Connect with us

    kerala

    ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ 3,235 ಕಿ.ಮೀ. ನಡೆದು ಬಂದ ಭಕ್ತರು

    Published

    on

    ಮಂಗಳೂರು/ಪತ್ತನಂತಿಟ್ಟ: ಭಕ್ತರಿಬ್ಬರು ವಿಶ್ವಶಾಂತಿಗಾಗಿ ಪ್ರಾರ್ಥಿಸಿ ಸುಮಾರು 223 ದಿನಗಳ ಕಾಲ 3,235 ಕಿ.ಮೀ ದೂರ ಬರಿಗಾಲಲ್ಲಿ ನಡೆದುಕೊಂಡು ಬಂದು ಶಬರಿಮಲೆಯ ಅಯ್ಯಪ್ಪ ದೇವಾಲಯವನ್ನು ನಿನ್ನೆ (ಜ.11) ತಲುಪಿದ್ದಾರೆ.

    ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಯ ಮುಖಾಂತರ ಈ ವಿಚಾರ ತಿಳಿದಿದೆ.

    ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯಗಳಲ್ಲಿ ಕೇರಳ ರಾಜ್ಯದ ಪತ್ತನಂತಿಟ್ಟ ಜಿಲ್ಲೆಯ ಪಶ್ಚಿಮ ಘಟ್ಟಗಳ ಪರ್ವತ ಶ್ರೇಣಿಯಲ್ಲಿರುವ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಾಲಯವೂ ಒಂದು. ದಟ್ಟ ಕಾಡಿನ ನಡುವೆ ಈ ದೇವಾಲಯವಿದ್ದು, ಪ್ರಾಕೃತಿಕವಾಗಿ ಎಷ್ಟು ಸುಂದರವಾಗಿದೆಯೋ ಶ್ರದ್ಧಾ ಭಕ್ತಿಗೂ ಅಷ್ಟೇ ಪ್ರಸಿದ್ಧಿ ಪಡೆದಿದೆ. ಅಯ್ಯಪ್ಪ ಮಾಲೆ ಧರಿಸುವುದನ್ನು ಅತ್ಯಂತ ಪವಿತ್ರವಾದ ಕೆಲಸ ಎಂದು ಪರಿಗಣಿಸಲಾಗಿದೆ. ಮಾಲಾಧಾರಿಗಳು ಕಠೋರ ಜೀವನಶೈಲಿ ನಡೆಸಿ ಅಯ್ಯಪ್ಪನ ದರ್ಶನ ಪಡೆಯುತ್ತಾರೆ. ಆದರೆ ಈ ಭಕ್ತರಿಬ್ಬರು ಅತೀ ಕಠಿಣ ವೃತಾಚರಣೆ ಮಾಡಿ ಸ್ವಾಮಿಯ ದರ್ಶನ ಪಡೆಯುವ ಮೂಲಕ ಸುದ್ಧಿಯಲ್ಲಿದ್ದಾರೆ.

    ಕಾಸರಗೋಡು ಜಿಲ್ಲೆಯ ರಾಮದಾಸ್ ನಗರದ ನಿವಾಸಿಗಳಾದ ಸನತ್‌ಕುಮಾ‌ರ್ ನಾಯಕ್ ಮತ್ತು ಸಂಪತ್‌ಕುಮಾ‌ರ್ ಶೆಟ್ಟಿ ಅವರು 2024ರ ಮೇ 26ರಂದು ಕೇರಳದಿಂದ ಬದರಿನಾಥಕ್ಕೆ ರೈಲಿನಲ್ಲಿ ಪ್ರಯಾಣಿಸಿದರು. ಜೂನ್ 3ರಂದು ತಮ್ಮ ‘ಇರುಮುಡಿ’ ಹೊತ್ತು ಅಲ್ಲಿಂದ ಶಬರಿಮಲೆಗೆ ಪ್ರಯಾಣ ಬೆಳಸಿದ್ದರು. ನಿನ್ನೆ ದೇವಸ್ಥಾನ ತಲುಪಿ ದೇವರ ದರ್ಶನ ಪಡೆದಿದ್ದಾರೆ.

    DAKSHINA KANNADA

    ಶೇರು ಮಾರ್ಕೆಟ್‌ ನಲ್ಲಿ ಹಣ ತೊಡಗಿಸಿದರೆ ಅಧಿಕ ಲಾಭಾಂಶ ಆಮಿಷ

    Published

    on

    ಮಂಗಳೂರು : ವಾಟ್ಸಾಪ್‌ನಲ್ಲಿ ಪರಿಚಯವಾದ ವ್ಯಕ್ತಿಗೆ ಶೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬ ಆಮಿಷವೊಡ್ಡಿ 10 ಲಕ್ಷ ರೂಪಾಯಿ ವಂಚಿಸಿದ್ದ ಪ್ರಕರಣವೊಂದರಲ್ಲಿ ಕೇರಳ ಮೂಲದ ಯುವಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

    ಕೇರಳದ ತ್ರಿಶೂರ್‌ನ ಮಟ್ಟೂರು ನೂಲುವ್ಯಾಲಿಯ ಕೈಪುಝ ಹೌಸ್‌ ನಿವಾಸಿ ನಿಧಿನ್‌ ಕುಮಾರ್‌ ಕೆ.ಎಸ್‌ ಬಂಧಿತ ಆರೋಪಿ. ಈ ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಶಂಕೆ ಇದ್ದು, ಅವರಿಗಾಗಿ ಶೋಧ ನಡೆದಿದೆ.

