Connect with us

BELTHANGADY

ಧರ್ಮಸ್ಥಳ: 100 ದಿನಗಳಲ್ಲಿ 110 ಕೆರೆಗಳಿಗೆ ಪುನಶ್ಚೇತನ ಭಾಗ್ಯ

Published

on

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಂತೆ ಸಂಸ್ಥೆಯು ನಿರ್ಲಕ್ಷ್ಯಕ್ಕೊಳಗಾದ ಕೆರೆಗಳಿಗೆ ಕಾಯಕಲ್ಪ ಕೊಡುವ ಕಾರ್ಯ ನಡೆಸುತ್ತಿದ್ದು ಪ್ರಸ್ತುತ ವರ್ಷ ಕೇವಲ 100 ದಿನಗಳಲ್ಲಿ ರಾಜ್ಯದ 110 ಕೆರೆಗಳ ಪುನಶ್ಚೇತನ ಕಾರ್ಯ ನಡೆಸಲಾಗಿದೆ ಎಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್‌ ಹೆಚ್ ಮಂಜುನಾಥ್ ಹೇಳಿದರು.


ರಾಜ್ಯದಲ್ಲಿ ಸುಮಾರು 16 ಸಾವಿರ ಕೆರೆಗಳಿವೆ ಎಂಬ ಮಾಹಿತಿಯಿದೆ. ಈ ಕೆರೆಗಳು ಪುನಶ್ಚೇತನಗೊಂಡು ಒಮ್ಮೆ ನೀರು ತುಂಬಿಕೊಂಡರೆ ರಾಜ್ಯದ ಸಹಸ್ರಾರು ಎಕರೆ ಪ್ರದೇಶಕ್ಕೆ ನೀರುಣಿಸಲು ಸಾಧ್ಯವಾಗಬಹುದು.

ಆದರೆ ಇಂದು ಅದೆಷ್ಟೋ ಕೆರೆಗಳು ತಮ್ಮ ನೀರು ಸಂಗ್ರಹ ಸಾಮರ್ಥ್ಯವನ್ನು ಕಳೆದುಕೊಂಡಿದೆ. ನಿರ್ವಹಣೆಯಿಲ್ಲದೆ ಗಿಡಗಂಟಿಗಳು ಬೆಳೆದು ಹೂಳುಯ ತುಂಬಿಕೊಂಡಿದೆ. ಮರಳು, ಮಣ್ಣಿಗಾಗಿ ಕೆರೆಯ ಒಡಲನ್ನು ಅಗೆದು ವಿರೂಪಗೊಳಿಸಲಾಗಿದೆ. ಒತ್ತುವರಿಯಿಂದಾಗಿ ನೀರು ಹರಿದು ತರುತ್ತಿದ್ದ ಕಾಲುವೆಗಳು ಇಲ್ಲದಂತಾಗಿದೆ.

ಈ ಎಲ್ಲ ಕಾರಣಗಳಿಂದ ಇಡೀ ಗ್ರಾಮಕ್ಕೆ ನೀರುಣಿಸುತ್ತಿದ್ದ ಕೆರೆಗಳಿದ್ದರೂ ಹನಿ ನೀರಿಗಾಗಿ ಪರದಾಡುತ್ತಿರುವ ರಯತರ ಹಾಗೂ ನೀರಿಗಾಗಿ ಕಿಲೋಮೀಟರ್‌ಗಟ್ಟಲೆ ಅಲೆಯುತ್ತಿರುವ ಮಹಿಳೆಯರ ಸಂಕಷ್ಟವನ್ನು ಗಮನಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವಿರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ವಿ. ಹೆಗ್ಗಡೆಯವರು ಪಾರಂಪರಿಕ ಕೆರೆಗಳ ಪುನಶ್ಚೇತನಕ್ಕಾಗಿಯೇ’ ನಮ್ಮೂರು ನಮ್ಮ ಕೆರೆ” ಕಾರ್ಯಕ್ರಮವನ್ನು 2016ರಲ್ಲಿ ಪ್ರಾರಂಭಿಸಿದರು. ಅದರಂತೆ ಪ್ರಸ್ತುತ ವರ್ಷ ಕೇವಲ 100 ದಿನಗಳಲ್ಲಿ ರಾಜ್ಯದ 110 ಕೆರೆಗಳ ಪುನಶ್ಚೇತನ ಕಾರ್ಯ ನಡೆಸಲಾಗಿದ್ದು, ಕೆರೆಗಳು ಸುಂದರವಾಗಿ ಪುನಶ್ಚೇತನಗೊಂಡು ನೀರು ಸಂಗ್ರಹಕ್ಕೆ ಅಣಿಯಾಗಿದೆ.

