ಕಟೀಲು: ಧರ್ಮ ಜಾಗರಣ ಸಮನ್ವಯ ಪರಿಯೋಜನಾ ಪ್ರಮುಖ್ ಭಾಸ್ಕರ ದಾಸ್ ಎಕ್ಕಾರು (66) ಹಾಸನದಲ್ಲಿ ಶನಿವಾರ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ,
ಕೆಲಸ ನಿಮಿತ್ತ ಕಳೆದ ೧೦ ದಿನಗಳ ಹಿಂದೆ ಮಹರಾಷ್ಟ್ರ ಮತ್ತು ಬೆಂಗಳೂರು ಮತ್ತಿರರ ಕಡೆಗಳಿಗೆ ತೆರಳಿದ್ದು, ಶನಿವಾರ ಬೆಂಗಳೂರಿನಿಂದ ಮಂಗಳೂರಿಗೆ ತಮ್ಮ ಇನೋವಾ ವಾಹನದಲ್ಲಿ ವಾಪಾಸ್ಸಾಗುವ ಸಂದರ್ಭ ಕುಣಿಗಲ್ ನಲ್ಲಿ ಬಾಸ್ಕರ್ ದಾಸ್ ಅವರು ಸಂಚರಿಸುತ್ತಿದ್ದ ವಾಹನಕ್ಕೆ ಎಮ್ಮೆಯೊಂದು ಅಡ್ದ ಬಂದ್ದಿದೆ.
ಕೂಡಲೇ ಚಾಲಕ ಅಪಘಾತ ತಪ್ಪಿಸಲು ಚಾಲ ಕೂಡಲೇ ಬ್ರೇಕ್ ಹಾಕಿದ್ದು ಈ ಸಂದರ್ಭ ತಮ್ಮ ವಾಹನಕ್ಕೆ ಹಿಂಬದಿಯಿಂದ ಬಂದ ಮಿನಿ ಬಸ್ ಡಿಕ್ಕಿ ಹೊಡೆದಿದೆ,
ಈ ಸಂದರ್ಭ ಮುಂಭಾಗದ ಸೀಟ್ ನಲ್ಲಿ ವಿಶ್ರಾಂತಿಯಲ್ಲಿದ್ದ ಭಾಸ್ಕರ ದಾಸ್ ಗಂಭೀರ ಗಾಯಗೊಂಡಿದ್ದರು ಕೂಡಲೇ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದ್ದು ಭಾನುವಾರ ಸಂಜೆ ಅಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಬಾಸ್ಕರ ದಾಸ್ ಅವರು ಪ್ರಸ್ತುತ ಪ್ರಸ್ತುತ ಭಾರತ ಸರಕಾರದ ಸಾಮಾಜಿಕ ನ್ಯಾಯ ಹಕ್ಕುಗಳ ಸಬಲೀಕರಣ ಸಚಿವಾಲಯ ಡಿಎನ್ಟಿ-ಎನ್ಟಿ-ಎಸ್ಎನ್ಟಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದು, ಡಿ. ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತರಾಗಿದ್ದರು,
ಕಟೀಲು ಶ್ರೀ ದುರ್ಗಾಪರಮೆಶ್ವರೀ ದೇವಸ್ಥಾನದಲ್ಲಿ ಕಳೆದ ಎರಡು ವರ್ಷದ ಹಿಂದೆ ನಡೆದ ಬ್ರಹ್ಮಕಲಶೋತ್ಸವದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು,
ಎಕ್ಕಾರು ಗ್ರಾಮ ಪಂಚಾಯತಿನಿಂದ ೨ ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದರು,
ಕರ್ನಾಟಕ ರಾಜ್ಯ ಅಲೆಮಾರಿ-ಅರೆ ಅಲೆಮಾರಿ ವಿಮುಕ್ತ ಬುಡಕಟ್ಟುಗಳ ಒಕ್ಕೂಟ ಬೆಂಗಳೂರು ಇದರ ರಾಜ್ಯಾಧ್ಯಕ್ಷರಾಗಿ, ಅಲೆಮಾರ ಸಂಸ್ಕೃತಿ ಅಭಿವೃದ್ಧಿ ನಿಗಮ, ರಾಜ್ಯ ಸಾಂಸ್ಕೃತಿಕ ಪ್ರಕೊಷ್ಠದಲ್ಲಿ ಸದಸ್ಯರಾಗಿ, ಧರ್ಮ ಜಾಗರಣ ಸಮನ್ವಯ ಪರಿಯೋಜನಾ ಸಹ ಪ್ರಮುಖ್ ಆಗಿ, ಕರ್ನಾಟಕ ರಾಜ್ಯ ಚೆನ್ನದಾಸರ್ ಕ್ಷೇಮಾಭಿವೃದಿ ಸಂಘ, ಬೆಂಗಳೂರು ಇದರ ರಾಜ್ಯಾಧ್ಯಕ್ಷ ಮಾತ್ರವಲ್ಲದೆ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ ಮತ್ತು ಮೂವರು ಗಂಡು ಮಕ್ಕಳು ಅಗಲಿದ್ದಾರೆ.
ಮೃತರಿಗೆ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಉಮಾನಾಥ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್, ಕಟೀಲು ಅನಂತಪದ್ಮನಾಭ ಆಸ್ರಣ್ಣ ಮತ್ತಿತರರು ಸಂತಾಪ ಸೂಚಿಸಿದ್ದಾರೆ.
ಮೃತ ಅಂತಿಮ ಸಂಸ್ಕಾರ ಸೋಮವಾರ ಬೆಳಿಗ್ಗೆ ಎಕ್ಕಾರಿನಲ್ಲಿ ನಡೆಯಲಿದ್ದು ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುವುದು.