Connect with us

DAKSHINA KANNADA

ಕಟೀಲು ದೇವಳದಲ್ಲಿ ವಾಹನ ಪಾರ್ಕಿಂಗ್ ಶುಲ್ಕ ಜಾರಿಗೆ ಭಕ್ತರ ಆಕ್ರೋಶ: ತಾತ್ಕಾಲಿಕ ತಡೆ

Published

on

ಕಟೀಲು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇನ್ನು ಮುಂದೆ ದೇವಳದ ರಥಬೀದಿಯಲ್ಲಿ ಮತ್ತು ಬಸ್‌ಸ್ಟ್ಯಾಂಡ್‌ನಲ್ಲಿ ವಾಹನ ಪಾರ್ಕಿಂಗ್ ಮಾಡಿದರೆ ಹಣ ನೀಡಬೇಕಾಗುತ್ತದೆ ಎಂದು ದೇವಳದ ಆಡಳಿತ ಮಂಡಳಿ ತಿಳಿಸಿದೆ.

ರಾಜ್ಯ ಉಚ್ಛ ನ್ಯಾಯಾಲಯದ ಆದೇಶದಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತರ ಸುತ್ತೋಲೆ ಮೇರೆಗೆ ದೇವಳದ ರಥಬೀದಿ ಮತ್ತು ಬಸ್ಸು ನಿಲ್ದಾಣದಲ್ಲಿ ವಾಹನ ನಿಲುಗಡೆ ವ್ಯವಸ್ಥೆಯನ್ನು ಹಣ ನೀಡಿ ನಿಲುಗಡೆ ಮಾಡುವಂತೆ ಪರಿವರ್ತಿಸಲಾಗಿದೆ.


ಆಡಳಿತ ಮಂಡಳಿ ದರದ ಕುರಿತು ಬ್ಯಾನರ್ ಅಳವಡಿಸಿದ್ದು ದ್ವಿಚಕ್ರ ವಾಹನ 10 ರೂ, ತ್ರಿಚಕ್ರ ವಾಹನ 20ರೂ, ಲಘುವಾಹನ 30ರೂ ಹಾಗೂ ಘನ ವಾಹನಕ್ಕೆ 50 ರೂ ನಿಗದಿಪಡಿಸಲಾಗಿದೆ.

ವಾಹನ ಪಾರ್ಕಿಂಗ್ ಶುಲ್ಕ ದರ ನಿಗದಿಪಡಿಸಿರುವುದರಿಂದ ದೇವಳಕ್ಕೆ ಬರುವ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಈ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಆಡಳಿತ ಮಂಡಳಿ ದೇವಳದ ಆಡಳಿತ ಮಂಡಳಿ ಪೇ ಪಾರ್ಕಿಂಗ್ ಬಗ್ಗೆ ಸರ್ಕಾರದ ಧಾರ್ಮಿಕ ಇಲಾಖೆಯಿಂದ ಆದೇಶ ಬಂದಿದ್ದು ಈ ಬಗ್ಗೆ ಬ್ಯಾನರ್ ಅಳವಡಿಸಲಾಗಿದೆ. ಈವರೆಗೆ ಪೇ ಪಾರ್ಕಿಂಗ್ ಆರಂಭಿಸಿಲ್ಲವೆಂದು ತಿಳಿಸಿದೆ.

ಈ ನಡುವೆ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಶಿಫಾರಸ್ಸು ಮೇರೆಗೆ ತಕ್ಷಣದಿಂದ ಪಾರ್ಕಿಂಗ್ ಶುಲ್ಕ ಸಂಗಹ್ರಹವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು ತಾಂತ್ರಿಕ ಪ್ರಕ್ರಿಯೆಗಳ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ದೇವಳದ ಮೂಲಗಳು ತಿಳಿಸಿವೆ.

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

DAKSHINA KANNADA

ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ

Published

on

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ  ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.

 

ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.

Continue Reading

LATEST NEWS

Trending