ಕಳೆದ ಡಿಸೆಂಬರ್ ಮಧ್ಯಬಾಗದಲ್ಲಿ ಕೆರೆಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. 9 ಎಂಜಿನಿಯರ್‌ಗಳು, 130 ನೋಡಲ್ ಅಧಿಕಾರಿಗಳು ಹಾಗೂ ಸುಮಾರು 550ಕ್ಕೂ ಹೆಚ್ಚು ಕೆರೆ ಸಮಿತಿ ಪದಾಧಿಕಾರಿಗಳ ತಂಡ ಜಲಯೋಧರಾಗಿ ದುಡಿದಿದ್ದಾರೆ.

ಕೆರೆಗಳ ದುರಸ್ತಿಗಾಗಿ 340 ಜೆಸಿಬಿ ಹಾಗೂ ಹಿಟಾಚಿ ಯಂತ್ರಗಳು, 2450 ಕ್ಕೂ ಅಧಿಕ ಟ್ರಾಕ್ಟರ್‌ ಹಾಗೂ ಟಿಪ್ಪರ್‌ಗಳನ್ನು ಬಳಸಿಕೊಳ್ಳಲಾಯಿತು. ಹೂಳು ತೆಗೆಯುವುದು, ಏರಿ ಭದ್ರಪಡಿಸುವುದು, ಕಾಲುವೆ ಹಾಗೂ ಕೋಡಿಗಳ ರಿಪೇರಿ, ಕಲ್ಲು ಕಟ್ಟುವುದು ಮೊದಲಾದ ಕಾಮಗಾರಿಗಳ ಮೂಲಕ ಕೆರೆಗಳು ವೈಜ್ಞಾನಿಕ ಹಾಗೂ ಸುಂದರವಾಗಿ ಪುನರ್ ನಿರ್ಮಾಣಗೊಂಡಿದೆ.

ದುರಸ್ತಿಗೊಳಿಸಿದ ಕೆರೆಗಳ ವೈಶಿಷ್ಟ್ಯತೆ:

ನಾಡ ಪ್ರಭು ಕೆಂಪೇಗೌಡರು ರಾಮನಗರದ ಸಾವನದುರ್ಗಾ ಕೋಟೆಯಲ್ಲಿ ಯುದ್ಧೋಪಕರಣಗಳನ್ನು ತಯಾರು ಮಾಡುತ್ತಿದ್ದ ಸೈನಿಕರಿಗಾಗಿ ನಿರ್ಮಿಸಿದ ಮೇಲೆ ಹಳ್ಳಿಕೆರೆ, ಕೆಳದಿ ಚೆನ್ನಮ್ಮ ಆಳ್ವಿಕೆಯಲ್ಲಿ ನಿರ್ಮಾಣವಾಗಿದ್ದ ಹೊಸನಗರ ತಾಲ್ಲೂಕಿನ ಒಟ್ಟೂರು ಕೆರೆಗಳು ಪುನಶ್ಚೇತನಗೊಂಡು ಗತವೈಭವಕ್ಕೆ ಮರಳಿವೆ.

ಸಂಡೂರು ಮಹಾರಾಣಿಗಾಗಿ ನಿರ್ಮಾಣವಾಗಿದ್ದ ಬೊಮ್ಮನಹಳ್ಳಿಕೆರೆ, ಮಕ್ಕಳಿಲ್ಲದ ಮಲ್ಲಕ್ಕ ಎಂಬ ಮಹಿಳೆ ಊರಿಗೆ ಆಸ್ತಿಯಾಗಿ ನಿರ್ಮಿಸಿದ ಕಿತ್ತೂರು ಮಲ್ಲಕ್ಕನ ಕೆರೆಗಳು ಜಲಸಂಗ್ರಹಕ್ಕೆ ಅನಿಯಾಗಿ ನಿಂತಿದೆ.

