Connect with us

  LATEST NEWS

  ಸಲ್ಮಾನ್ ಖಾನ್ ಜೊತೆ ಹುಟ್ಟುಹಬ್ಬ ಆಚರಿಸಿದ ಧೋನಿ..! ಪತಿಯ ಆಶೀರ್ವಾದ ಪಡೆದ ಸಾಕ್ಷಿ ಧೋನಿ

  Published

  on

  ಮುಂಬೈ/ಮಂಗಳೂರು:  ಭಾರತದ ಕ್ಯಾಪ್ಟನ್ ಕೂಲ್ ಮಹಿ ತನ್ನ 43 ನೇ ಹುಟ್ಟುಹಬ್ಬವನ್ನು ಬಾಲಿವುಡ್ ಬಾದ್‌ಶಾ ಸಲ್ಮಾನ್ ಖಾನ್ ಜೊತೆ ಆಚರಿಸಿಕೊಂಡಿದ್ದಾರೆ. ಸತತ ಮೂರು ಬಾರಿ ಭಾರತಕ್ಕೆ ಮೂರು ಐಸಿಸಿ ಟ್ರೋಫಿಗಳನ್ನು ತಂದುಕೊಟ್ಟ ಮಹೇಂದ್ರ ಸಿಂಗ್ ಧೋನಿ ಎಲ್ಲರ ಫೇವರೆಟ್ ಕ್ರಿಕೆಟರ್. ಮೈದಾನದಲ್ಲಿ ಮಾತ್ರವಲ್ಲದೇ ತಮ್ಮ ದೈನಂದಿನ ಜೀವನದಲ್ಲೂ ತುಂಬಾನೇ ಕೂಲ್ ಆಗಿರ್ತಾರಂತೆ ದೋನಿ. ಇದೀಗ ತಮ್ಮ ಹುಟ್ಟುಹಬ್ಬವನ್ನು ಸಲ್ಮಾನ್ ಖಾನ್ ರವರ ಜೊತೆ ಆಚರಿಸಿಕೊಂಡಿದ್ದು ಇವರಿಬ್ಬರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

  ಪೋಸ್ಟ್ ಹಾಕಿ ವಿಶ್ ಮಾಡಿದ ಸಲ್ಮಾನ್‌

  ಸಲ್ಮಾನ್ ಖಾನ್ ತನ್ನ ಸೋಶಿಯಲ್ ಮೀಡಿಯಾ ಇನ್ಸ್ಟಾಗ್ರಾಂ ನಲ್ಲಿ ಧೋನಿ ಸಲ್ಮಾನ್ ಜೊತೆಗೆ ಕೇಕ್ ಕತ್ತರಿಸುವ ಫೊಟೋವನ್ನು ಪೋಸ್ಟ್ ಮಾಡಿದ್ದಾರೆ. ಜೊತೆಗೆ “ಹ್ಯಾಪಿ ಬರ್ತ್‌ಡೇ ಕ್ಯಾಪ್ಟನ್ ಸಾಹೇಬ್” ಎಂದು ಬರೆದು ಧೋನಿಯನ್ನು ಟ್ಯಾಗ್ ಮಾಡಿದ್ದಾರೆ.

