BELTHANGADY
Dharmasthala: ಡಾ. ವಿರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನಕಾರಿ ಆರೋಪ ಮಾಡದಂತೆ ಕೋರ್ಟ್ ಆದೇಶ..!
ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದವರ ಬಗ್ಗೆ ಆರೋಪಗಳನ್ನು ಮಾಡದಂತೆ ನ್ಯಾಯಾಲಯ ನಿರ್ಬಂಧಕಾಜ್ಞೆ ನೀಡಿದೆ.
ಧರ್ಮಸ್ಥಳ: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದವರ ಬಗ್ಗೆ ಆರೋಪಗಳನ್ನು ಮಾಡದಂತೆ ನ್ಯಾಯಾಲಯ ನಿರ್ಬಂಧಕಾಜ್ಞೆ ನೀಡಿದೆ.
ಪ್ಕರಣಕ್ಕೆ ಸಂಬಂಧಿಸದಂತೆ ‘ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ನಡೆಸುತ್ತಿರುವಂತಹ ಸಂಸ್ಥೆಗಳು ಹಾಗೂ ಅವರ ಕುಟುಂಬಸ್ಥರ ವಿರುದ್ಧ ಸಾಮಾಜಿಕ ಜಾಲತಾಣಗಳಾದ ವಾಟ್ಸ್ ಆ್ಯಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್, ಯೂ–ಟ್ಯೂಬ್, ಟಿ.ವಿ.ಚಾನೆಲ್ ಹಾಗೂ ಇತರೆ ಯಾವುದೇ ರೀತಿಯ ಮಾಧ್ಯಮ ಪ್ರಕಾರಗಳಲ್ಲಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ವರದಿ ಅಥವಾ ಮಾತನಾಡಬಾರದು’ ಎಂದು ನಿರ್ಬಂಧಿಸಿ ನ್ಯಾಯಾಲಯ ಆದೇಶಿಸಿದೆ.
ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಮಾಡುತ್ತಿರುವ ವರದಿಗಳನ್ನು ನಿಲ್ಲಿಸಬೇಕು ಹಾಗೂ ಈಗಾಗಲೇ ಮಾಡಿರುವ ವರದಿಗಳನ್ನು ತೆಗೆದು ಹಾಕಬೇಕು ಎನ್ನುವುದಾಗಿ ಬೆಂಗಳೂರು ಸಿವಿಲ್ ಕೋರ್ಟ್ ಆದೇಶಿಸಿದೆ.
2012ರಲ್ಲಿ ನಡೆದಿದ್ದ ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯರಾದ ಮಹೇಶ್ ಶೆಟ್ಟಿ ತಿಮರೋಡಿ, ಜಗದೀಶ್, ಪ್ರಭಾ ಬೆಳಹೊಂಗಲ, ಸೋಮನಾಥ್ ನಾಯಕ್, ಬಿ.ಎಂ.ಭಟ್, ವಿಠ್ಠಲ ಗೌಡ ಮತ್ತು ಇತರರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಆರೋಪಗಳನ್ನು ಮಾಡಿ ತೋಜೋವಧೆ ಮಾಡುತ್ತಿದ್ದಾರೆ.
ಈ ಸಂಬಂಧ ಕೆಲ ಮಾಧ್ಯಮಗಳು ಕ್ಷೇತ್ರದ ವಿರುದ್ಧ ಮತ್ತು ಕ್ಷೇತ್ರಾಧಿಕಾರಿ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ಅವಹೇಳನಕಾರಿಯಾಗಿ ವರದಿ ಮಾಡುತ್ತಿವೆ‘ ಎಂದು ದಾವೆದಾರರು ಅರ್ಜಿಯಲ್ಲಿ ವಿವರಿಸಿದ್ದಾರೆ.
ಪುತ್ತೂರು ಮೂಲದ ನ್ಯಾಯವಾದಿಗಳಾದ ರಾಜಶೇಖರ ಹಿಲ್ಕಾರು ಮತ್ತು ಮಂಗಳೂರಿನ ಮಯೂರ ಕೀರ್ತಿ ವಾದಿಸಿದ್ದರು ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಹ್. ಮಂಜುನಾಥ್ ತಿಳಿಸಿದ್ದಾರೆ.
BELTHANGADY
ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು- ಕಳ್ಳ ಅರೆಸ್ಟ್..!
ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಮೂಲದ ನಿವಾಸಿ ಉಮೇಶ್ ಬಳೇಗಾರ್(47) ಬಂಧಿತ ಆರೋಪಿ.
ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅಜಿತ್ ನಗರ ಕೆಲ್ಲೆ ನಿವಾಸಿ ಫೆಲಿಕ್ಸ್ ರೋಡ್ರಿಗಸ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗಲು ಹೊತ್ತಿನಲ್ಲಿ ಮನೆಯ ಬಾಗಿಲು ಮುರಿದು ನುಗ್ಗಿ ಸುಮಾರು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಆಗಿದೆ.
ಈ ಕೂಡಲೇ ಮನೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.
ಆರೋಪಿ ವಿರುದ್ಧ ತಮಿಳುನಾಡು, ಕೇರಳದ ವಿವಿಧ ಠಾಣೆಗಳಲ್ಲಿ ಕಳ್ಳತನದ ಪ್ರಕರಣಗಳು ದಾಖಲಿಸಲಾಗಿದೆ.
ಅಲ್ಲದೆ ಕರ್ನಾಟಕದ ಪುತ್ತೂರು, ಬಂಟ್ವಾಳ, ಮಂಗಳೂರು, ಮೂಡಬಿದ್ರೆ ಠಾಣೆಯಲ್ಲಿಯೂ ಹಲವಾರು ಪ್ರಕರಣಗಳ ಆರೋಪಿಯಾಗಿದ್ದಾನೆ.
ಈತನಿಗಾಗಿ ಮೂರೂ ರಾಜ್ಯಗಳ ಪೊಲೀಸರು ಹುಡುಕಾಟ ನಡೆಸುತ್ತಿರುವಾಗಲೇ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಈತನಿಂದ ಕಳ್ಳತನ ಮಾಡಲಾದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
BELTHANGADY
ಚಾರ್ಮಾಡಿ ಘಾಟ್ ನಲ್ಲಿ ನೂರು ಅಡಿ ಪ್ರಪಾತಕ್ಕೆ ಉರುಳಿದ ಲಾರಿ..!
ನೀರಿನ ಬಾಟಲ್ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ನೂರು ಅಡಿ ಪ್ರಪಾತಕ್ಕೆ ಉರುಳಿದ ಘಟನೆ ಸೆ.15ರಂದು ನಡೆದಿದ್ದು, ಅದೃಷ್ಟವಶಾತ್ ಲಾರಿ ಚಾಲಕ ಮತ್ತು ಕ್ಲೀನರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಚಾರ್ಮಾಡಿ: ನೀರಿನ ಬಾಟಲ್ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ನೂರು ಅಡಿ ಪ್ರಪಾತಕ್ಕೆ ಉರುಳಿದ ಘಟನೆ ಸೆ.15ರಂದು ನಡೆದಿದ್ದು, ಅದೃಷ್ಟವಶಾತ್ ಲಾರಿ ಚಾಲಕ ಮತ್ತು ಕ್ಲೀನರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಶುಕ್ರವಾರ ರಾತ್ರಿ ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲ್ ತುಂಬಿದ ಲಾರಿ ಚಾರ್ಮಾಡಿ ಘಾಟಿಯಲ್ಲಿ ಆವರಿಸಿದ ದಟ್ಟ ಮಂಜಿನಿಂದಾಗಿ ಚಾಲಕನಿಗೆ ದಾರಿ ಕಾಣದೆ ಪ್ರಪಾತಕ್ಕೆ ಬಿದ್ದಿದೆ.
ಲಾರಿ ಮೊದಲು ತಡೆಗೋಡೆಗೆ ಢಿಕ್ಕಿ ಹೊಡೆದು ಬಳಿಕ ನೂರು ಅಡಿ ಪ್ರಪಾತಕ್ಕೆ ಉರುಳಿದೆ.
ಈ ಸಂದರ್ಭದಲ್ಲಿ ಅಲ್ಲಿ ಇದ್ದ ಮರವೊಂದಕ್ಕೆ ಲಾರಿ ಸಿಲುಕಿಕೊಂಡ ಪರಿಣಾಮ ಸಂಭವನೀಯ ಅವಘಡ ತಪ್ಪಿದೆ ಹಾಗೂ ಈ ಮರ ಇಬ್ಬರ ಪ್ರಾಣ ಉಳಿಸಿದೆ.
ಒಂದು ವೇಳೆ ಲಾರಿ ಮರಕ್ಕೆ ಸಿಕ್ಕಿಕೊಳ್ಳದಿದ್ದಲ್ಲಿ ಸಾವಿರ ಅಡಿ ಪ್ರಪಾತಕ್ಕೆ ಹೋಗಿ ಬೀಳುವ ಸಾಧ್ಯತೆ ಇತ್ತು ಎನ್ನಲಾಗಿದೆ.
ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BELTHANGADY
ಭಾಸ್ಕರ ನಾಯ್ಕ ಹಲ್ಲೆ ಪ್ರಕರಣ:ತಿಮರೋಡಿ ಮತ್ತವರ ಸಂಗಡಿರನ್ನು ಬಂಧಿಸಲು ಆಗ್ರಹ
ಮಂಗಳೂರು : ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪಾಣಿಯಾಲ್ ಎಂಬಲ್ಲಿ ದಲಿತ ಸಮುದಾಯದ ನಿವಾಸಿ ಭಾಸ್ಕರ ನಾಯ್ಕ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಸಂಗಡಿಗರನ್ನು ಕೂಡಲೇ ಬಂಧಿಸ ಬೇಕೆಂದು ಭಾಸ್ಕರ ನಾಯ್ಕ ಅವರ ಪತ್ನಿ ಮಮತಾ, ಮಕ್ಕಳಾದ ವೈಷ್ಣವಿ, ವೈಭವಿ ಅವರು ಒತ್ತಾಯಿಸಿದ್ದಾರೆ.
ಮಮತಾ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿ, ನನ್ನ ಗಂಡ ಭಾಸ್ಕರ ನಾಯ್ಕ ಅವರು ಸೆ. 2 ರಂದು ಖಾಸಗಿ ಮಾಧ್ಯಮವೊಂದರಲ್ಲಿ ವಿವರಣೆ ನೀಡಿ ಮರಳಿ ಹೋಗುತ್ತಿದ್ದಾಗ ಪಾಣಿಯಾಲ್ ಬಳಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಸಂಗಡಿಗರು ಕಾರನ್ನು ತಡೆದು ಹೊರಕ್ಕೆಳೆದು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ವಿಷಯ ತಿಳಿದು ನಾನು ಮಕ್ಕಳ ಜತೆ ಸ್ಥಳಕ್ಕೆ ತೆರಳಿ ಬಿಡಿಸಲು ಯತ್ನಿಸಿದಾಗ ನನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಬಳಿಕ ನನ್ನ ಗಂಡನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದೇನೆ ಹಾಗೂ ಮಹೇಶ್ ತಿಮರೋಡಿ ಮತ್ತು ತಂಡದ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಿದ್ದೇನೆ. ಈ ಸಂದರ್ಭದಲ್ಲಿ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಲಾಗಿತ್ತು. ಆದರೆ ಬಂಧಿಸಿರಲಿಲ್ಲ್ಲ. ಬಳಿಕ ಪೆರ್ಮುದೆ ಬಳಿ ಬಹಿರಂಗ ಸಭೆಯಲ್ಲಿ ತಿಮರೋಡಿ ಭಾಗವಹಿಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದಾಗ ನಾನು ಕೂಡಲೇ ಎಸ್.ಪಿ. ಅವರಿಗೆ ಫೋನ್ ಮಾಡಿ ಮಾಹಿತಿ ನೀಡಿದ್ದೇನೆ ಎಂದರು.
ಎಸ್.ಪಿ. ಅವರು ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ್ದರು. ಆದರೆ ಬಂಧಿಸಿಲ್ಲ. ಮತ್ತೊಮ್ಮೆ ಎಸ್.ಪಿ. ಆವರಿಗೆ ಮನವಿ ಮಾಡಿದ್ದೇನೆ. ಇದುವರೆಗೆ ಏನೂ ಕ್ರಮ ಆಗಿಲ್ಲ. ಇದೀಗ ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಒದಗಿಸ ಬೇಕು. ಗಂಡ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದು, ಅವರ ಆರೋಗ್ಯವನ್ನು ನಾನು ನೋಡಿಕೊಳ್ಳುತ್ತಿದ್ದೇನೆ. ಮಕ್ಕಳು ಕೂಡಾ ಶಾಲೆಗೆ ಹೋಗದೆ ನನ್ನ ಜತೆ ಇದ್ದಾರೆ. ಆದ್ದರಿಂದ ಆರೋಪಿಗಳನ್ನು ಕೂಡಲೇ ಬಂಧಿಸ ಬೇಕು ಎಂದು ಒತ್ತಾಯಿಸಿದ್ದಾರೆ.
- bengaluru6 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA5 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- DAKSHINA KANNADA6 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ
- DAKSHINA KANNADA6 days ago
ಮಂಗಳೂರಿನ ಆಟೋಮ್ಯಾಟ್ರಿಕ್ಸ್ ಶೋ ರೂಮ್ ನಲ್ಲಿ ಟಾಟಾ ನೆಕ್ಸಾನ್, ಇ.ವಿ ಬಿಡುಗಡೆ