ಪುನಶ್ಚೇತನಗೊಂಡ ಕೆರೆಗಳ ಮುಂದಿನ ನಿರ್ವಹಣೆಗಾಗಿ ಕೆರೆ ಸಮಿತಿ ಹಾಗೂ ಗ್ರಾ.ಪಂಚಾಯಿತಿಗಳಿಗೆ ಜವಾಬ್ದಾರಿ ವಹಿಸಿಕೊಡಲಾಗುತ್ತಿದೆ.

ಕೆರೆಗಳ ಸುತ್ತ ಅರಣ್ಯೀಕರಣಕ್ಕಾಗಿ ಮುಂದಿನ ಮಳೆಗಾಲದಲ್ಲಿ ಕೆರೆಯಮಗಳದಲ್ಲಿ ಗಿಡ ನಾಟಿ ಕಾರ್ಯ ಹಮ್ಮಿಕೊಳ್ಳಲಾಗುವುದು. ಕೆರೆ ಸಮಿತಿ, ಅರಣ್ಯ ಇಲಾಖೆ, ಗ್ರಾಪಂ ಸಹಭಾಗಿತ್ವದಲ್ಲಿ ಪ್ರಾದೇಶಿಕವಾರು ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ಕೆರೆಯ ಸುತ್ತ ನೆಡಲಾಗುವುದು ಎಂದು ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್ ಎಚ್ ಮಂಜುನಾಥ್ ತಿಳಿಸಿದರು.

BELTHANGADY

Belthangady: ಕಾರಿನ ಮೇಲೆ ಕಾಡಾನೆ ದಾಳಿ- 6 ಮಂದಿಗೆ ಗಾಯ..!

Published

on

ಬೆಳ್ತಂಗಡಿ: ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿ ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯಾ ಎಂಬಲ್ಲಿ ನಡೆದಿದ್ದು, ಅಲ್ಟೋ ಕಾರಿನ ಮೇಲೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಆರು ಮಂದಿಗೆ ಗಾಯವಾಗಿದೆ.

ಈ ಘಟನೆ ನೆರಿಯಾದ ಪೋಸ್ಟ್ ಆಫೀಸ್ ಬಳಿ ನಡೆದಿದೆ. ನೆರಿಯಾ ಗ್ರಾಮ ಕಾಡಿನ ಅಂಚಿನಲ್ಲಿರೋ ಕಾರಣ ಕಾಡಾನೆ ಆತಂಕ ಹೆಚ್ಚಾಗಿದೆ. ಕಾಡಾನೆ ದಾಳಿಯಿಂದ ಕಾರಿಗೆ ಹಾನಿಯಾಗಿದ್ದು, ಗಾಯಗೊಂಡವರಿಗೆ ಬೆಳ್ತಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

BELTHANGADY

Belthangady: ಮನೆಯ ಶೆಡ್‌ ನಲ್ಲಿ ನಿಲ್ಲಿಸಿದ್ದ ಕಾರು ಕಳವು- ನಾಲ್ವರು ಅರೆಸ್ಟ್..!

Published

on

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯಲ್ಲಿ ಮನೆಯ ಶೆಡ್‌ನ‌ಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಿನ್ನಿಗೋಳಿಯ ತಾಳಿಪಾಡಿ ಗ್ರಾಮದ ಉಮಾ ಅಜಯ್‌ ಶೆಟ್ಟಿ(32), ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಗಾಣದಬೆಟ್ಟು ನಿವಾಸಿ ಸೂರಜ್‌ ಶೆಟ್ಟಿ(23), ಇಳಂತಿಲ ಗ್ರಾಮದ ಎನ್ಮಾಡಿ ನಿವಾಸಿ ಮಂಜುನಾಥ ಪೂಜಾರಿ (30) ಮತ್ತು ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಪರೆಕಲ್‌ ನಿವಾಸಿ ಕಿಶೋರ್‌ ಟಿ.(32) ಬಂಧಿತ ಆರೋಪಿಗಳು.

