Connect with us

STATE

ವಜ್ರದ ನೆಕ್ಲೇಸ್‌ ಕದ್ದು ತಂದೆ ತಾಯಿಯ ಬ*ಲಿ ಕೊಟ್ಟು ಆಸ್ಪತ್ರೆ ಸೇರಿದ ಟೀಚರ್!

Published

on

ರಾಯಚೂರು : ಮಕ್ಕಳಿಗೆ ಪಾಠ ಮಾಡುತ್ತಿದ್ದ ಟೀಚರೊಬ್ಬರು, ತಂದೆ ತಾಯಿಯೊಂದಿಗೆ ಜೀವಾಂತ್ಯಗೊಳಿಸಲು ಯತ್ನಿಸಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ಈ ಯತ್ನದಲ್ಲಿ ತಂದೆ ತಾಯಿ ಇಹಲೋಕ ತ್ಯಜಿಸಿದ್ರೆ, ಮಗಳು ಗಂಭೀರವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಆದ್ರೆ, ಮಗಳು ಮಾಡಿದ ತಪ್ಪಿಗೆ ತಂದೆ-ತಾಯಿ ಬ*ಲಿಯಾಗಿದ್ದಾರೆ.

ನೆಕ್ಲೇಸ್ ಕದ್ದು ಸಿಕ್ಕಿಬಿದ್ದ ಟೀಚರ್!

ಅಂದಹಾಕೆ ಆಕೆ ಟೀಚರ್! ಹೆಸರು ಮೆಹಾಮನ್ ಮಕ್ಕಳಿಗೆ ಟ್ಯೂಷನ್ ಕೊಡುತ್ತಿದ್ದಳು.  ನಗರದ ಮಹಮ್ಮದ್ ಹುಸೇನ್ ಎಂಬವರ ಮನೆಯಲ್ಲಿ ಟ್ಯೂಷನ್ ಟೀಚರ್ ಆಗಿದ್ದ ಮೆಹಾಮನ್‌ ಸುಮ್ಮನೆ ಪಾಠ ಮಾಡಿ ಇರಬಹುದಾಗಿತ್ತು. ಆದ್ರೆ, ಈಕೆ ಮಾಡಿದ ಕೆಲಸ ಮಾತ್ರ ಬೇರೆ. ಹೌದು, ಟ್ಯೂಷನ್ ಮಾಡುತ್ತಿದ್ದ ಮನೆಯಿಂದಲೇ ಇತ್ತೀಚೆಗೆ ಡೈಮಂಡ್ ನೆಕ್ಲೆಸ್‌ ಹಾಗೂ ಚಿನ್ನವನ್ನು ಕದ್ದಿದ್ದಳು.

ಈ ವಿಚಾರವಾಗಿ ಪೊಲೀಸರು ತನಿಖೆ ನಡೆಸಿದ ವೇಳೆ, ಪೊಲೀಸರಲ್ಲಿ ಈ  ವಿಚಾರ ಬಾಯ್ಬಿಟ್ಟಿದ್ದಾಳೆ ಎನ್ನಲಾಗಿದೆ. ಅಷ್ಟಕ್ಕೆ ಜೀವಾಂತ್ಯ ಮಾಡೋ ಕೆಲಸಕ್ಕೆ ಕೈ ಹಾಕಿದ್ಲಾ ಅಂದ್ಕೋಬೇಡಿ, ಇದರಲ್ಲಿ ವಿಚಾರ ಬೇರೇನೆ ಇದೆ.

ಕದ್ದ ಮಾಲು ಬಾಯ್ ಫ್ರೆಂಡ್ ಗೆ…!

ಚಿನ್ನ, ವಜ್ರವನ್ನೇನ್ನೋ ಆಕೆ ಕದ್ದಿದ್ದಳು. ಆದರೆ, ಅದನ್ನು ಆಕೆ ಅವುಗಳನ್ನು ತಾನೇ ಇಟ್ಟುಕೊಳ್ಳಲಿಲ್ಲ. ಬದಲಿಗೆ ಆ ವಸ್ತಗಳನ್ನು ಆಕೆ ತನ್ನ ಬಾಯ್‌ ಫ್ರೆಂಡ್‌ ಸರ್ಪರಾಜ್‌ಗೆ ನೀಡಿದ್ದಾಳೆ.

