಲಾಟೆ- ಯುವಕರ ತಂಡದಿಂದ ಸಿಬಂದಿ ಹತ್ಯೆ..!

ಟೋಲ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಯುವಕರ ತಂಡವೊಂದು ಗಲಾಟೆ ಮಾಡಿದ ಹಿನ್ನಲೆಯಲ್ಲಿ ಟೋಲ್ ಸಿಬ್ಬಂದಿಯ ಕೊಲೆಯಾಗಿದೆ. ಈ ಘಟನೆ...

ಊರಿಗೆ ಹೋಗಲು ನಿಲ್ದಾಣದಲ್ಲಿ ಕಾದು ಸುಸ್ತಾಗಿ ತಾನೇ ಸರ್ಕಾರಿ ಬಸ್ ಚಲಾಯಿಸಿದ ಭೂಪನ ಮೇಲೆ ಪೊಲೀಸ್ ಕೋಪ..!

ವ್ಯಕ್ತಿಯೊಬ್ಬ ತನ್ನ ಊರಿಗೆ ಬಸ್ ಇಲ್ಲವೆಂದು ನಿಲ್ದಾಣದಲ್ಲಿ ನಿಲ್ಲಿಸಿದ್ದ ಸಾರಿಗೆ ಸಂಸ್ಥೆಯ ಬಸ್ಸನ್ನೇ ಚಲಾಯಿಸಿ ನಿಲ್ದಾಣದಿಂದ ಹೊರಗಿರುವ ಡಿವೈಡರ್...