ಚಾರ್ಮಾಡಿ ಗ್ರಾಮದ ಕಕ್ಕಿಂಜೆಯಲ್ಲಿ ನ. 9 ರಂದು ರಾತ್ರಿ 10 ಗಂಟೆ ವೇಳೆಗೆ ಇಸಾಕ್‌ ಅವರ ಅಕ್ಕನ ಮಗ ನೌಫಾಲ್‌ ತನ್ನ ಕಾರ್‌ಶೆಡ್ಡಿನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರನ್ನು ಗೆಳೆಯ ಸೈಫ‌ುದ್ದಿನ್‌ನ ಸ್ನೇಹಿತ ಸೂರಜ್‌ ಶೆಟ್ಟಿ ಮತ್ತು ಅಜಯ್‌ ಶೆಟ್ಟಿ ಅವರು ಬಾಡಿಗೆಗೆ ನೀಡುವಂತೆ ಕೇಳಿದ್ದರು. ಆದರೆ ಕಾರನ್ನು ನೀಡದ ಕಾರಣ ಅವರೇ ಕಳವು ಮಾಡಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು. ಬೆಳ್ತಂಗಡಿ ಪೊಲೀಸ್‌ ಇನ್ಸ್ ಪೆಕ್ಟರ್‌ ನಾಗೇಶ್‌ ಕದ್ರಿ ಅವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಅನಿಲ್‌ ಕುಮಾರ್‌ ಡಿ. ಮತ್ತು ಸಬ್‌ ಇನ್‌ಸ್ಪೆಕ್ಟರ್‌ ಸಮರ್ಥ ರವೀಂದ್ರ ಗಾಣಿಗೇರ, ಎಎಸ್‌ಐಗಳಾದ ಸಾಮ್ಯುವೆಲ್‌ ಮತ್ತು ಪೌಲೋಸ್‌ ಹಾಗೂ ಸಿಬಂದಿ ರಾಜೇಶ್‌ ಎನ್‌., ಪ್ರಶಾಂತ್‌, ಮಂಜುನಾಥ್‌, ಮಲ್ಲಿಕಾರ್ಜುನ್‌ ಅವರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಅವರಿಗೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

 

Continue Reading

BELTHANGADY

ಜನ್ಮ ದಿನಾಚರಣೆಯ ಸಂಭ್ರಮದಲ್ಲಿ ಧರ್ಮಸ್ಥಳದ ಖಾವಂದರು

Published

on

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು 76ನೇ ವರ್ಷಕ್ಕೆ ನ. 25ರಂದು ಪಾದಾರ್ಪಣೆ ಮಾಡುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ವೀರೇಂದ್ರ ಹೆಗ್ಗಡೆ ಅವರಿಗೆ ವಿವಿಧ ಕ್ಷೇತ್ರಗಳ ಗಣ್ಯರು ಶುಭಾಶಯ ಕೋರಿದ್ದಾರೆ. 1948ರ ನವೆಂಬರ್ 25ರಂದು ಜನಿಸಿದ್ದ ಹೆಗ್ಗಡೆ ಅವರು 1964ರ ಅ. 24ರಂದು ಕ್ಷೇತ್ರದ 21ನೇ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತರಾಗಿದ್ದರು. ಹೆಗ್ಗಡೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ವ ಉದ್ಯೋಗ ತರಬೇತಿ ಕೇಂದ್ರಗಳು, ಸಿರಿ ಸಂಸ್ಥೆಗಳು, ಎಲ್ಲ ಬಗೆಯ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ,  ವಿದ್ಯಾ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಉಜಿರೆ ಸೇರಿದಂತೆ ಮಂಗಳೂರು, ಮೈಸೂರು, ಧಾರವಾಡ, ಬೆಂಗಳೂರು, ಉಡುಪಿ ಮೊದಲಾದ ಕಡೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ನಡೆಸುತ್ತಿದ್ದಾರೆ. ಇವರ ಹುಟ್ಟುಹಬ್ಬಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನದ ನೌಕರರು, ಊರಿನ ನಾಗರಿಕರು, ಕ್ಷೇತ್ರದ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲ ಸಂಸ್ಥೆಗಳ ಸಿಬಂದಿಯಿಂದ ವಿಶೇಷ ಗೌರವ ಸಲ್ಲಿಸಿದ್ದಾರೆ.

 

Continue Reading

LATEST NEWS

Trending