ಪೊಲೀಸರ ಕೈಗೆ ಸಿಕ್ಕಿಬಿದ್ದ ಮೆಹಾಮನ್‌ ಈ ವಿಚಾರವನ್ನು ಬಾಯ್ಬಿಟ್ಟಿದ್ದಾಳೆ.

ಟೀಚರ್ ಲಾಕ್…ಬಾಯ್ ಫ್ರೆಂಡ್ ಎಸ್ಕೇಪ್…… ಸಾ*ವೇ ಗತಿ….

ಕದ್ದ  ವಸ್ತುಗಳನ್ನು ಬಾಯ್ ಫ್ರೆಂಡ್ ಗೆ ಕೊಟ್ಟಿದ್ದ ಮೆಹಾಮನ್ ಪೊಲೀಸರ ಕೈಗೆ ಸಿಕ್ಕಾಕಿಕೊಂಡಿದ್ದಾಳೆ. ಇನ್ನೇನು ಮಾಡೋದು…ಅತ್ತ  ಸರ್ಪರಾಜ್‌ಗೆ ಕರೆ ಮಾಡಿದ್ರೆ, ಆತ ಸ್ವಿಚ್‌ ಆಫ್ ಮಾಡಿ ಎಸ್ಕೇಪ್ ಆಗಿದ್ದಾನೆ. ಇತ್ತ ಇದೇ ವಿಚಾರವಾಗಿ ನೆಕ್ಲೇಸ್ ಕಳೆದುಕೊಂಡಿದ್ದ ಮನೆಯವರಿಗೆ ಹಾಗೂ ಮೆಹಾಮನ್‌ ಮನೆಯವರಿಗೆ ಜಗಳ ನಡೆದಿದೆ.
ಹೀಗಾಗಿ ಮೂವರೂ ಆತ್ಮಹ*ತ್ಯೆಯ ನಿರ್ಧಾರಕ್ಕೆ ಬಂದು ರೈಲಿನಡಿಗೆ ತಲೆಕೊಟ್ಟಿದ್ದಾರೆ.

ಆದರೆ, ತಂದೆ ಸಮೀರ್ ಅಹ್ಮದ್, ತಾಯಿ ಜುಲೇಕಾ ಬೇಗಂ ಸ್ಥಳದ್ಲಲೇ ಮೃ*ತ ಪಟ್ಟಿದ್ದರೆ, ಮೆಹಾಮನ್‌ ಗಂಭೀರ ಗಾಯದೊಂದಿಗೆ ಸಾ*ವು ಬದುಕಿನ ಹೋರಾಟ ನಡೆಸುತ್ತಿದ್ದಾಳೆ. ಸದ್ಯ ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

LATEST NEWS

ನಿಲ್ದಾಣದಲ್ಲಿ ರೈಲು ಇಳಿಯುವಾಗ ಬಿದ್ದು ಮೃ*ತಪಟ್ಟರೆ ಅದಕ್ಕೆ ರೈಲ್ವೆ ಇಲಾಖೆಯೇ ಹೊಣೆ ಎಂದ ಹೈಕೋರ್ಟ್; ಏನಿದು ಪ್ರಕರಣ? ಆದೇಶದಲ್ಲಿ ಏನಿದೆ?

Published

on

ಬೆಂಗಳೂರು : ಚಲಿಸುತ್ತಿರುವ ರೈಲಿನಿಂದ ಇಳಿಯುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃ*ತಪಟ್ಟರೆ ಅದಕ್ಕೆ ರೈಲ್ವೆ ಇಲಾಖೆಯೇ ಹೊಣೆ. ಮೃ*ತ ಪ್ರಯಾಣಿಕರ ಕುಟುಂಬಕ್ಕೆ ರೈಲ್ವೇ ಇಲಾಖೆಯೇ ಪರಿಹಾರ ನೀಡುವ ಕೆಲಸ ಮಾಡಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ.