  ಪತಿಯ ಪಾದ ಮುಟ್ಟಿ ಆಶೀರ್ವಾದ ಪಡೆದ ಸಾಕ್ಷಿ ಧೋನಿ

  ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಮದುವೆ ಪೂರ್ವ ಸಮಾರಂಭದ ಸಂಗೀತ ಕಾರ್ಯಕ್ರಮದಲ್ಲಿ ಧೋನಿ ಹಾಗೂ ಅವರ ಪತ್ನಿ  ಪಾಲ್ಗೊಂಡಿದ್ದರು. ಬಾಲಿವುಡ್ ಸೆಲೆಬ್ರೆಟಿಗಳು ಸೇರಿದಂತೆ ನಟ, ನಟಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆ ದಿನ ರಾತ್ರಿ  ಪತ್ನಿ ಸಾಕ್ಷಿರವರು ದೋನಿ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ್ದಾರೆ. ಈ ವೇಳೆ ಸಲ್ಮಾನ್ ಖಾನ್ ಕೂಡಾ ಜೊತೆಗಿದ್ದು ವಿಶ್ ಮಾಡಿದ್ದಾರೆ. ಕೇಕ್ ಕಟ್‌ ಮಾಡಿ ಮೊದಲು ಪತ್ನಿ ಸಾಕ್ಷಿ ತನ್ನಿಸಿದ್ದಾರೆ. ಬಳಿಕ ಸಲ್ಮಾನ್ ಖಾನ್ ಗೆ ಕೇಕ್ ತಿನ್ನಿಸಿದ್ದಾರೆ. ಈ ವೇಳೆ ಧೋನಿ ಪತ್ನಿ ಪತಿಯ ಕಾಲಿಗೆ ಬಿದ್ದು ಆಶೀರ್ವಾದ ಪಡೆಯುವುದರ ಮೂಲಕ ಭಾರತೀಯ ಸಂಸ್ಕೃತಿ ಮೆರೆದಿದ್ದಾರೆ.

  ತಾಯ್ನಾಡಿಗೆ ಬಂದ ಟೀಂ ಇಂಡಿಯಾಗೆ ಭರ್ಜರಿ ಸ್ವಾಗತ..! ಗೆಲುವಿನ ಸಂಭ್ರಮಾಚರಣೆಗೆ ಸಾಕ್ಷಿಯಾದ ಮುಂಬೈ

  ಅಭಿಮಾನಿಗಳಿಂದ ಕಟೌಟ್ ಹಾಕಿ ಸಂಭ್ರಮಾಚರಣೆ

  ಇನ್ನೂ ಮಹೇಂದ್ರ ಸಿಂಗ್ ಧೋನಿ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಭಾರತದಲ್ಲಿ ಮಾತ್ರವಲ್ಲದೇ ವಿದೇಶದಲ್ಲೂ ಇವರಿಗೆ ಕ್ರಿಕೆಟ್ ಅಭಿಮಾನಿಗಳಿದ್ದಾರೆ. ಇವರನ್ನು ಕ್ರಿಕೆಟ್ ದೇವರೆಂದೂ ಪೂಜಿಸುವವರೂ ಕೂಡಾ ಇದ್ದಾರೆ.  ಮಹೇಂದ್ರ ಸಿಂಗ್​ ಧೋನಿ ಅವರು ಟೀಮ್​ ಇಂಡಿಯಾದ ಬ್ಲೂ ಜೆರ್ಸಿಯಲ್ಲಿ ಬ್ಯಾಟ್​ ಹಿಡಿದ ಬರೋಬ್ಬರಿ 52 ಅಡಿ ಎತ್ತರದ ಕಟೌಟ್​ ನಿರ್ಮಿಸಿದ್ದಾರೆ. ಸದ್ಯ ಧೋನಿಯ ಈ ಕಟೌಟ್​ ಫೋಟೋವನ್ನು ಅಂತರ್ಜಾಲದಲ್ಲಿ ಕೊಟ್ಯಾಂತರ ಅಭಿಮಾನಿಗಳು ಶುಭಾಶಯ ಕೋರಿದ್ದಾರೆ. ಕಳೆದ ಬಾರಿಯೂ ಕೂಡ ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯಲ್ಲಿ ಅಭಿಮಾನಿಗಳು ಧೋನಿಯ 43ನೇ ಜನ್ಮದಿನದ ಗೌರವಾರ್ಥವಾಗಿ 43 ಅಡಿ ಎತ್ತರದ ಕಟೌಟ್​ ನಿರ್ಮಿಸಿದ್ದರು. ಕೇರಳದಲ್ಲಿಯೂ 2018 ರಲ್ಲಿ 35 ಅಡಿ ಎತ್ತರದ ಕಟೌಟ್​ ನಿರ್ಮಿಸಿದ್ದರು.