    ಈತ ಕಳೆದ ವರ್ಷ ಶೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗ ಬಹುದೆಂದು ನಂಬಿಸಿ ವ್ಯಕ್ತಿಯೊಬ್ಬರಿಂದ 10,32,000 ರೂಪಾಯಿಗಳನ್ನು ಹಂತಹಂತವಾಗಿ ಪಡೆದುಕೊಂಡಿದ್ದ. ಈ ಬಗ್ಗೆ ಮಂಗಳೂರಿನ ಸೆನ್‌ ಕ್ರೈಮ್‌ ಪೊಲೀಸರು ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೆತ್ತಿಕೊಂಡಿದ್ದರು.

    ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಳಿ ದುರಂತ 

    ಪ್ರಕರಣಕ್ಕೆ ಸಂಬಂಧಿಸಿ ದೂರುದಾರರ ವಿವಿಧ ಬ್ಯಾಂಕ್‌ ಖಾತೆಗಳಿಂದ ಹಣ ವರ್ಗಾವಣೆಯಾದ ಬಗ್ಗೆ ಮತ್ತು ಅದು ಯಾರ ಖಾತೆಗೆ ಪಾವತಿಯಾಗಿದೆ ಎಂಬಿತ್ಯಾದಿ ವಿವರಗಳನ್ನು ಸಂಗ್ರಹಿಸಿ ಪೊಲೀಸರು ತನಿಖೆಯನ್ನು ನಡೆಸಿದ್ದರು. ಆರೋಪಿಯ ಬ್ಯಾಂಕ್‌ ಖಾತೆಗೆ 1 ಲಕ್ಷ ರೂಪಾಯಿ. ಬಂದಿದ್ದು, ಆತನ ಸ್ನೇಹಿತ ತಿಳಿಸಿದಂತೆ ವಿವಿಧ ಬ್ಯಾಂಕ್‌ ಖಾತೆಗಳಿಗೆ ಕಮಿಷನ್‌ ಪಡೆದುಕೊಂಡು ಹಣವನ್ನು ವರ್ಗಾವಣೆ ಮಾಡಿದ್ದಾಗಿ ತಿಳಿದು ಬಂದಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

    ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್ವಾಲ್‌, ಡಿಸಿಪಿಗಳಾದ ಸಿದ್ದಾರ್ಥ ಗೋಯಲ್‌, ರವಿಶಂಕರ್‌ ನಿರ್ದೇಶನದಂತೆ ಸೆನ್‌ ಎಸಿಪಿ ರವೀಶ್‌ ನಾಯಕ್‌, ಇನ್‌ಸ್ಪೆಕ್ಟರ್‌ ಸತೀಶ್‌ ಎಂ.ಪಿ ಹಾಗೂ ಎಸ್‌ಐ ಗುರಪ್ಪ ಕಾಂತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

    Continue Reading

    kerala

    ಶಬರಿಮಲೆ ಯಾತ್ರಿಕರ ವಿಶೇಷ ಪಾಸ್ ತಾತ್ಕಾಲಿಕ ಸ್ಥಗಿತ

    Published

    on

    ಮಂಗಳೂರು/ಶಬರಿಮಲೆ: ಕಾಲ್ನಡಿಗೆಯಲ್ಲಿ ಅರಣ್ಯ ಮಾರ್ಗವಾಗಿ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ತೆರಳುವ ಭಕ್ತರಿಗೆ ನೀಡಲಾಗಿದ್ದ ವಿಶೇಷ ಪಾಸ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ತಿರುವಾಂಕೂರು ದೇವಸ್ವಂ ಮಂಡಳಿ (TDB) ಪ್ರಕಟಿಸಿದೆ.