ಏನಿದು ಪ್ರಕರಣ ?

ಜಯಮ್ಮ ಎಂಬವರು ರೈಲಿನಿಂದ ಬಿದ್ದು ಇಹಲೋಕ ತ್ಯಜಿಸಿದ್ದರು. ಜಯಮ್ಮ ತನ್ನ ಸಹೋದರಿಯೊಂದಿಗೆ ತಪ್ಪಾಗಿ ಬೇರೊಂದು ರೈಲು ಹತ್ತಿದ್ದರು. ಇದು ಗೊತ್ತಾಗಿ ಆಕೆ ಕೆಳಗಿಳಿಯುವ ವೇಳೆ ರೈಲು ಚಲಿಸಲು ಆರಂಭಿಸಿತ್ತು. ಆಗ ನಿಯಂತ್ರಣ ಕಳೆದುಕೊಂಡು ಆಕಸ್ಮಿಕವಾಗಿ ಕೆಳಗೆ ಬಿದ್ದು ತೀವ್ರವಾಗಿ ಗಾ*ಯಗೊಂಡು ಸ್ಥಳದಲ್ಲೇ ಮೃ*ತಪಟ್ಟಿದ್ದರು. ಇದನ್ನು ಪರಿಗಣಿಸಿ ಆಕೆಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ನಿರ್ದೇಶಿಸುವಂತೆ ನ್ಯಾಯಪೀಠಕ್ಕೆ ಅರ್ಜಿದಾರರ ಪರ ವಕೀಲ ಮನವಿ ಮಾಡಿದರು.

ರೈಲು ಇಳಿಯುವಾಗ ಸಂಭವಿಸಿದ ಅವಘಡದಲ್ಲಿ ಮೃ*ತಪಟ್ಟ ಜಯಮ್ಮ ಎಂಬವರ ಸಾ*ವಿಗೆ ಪರಿಹಾರ ಕಲ್ಪಿಸುವ ಸಂಬಂಧ ರೈಲ್ವೆ ಹಕ್ಕುಗಳ ನ್ಯಾಯಮಂಡಳಿ ಹೊರಡಿಸಿರುವ ತೀರ್ಪನ್ನು ಅರ್ಜಿದಾರರು ಪ್ರಶ್ನಿಸಿದ್ದರು.

ರಾಮನಗರ ಜಿಲ್ಲೆಯ ಚನ್ನಪಟ್ಟಣ ನಿವಾಸಿ ರೋಜಮಣಿ ಹಾಗೂ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಚ್.ಪಿ.ಸಂದೇಶ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ತೀರ್ಪು ನೀಡಿದೆ.

ರೈಲ್ವೆ ಇಲಾಖೆ ವಾದ ಏನಾಗಿತ್ತು?

ಈ ಘಟನೆ ಆಕಸ್ಮಿಕವಾಗಿ ನಡೆದಿದ್ದಲ್ಲ, ಉದ್ದೇಶಪೂರ್ವಕ ಎಂದು ರೈಲ್ವೆ ಇಲಾಖೆ ಹೇಳಿದರೂ ಅದಕ್ಕೆ ಸಾಕ್ಷ್ಯಾಧಾರ ಒದಗಿಸಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿ ರೈಲ್ವೆ ಹಕ್ಕುಗಳ ನ್ಯಾಯಮಂಡಳಿ ಹೊರಡಿಸಿರುವ ಆದೇಶವನ್ನು ತಳ್ಳಿಹಾಕುವಂತೆ ಅರ್ಜಿದಾರರು ವಾದಿಸಿದ್ದರು.