  Click to comment

  Leave a Reply

  Your email address will not be published. Required fields are marked *

  LATEST NEWS

  ವಿದ್ಯುತ್ ತಂತಿಯಲ್ಲಿ ಜೀ*ವ ಕಳೆದುಕೊಂಡ ಹೆಬ್ಬಾವು..!

  Published

  on

  ಮಂಗಳೂರು ( ಉಳ್ಳಾಲ ) : ವಿದ್ಯುತ್ ಕಂಬ ಏರಿದ ಹೆಬ್ಬಾವೊಂದು ವಿದ್ಯುತ್ ಪ್ರವಹಿಸಿ ಸಾ*ವನ್ನಪ್ಪಿದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲದ ಮುಕ್ಕಚ್ಚೇರಿಯಲ್ಲಿ ಈ ಘಟನೆ ನಡೆದಿದ್ದು, ಮುಂಜಾನೆ ವಿದ್ಯುತ್ ಶಾರ್ಟ್ ಆದ ಸದ್ದು ಕೇಳಿ ಹೊರ ಬಂದ ಮನೆಯವರಿಗೆ ಈ ದೃಶ್ಯ ಕಂಡು ಬಂದಿದೆ.

   

  ಬೃಹತ್ ಗಾತ್ರದ ಈ ಹೆಬ್ಬಾವು ವಿದ್ಯುತ್ ಕಂಬ ಏರಿದ್ದು ಯಾರೂ ಗಮನಿಸಿರಲಿಲ್ಲ. ಮಳೆಯ ಕಾರಣದಿಂದ ಮನೆಯೊಳಗೆ ಇದ್ದ ಜನರಿಗೆ ಶಾರ್ಟ್ ಸರ್ಕ್ಯೂಟ್ ಸದ್ದಿನಿಂದ ವಿಚಾರ ಗೊತ್ತಾಗಿದೆ. ಮಾಹಿತಿ ಪಡೆದು ಆಗಮಿಸಿದ ವಿದ್ಯುತ್ ಇಲಾಖೆಯ ಸಿಬ್ಬಂದಿ ಹೆಬ್ಬಾವಿನ ಕಳೇಬರವನ್ನು ಕಂಬದಿಂದ ತೆರವು ಮಾಡಿದ್ದಾರೆ.

  Continue Reading

  DAKSHINA KANNADA

  ಕಳ್ಳರನ್ನು ಹಿಡಿದ 60 ರ ವೃದ್ಧೆ..!

  Published

  on

  ಮಂಗಳೂರು :ವೃದ್ಧೆ ಮಹಿಳೆಯ ಕತ್ತಿನಿಂದ ಚಿನ್ನದ ಸರ ಎಗರಿಸಲು ಯತ್ನಿಸಿದ್ದ ಕಳ್ಳರಿಬ್ಬರಿನ್ನು ಮಹಿಳೆಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಗುಂಡ್ಯಾ ಸಮೀಪದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.

  ಅಂಗಡಿಯಲ್ಲಿ ವೃದ್ಧ ಮಹಿಳೆ ಒಬ್ಬರೇ ಇದ್ದ ವೇಳೆ ಸ್ಕೂಟಿಯಲ್ಲಿ ಬಂದಿದ್ದ ಇಬ್ಬರು ವೃದ್ಧೆಯ ಕತ್ತಿನ ಸರ ಕಸಿಯಲು ಯತ್ನಿಸಿದ್ದಾರೆ. ಈ ವೇಳೆ ಜಾಗೃತಗೊಂಡ ಮಹಿಳೆ ತಕ್ಷಣ ಇಬ್ಬರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

