BANTWAL
ಬಂಟ್ವಾಳ:ಜಾಲತಾಣದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯನ ಅವಹೇಳನ-ಠಾಣೆಗೆ ದೂರು
ಬಂಟ್ವಾಳ:ಜಾಲತಾಣದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯನ ಅವಹೇಳನ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸದಸ್ಯ ಬಿ.ಪದ್ಮಶೇಖರ ಜೈನ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿ ಸುಳ್ಳು ಸುದ್ದಿ ಪ್ರಕಟಿಸಿದ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ನಿನ್ನೆ ಪುಂಜಾಲಕಟ್ಟೆ ಆರಕ್ಷಕ ಠಾಣೆಗೆ ದೂರು ನೀಡಿದರು.
ಇತ್ತೀಚೆಗೆ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆವರಣ ಗೋಡೆ ಕುಸಿದಿದ್ದು, ಇದಕ್ಕೆ ಪದ್ಮ ಶೇಖರ ಜೈನ್ ಅವರ ಕಲ್ಲಿನ ಕೋರೆಯೆ ಕಾರಣವೆಂದು ಆರೋಪಿಸಿ, ಅವಹೇಳನಕಾರಿಯಾಗಿ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.
ಆದರೆ ಪದ್ಮಶೇಖರ ಜೈನ್ ಅವರು ದೇವಸ್ಥಾನದಿಂದ 2 ಕಿ.ಮೀ. ದೂರದಲ್ಲಿ ಕಲ್ಲಿನ ಕೋರೆ ನಡೆಸುತ್ತಿದ್ದು,ಎರಡು ವರ್ಷಗಳ ಹಿಂದೆ ಸ್ಥಗಿತಗೊಳಿಸಿದ್ದಾರೆ. ಆದರೂ ರಾಜಕೀಯ ದುರುದ್ದೇಶದಿಂದ ಪದ್ಮಶೇಖರ ಜೈನ್ ಅವರ ಮೇಲೆ ಅವಹೇಳನಕಾರಿಯಾಗಿ ಆರೋಪಿಸಲಾಗಿದ್ದು, ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕಾಗಿ ದೂರಿನಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖರಾದ ಕೆ.ಮಾಯಿಲಪ್ಪ ಸಾಲ್ಯಾನ್, ಬಾಲಕೃಷ್ಣ ಅಂಚನ್, ಮೋಹನ್ ಸಾಲ್ಯಾನ್, ಜಗದೀಶ್ ಕೊಯಿಲ, ಕೆ. ವಿ. ರಾಜೇಂದ್ರ, ಜಯ ಬಂಗೇರ, ದಯಾನಂದ ಶೆಟ್ಟಿ ಅಮೈ ಸೇರಿದಂತೆ ಇನ್ನೀತರ ಕಾಂಗ್ರೆಸ್ ಮುಖಂಡರು ಹಾಜರಿದ್ದರು.
BANTWAL
Bnatwala: ಡಿ.3ರಂದು ಅಕ್ಷಯ ಪಾತ್ರ ಪ್ರತಿಷ್ಠಾನದ ಕೇಂದ್ರೀಕೃತ ಅಡುಗೆ ಮನೆ ಉದ್ಘಾಟನೆ
ಬಂಟ್ವಾಳ: ಅಕ್ಷಯ ಪಾತ್ರ ಫೌಂಡೇಶನ್ ಇದರ ಅಡುಗೆ ಮನೆಯ ಉದ್ಘಾಟನಾ ಸಮಾರಂಭವು ಡಿ. 3 ರಂದು ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜು ಸಮೀಪ ನಡೆಯಲಿದೆ.
ಅಕ್ಷಯ ಫೌಂಡೇಶನ್ ಮಕ್ಕಳ ಹಸಿವನ್ನು ಹೋಗಲಾಡಿಸುವ ತನ್ನ ಅಚಲವಾದ ಕಾರ್ಯಕ್ಕೆ ಹೆಸರುವಾಸಿಯಾಗಿದ್ದು, ಮಂಗಳೂರಿನಲ್ಲಿ ತನ್ನ ಕೇಂದ್ರೀಕೃತ ಅಡುಗೆ ಮನೆಯ ಉದ್ಘಾಟನೆಯೊಂದಿಗೆ ಮಹತ್ವದ ಮೈಲಿಗಲ್ಲು ತಲುಪಿದೆ. ದಾನಿಗಳಾದ ಜಿಟಿ ಫೌಂಡೇಶನ್ ಮತ್ತು ದಿಯಾ ಸಿಸ್ಟಮ್ಸ್ (ಮಂಗಳೂರು) ಪ್ರೈ.ಲಿ. ಲಿಮಿಟೆಡ್‌ನ ವಿಜಯ್ ಮತ್ತು ಶಾಮ ಕೇಡಿಯಾ, ದಿವಂಗತ ಡಾ. ವಿ ರವಿಚಂದ್ರನ್ ಅವರ ನಿರಂತರ ಬೆಂಬಲ ಮತ್ತು ದೂರದೃಷ್ಟಿ ಕೊಡುಗೆಯೇ ಈ ಅಡುಗೆ ಮನೆಯಾಗಿದೆ. ಈ ಸಮಾರಂಭವು ಉಡುಪಿಯ ಪುತ್ತಿಗೆ ಮಠದ ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಲಿದೆ.