    ದೇವಸ್ವಂ ಮಂಡಳಿ ಸದಸ್ಯ ಎ.ಅಜಿಕುಮಾರ್ “ವರ್ಚುವಲ್ ಸರತಿ ವ್ಯವಸ್ಥೆ ಮತ್ತು ಸ್ಪಾಟ್ ಬುಕ್ಕಿಂಗ್ ಮಾಡಿ ಪಂಪಾ ಮೂಲಕ ಆಗಮಿಸುವ ಭಕ್ತರು ದರ್ಶನಕ್ಕಾಗಿ ದೀರ್ಘಾವಧಿ ಕಾಯುವ ಸಮಯವನ್ನು ತಡೆಯಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು” ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಈ ಹಿಂದೆ ಅರಣ್ಯ ಮಾರ್ಗದಲ್ಲಿ ಸಂಚರಿಸುವ 5,000 ಭಕ್ತರಿಗೆ ವಿಶೇಷ ಪಾಸ್ ನೀಡುವ ವ್ಯವಸ್ಥೆ ಮಾಡಲಾಗಿತ್ತು.ಆದರೆ, ಅರಣ್ಯ ಮಾರ್ಗವಾಗಿ ಆಗಮಿಸುವ ಭಕ್ತರ ಸಂಖ್ಯೆ ಐದು ಪಟ್ಟು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ವಿಶೇಷ ಪಾಸ್ ನೀಡುವುದಕ್ಕೆ ನಿರ್ಬಂಧ ಹೇರಲಾಗಿದೆ. ಮುಂದಿನ ಸೂಚನೆ ಬರುವವರೆಗೂ ವಿಶೇಷ ಪಾಸ್‌ಗಳನ್ನು ನೀಡದಿರಲು ಮಂಡಳಿ ನಿರ್ಧರಿಸಿದೆ .ಸಾಂಪ್ರದಾಯಿಕ ಅರಣ್ಯ ಮಾರ್ಗಗಳ ಮೂಲಕ ಪಾದಯಾತ್ರೆ ಮಾಡುವ ಯಾತ್ರಾರ್ಥಿಗಳಿಗೆ ವಿಶೇಷ ದರ್ಶನ ವ್ಯವಸ್ಥೆಗಳನ್ನು ಕಳೆದ ತಿಂಗಳು ಪರಿಚಯಿಸಲಾಗಿತ್ತು. ಅಂತಹ ಯಾತ್ರಾರ್ಥಿಗಳಿಗೆ ಅರಣ್ಯ ಇಲಾಖೆಯಿಂದ ವಿಶೇಷ ಟ್ಯಾಗ್‌ಗಳನ್ನು ನೀಡಲಾಗಿದ್ದು, ದರ್ಶನಕ್ಕೆ ಪ್ರತ್ಯೇಕ ಸರತಿ ಸಾಲು ಸೇರಿದಂತೆ ಸವಲತ್ತುಗಳನ್ನು ನೀಡಲಾಗುತ್ತಿತ್ತು.

    Continue Reading

    International news

    ಕೇರಳ ಮೂಲದ ವಿದ್ಯಾರ್ಥಿನಿಯ ಶ*ವ ಸ್ಕಾಟ್ಲೆಂಡ್ ನದಿಯಲ್ಲಿ ಪತ್ತೆ

    Published

    on

    ಮಂಗಳೂರು/ಲಂಡನ್: ಡಿಸೆಂಬರ್ 6 ರಿಂದ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿನಿಯ ಶ*ವ ಸ್ಕಾಟ್ಲೆಂಡಿನ ನದಿಯೊಂದರಲ್ಲಿ ಪತ್ತೆಯಾಗಿದೆ.

    ಕೇರಳದ ಕೋಲೆಂಚೇರಿಯ ಮೂಲದ ಸಂತ್ರಾ ಸಾಜು ಅವರು ಸ್ಕಾಟಿಷ್ ನ ಎಡಿನ್ ಬರ್ಗ್ ನಲ್ಲಿರುವ ಹೆರಿಯಟ್-ವ್ಯಾಟ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಡಿಸೆಂಬರ್ 6ರ ಸಂಜೆ ಲಿವಿಂಗ್ ಸ್ಟನ್ ನ ಆಲ್ಮಂಡ್ ವೇಲ್ ನಲ್ಲಿರುವ ಅಸ್ಡಾ ಸೂಪರ್ ಮಾರ್ಕೆಟ್ ನಲ್ಲಿ ಕೊನೆಯದಾಗಿ ಸಂತ್ರಾ ಕಾಣಿಸಿಕೊಂಡಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

    ಇದನ್ನೂ ಓದಿ: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಹಗ್ಗ ತುಂಡಾಗಿ ಬಿದ್ದು ಸಾವು

    ‘ಡಿಸೆಂಬರ್ 27ರ ಬೆಳಿಗ್ಗೆ 11:55ರ ವೇಳೆ ಎಡಿನ್ ಬರ್ಗ್ ನ ನ್ಯೂಬ್ರಿಡ್ಜ್ ಬಳಿ ನದಿಯಲ್ಲಿ ಯುವತಿಯೊಬ್ಬಳ ಶ*ವ ಪತ್ತೆಯಾಗಿದ್ದು, ನಾಪತ್ತೆಯಾಗಿರುವ ಸಂತ್ರಾ ಅವರ ಮೃ*ತದೇಹವೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಮೃ*ತದೇಹದ ಗುರುತು ಖಚಿತಪಡಿಸಿಕೊಳ್ಳಲು ಸಂತ್ರಾ ಅವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ’ ಎಂದು ಸ್ಕಾಟ್ಲೆಂಡ್ ಪೊಲೀಸರು ತಿಳಿಸಿದ್ದಾರೆ.

    ಸಂತ್ರಾ ಅವರ ಸಾವಿನ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Continue Reading

    LATEST NEWS

    Trending