  ತ್ರೇಸಿಯಾಮ್ಮ ಅವರಿಗೆ 60 ವರ್ಷ ವಯಸ್ಸಾಗಿದ್ದು, ಅಡ್ಡಹೊಳೆ ಹೆದ್ದಾರಿಯಲ್ಲಿ ಅಂಗಡಿ ನಡೆಸುತ್ತಿದ್ದಾರೆ. ಬೆಂಗಳೂರಿನಿಂದ ಕಳ್ಳತನ ನಡೆಸಲೆಂದೇ ಬಂದಿದ್ದ ಬೆಂಗಳೂರು ಯಶವಂತಪುರ ಮೂಲದ ರೋಹಿತ್ (25) ಮತ್ತು ಅಶೋಕ್ (25), ಎಂಬವರು ಮಂಗಳೂರಿನಲ್ಲಿ ವಾಹನ ಮಾರಾಟಗಾರಿಂದ ಟೆಸ್ಟ್ ಡ್ರೈವ್ ಮಾಡುತ್ತೇವೆ ಎಂದು ಸ್ಕೂಟಿ ಕಳ್ಳತನ ಮಾಡಿದ್ದಾರೆ. ಅದೇ ಸ್ಕೂಟಿಯಲ್ಲಿ ಬೆಂಗಳೂರಿಗೆ ಹೋಗುವ ದಾರಿಯಲ್ಲಿ ಚಿನ್ನದ ಸರ ಎಳೆಯಲು ಹೋಗಿ‌ ಸಿಕ್ಕಿಬಿದ್ದಿದ್ದಾರೆ.

  ಕಳ್ಳರಿಬ್ಬರನ್ನೂ ಉಪ್ಪಿನಂಗಡಿ ಪೊಲೀಸರ ವಶಕ್ಕೆ ಒಪ್ಪಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  Continue Reading

  DAKSHINA KANNADA

  ಜುಲೈ 16. ದ.ಕ, ಉಡುಪಿ ಶಾಲಾ ಕಾಲೇಜಿಗೆ ರಜೆ..!

  Published

  on

  ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತು ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು,ಸೋಮವಾರ ಜುಲೈ 15 ರಂದು ರಜೆ ನೀಡಲಾಗಿತ್ತು. ನಾಳೆ (ಜುಲೈ 16 )ಕೂಡಾ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬಹುತೇಕ ಹಳ್ಳ ನದಿಗಳು ಉಕ್ಕಿ ಹರಿಯುತ್ತಿದೆ. ಜುಲೈ 15 ರ ಮಳೆಯಿಂದ ಸಾಕಷ್ಟು ಕಡೆಗಳಲ್ಲಿ ಜನರು ತೊಂದರೆ ಅನುಭವಿಸಿದ್ದಾರೆ.

  ತಗ್ಗು ಪ್ರದೇಶಗಳಲ್ಲಿ ಕೆಲವೆಡೆ ಮನೆಗಳಿಗೆ ನೀರು ನುಗ್ಗಿದ ಘಟನೆ ಕೂಡಾ ನಡೆದಿದೆ. ಕೆಲೆವಡೆ ಶಾಲೆಯ ಗೋಡೆ ಕುಸಿತವಾಗಿದ್ದು, ಕೆಲವೆಡೆ ಗಾಳಿಗೆ ಶಾಲೆಯ ಹೆಂಚು ಹಾರಿ ಹೋಗಿದೆ. ನದಿಯ ನೀರು ಉಕ್ಕಿ ಹರಿಯುತ್ತಿದ್ದು, ಅಪಾಯದ ಅಂಚಿನಲ್ಲಿದೆ.

  ಹವಾಮಾನ ಇಲಾಖೆಯ ಸೂಚನೆಯಂತೆ ಜುಲೈ 16 ರಂದು ಕೂಡಾ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲೆಯಲ್ಲಿ ಎಲ್ಲಾ ಸರ್ಕಾರಿ, ಖಾಸಗಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
  ಭಾನುವಾರದಿಂದ ಶಾಲೆಗೆ ನಿರಂತರ ರಜೆ ಅನುಭವಿಸಿದ ಮಕ್ಕಳಿಗೆ ಬುಧವಾರ ಮೊಹರಂ ಪ್ರಯುಕ್ತ ಸರ್ಕಾರಿ ರಜೆ ಕೂಡ ಸಿಗಲಿದೆ. ಗುರುವಾರದಿಂದ ಮಳೆ ಕಡಿಮೆ ಆಗುವ ಸೂಚನೆ ಇದೆ.

  Continue Reading

  LATEST NEWS

  Trending