ಈ ಉದ್ಘಾಟನಾ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಬೆಂಗಳೂರಿನ ಸೆಂಚುರಿ ರಿಯಲ್ ಎಸ್ಟೇಟ್ ಗ್ರೂಪ್‌ನ ಅಧ್ಯಕ್ಷ ಡಾ. ಪಿ ದಯಾನಂದ ಪೈ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ ಕೆ, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಕ್ಷಯ ಪಾತ್ರ ಪ್ರತಿಷ್ಠಾನದ ಅಧ್ಯಕ್ಷ ಮಧು ಪಂಡಿತ್ ದಾಸ ಮತ್ತು ಅಕ್ಷಯ ಪಾತ್ರ ಫೌಂಡೇಶನ್‌ನ ಉಪಾಧ್ಯಕ್ಷ ಚಂಚಲಪತಿ ದಾಸ ಅವರು ಉಪಸ್ಥಿತರಿರುವರು.
124 ಸರ್ಕಾರಿ ಮತ್ತು 41 ಸರ್ಕಾರಿ ಅನುದಾನಿತ ಸಂಸ್ಥೆಗಳು ಸೇರಿದಂತೆ 165 ಕ್ಕೂ ಹೆಚ್ಚು ಶಾಲೆಗಗಳಿಗೆ ಅಗತ್ಯ ಪೌಷ್ಟಿಕಯುತವಾದ 25,000 ಊಟವನ್ನು ಉತ್ಪಾದಿಸುವ ಸಾಮರ್ಥ್ಯದೊಂದಿಗೆ ಈ ಅಡುಗೆಕೋಣೆ ರೂಪುಗೊಂಡಿದೆ. ಅಡುಗೆಮನೆಯ ವೈವಿಧ್ಯಮಯ ಮೆನುವು ಸಮತೋಲಿತ ಪೋಷಣೆಯನ್ನು ಖಾತ್ರಿಗೊಳಿಸುತ್ತದೆ. ಸೌರಶಕ್ತಿ ಮತ್ತು ಸ್ವಚ್ಛ ಎಲ್ಪಿಜಿ ಯೊಂದಿಗೆ ಪರಿಸರಸ್ನೇಹಿ ಅಡುಗೆಮನೆ ಇದಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BANTWAL
Bantwala: ಅಕ್ಕಪಕ್ಕ ಮನೆಯ ಯುವಕ-ಯುವತಿ ಒಂದೇ ದಿನ ನಾಪತ್ತೆ..!
ಬಂಟ್ವಾಳ: ಅಕ್ಕ ಪಕ್ಕದ ಮನೆಯ ಯುವಕ ಮತ್ತು ಯುವತಿ ಒಂದೇ ದಿನ ನಾಪತ್ತೆ ಯಾದ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದಲ್ಲಿ ನಡೆದಿದ್ದು, ಈ ಕುರಿತಂತೆ ಎರಡೂ ಮನೆಯವರು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಆಯಿಷತ್ ರಸ್ಮಾ (18) ಮತ್ತು ಮಹಮ್ಮದ್ ಸಿನಾನ್ (23) ನಾಪತ್ತೆಯಾದವರು. ರಸ್ಮಾ ನಡುಪದವು ಖಾಸಗಿ ಕಾಲೇಜಿನಲ್ಲಿ ಫಾರ್ಮಸಿ ವಿದ್ಯಾರ್ಥಿನಿಯಾಗಿದ್ದಾರೆ. ಅವರು ನ. 23ರ ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದು, ಮರುದಿನ ಬೆಳಗ್ಗೆ ಎದ್ದು ನೋಡಿದಾಗ ನಾಪತ್ತೆಯಾಗಿದ್ದರು. ಸಿನಾನ್ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಬಳಿಕ ಊರಿಗೆ ಬಂದು ಕೂಲಿ ಕೆಲಸ ಮಾಡಿಕೊಂಡಿದ್ದರು. ಅವರು ನ. 23ರ ರಾತ್ರಿ ಊಟ ಮಾಡಿ ಮಲಗಿದವರು ಮರುದಿನ ಬೆಳಗಾಗುವಷ್ಟರಲ್ಲಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಎರಡೂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
BANTWAL
Bantwala: ಅಕ್ರಮ ಮರ ಸಾಗಾಟ-ಇಬ್ಬರು ಆರೋಪಿಗಳು ವಶ..!
ಬಂಟ್ವಾಳ: ಅಕ್ರಮ ಮರ ಸಾಗಟ ಮಾಡುತ್ತಿದ ಸ್ಥಳಕ್ಕೆ ಖಚಿತ ಮಾಹಿತ ಪಡೆದ ಬಂಟ್ವಾಳ ಅರಣ್ಯ ಇಲಾಖೆಯವರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಹಾಗೂ ಉಳ್ಳಾಲ ತಾಲೂಕಿನ ಸಜೀಪಪಡು ಗ್ರಾಮದ ಕೋಟೆಕಣಿಯಲ್ಲಿ ನಡೆದಿದೆ.
ಮರ ಹಾಗೂ ವಿವಿಧ ಜಾತಿಯ ದಿಮ್ಮಿಗಳನ್ನು ಪಿಕಪ್ ಮೂಲಕ ಆಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹಾಗೂ 2 ಪಿಕಪ್ ವಾಹನ,6 ಲಕ್ಷ ರೂ ಮೌಲ್ಯದ ದಿಮ್ಮಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಲು ಪಾಲ್ಗೊಂಡಿದ್ದರು. ವಲಯ ಅರಣ್ಯ ಅಧಿಕಾರಿ ಪ್ರಪುಲ್ ಶೆಟ್ಟಿ ಪಿ.ಅವರು ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.