ಮೃ*ತ ಮಹಿಳೆ ತಪ್ಪಾಗಿ ಬೇರೊಂದು ರೈಲು ಹತ್ತಿದ್ದರು. ಆಗ ಅವರು ಒಂದೋ ಪ್ರಯಾಣ ಮುಂದುವರಿಸಿ ಮುಂದಿನ ನಿಲ್ದಾಣದಲ್ಲಿ ಇಳಿಯಬೇಕು. ಇಲ್ಲವೇ ಅಲಾರ್ಮ್ ಚೈನ್ ಎಳೆಯಬೇಕು. ಅದೆರಡನ್ನೂ ಮಾಡದೆ ರೈಲಿನಿಂದ ಇಳಿಯಲು ಪ್ರಯತ್ನಿಸಿ ಸ್ವಯಂಪ್ರೇರಿತ ಮತ್ತು ಉದ್ದೇಶಪೂರ್ವಕವಾಗಿ ಜಿಗಿದಿದ್ದಾರೆ.

ಹೀಗಾಗಿ ಘಟನೆ ಆಕಸ್ಮಿಕವಾಗಿ ಸಂಭವಿಸಿದೆ ಎನ್ನಲಾಗದು. ಆದ್ದರಿಂದ ರೈಲ್ವೆ ಕಾಯ್ದೆಯ ಸೆಕ್ಷನ್ 123(ಇ) ಅನ್ವಯ ಪರಿಹಾರ ಕಲ್ಪಿಸಲು ಸಾಧ್ಯವಿಲ್ಲ ಎಂದು ರೈಲ್ವೆ ಇಲಾಖೆ ಪ್ರತಿವಾದ ಮಂಡಿಸಿತ್ತು.

ಇದನ್ನೂ ಓದಿ : ಊಟಿಗೆ ಪ್ರಯಾಣ ಬೆಳೆಸೋ ಯೋಚನೆಯಲ್ಲಿದ್ದೀರಾ? ಹಾಗಾದ್ರೆ ಈ ಆದೇಶ ಪಾಲಿಸೋದು ಕಡ್ಡಾಯ!

ಪರಿಹಾರ ಎಷ್ಟು?

ಜಯಮ್ಮ ಸಾ*ವಿಗೆ ರೈಲ್ವೆಯಿಂದ 8 ಲಕ್ಷ ರೂ. ಪರಿಹಾರ ಕೋರಿದ್ದರು. ಆದೇಶದಲ್ಲಿ ಪೀಠವು ಪ್ರತಿವಾದಿಗಳು 4 ಲಕ್ಷ ರೂ. ವಾರ್ಷಿಕ ಶೇ.7 ಬಡ್ಡಿಯೊಂದಿಗೆ ಪಾವತಿಸುವಂತೆ ಹೇಳಿದೆ. ಇದಕ್ಕೆ ತಪ್ಪಿದ್ದಲ್ಲಿ ಪ್ರತಿವಾದಿಗಳು ಅರ್ಜಿದಾರರ ಮನವಿಯಂತೆ 8 ಲಕ್ಷ ರೂ. ಪಾವತಿಸಬೇಕು ಎಂದು ನ್ಯಾಯಪೀಠ ತಿಳಿಸಿದೆ.

ಘಟನೆ ನಡೆದಿದ್ದು ಹೇಗೆ ?

2014ರ ಫೆ.22 ರಂದು ಜಯಮ್ಮ ತನ್ನ ಸಹೋದರಿ ರತ್ನಮ್ಮ ಅವರೊಂದಿಗೆ ಚನ್ನಪಟ್ಟಣ ರೈಲು ನಿಲ್ದಾಣಕ್ಕೆ ಹೋಗಿ ಮೈಸೂರಿನ ಅಶೋಕಪುರಂಗೆ ಹೋಗಲು ‘ತಿರುಪತಿ ಪ್ಯಾಸೆಂಜರ್’ ರೈಲಿಗಾಗಿ ಕಾಯುತ್ತಿದ್ದರು. ಆಗ ‘ಟುಟಿಕೋರಿನ್ ಎಕ್ಸ್‌ಪ್ರೆಸ್’ ರೈಲು ಬಂದಿದೆ. ಇಬ್ಬರೂ ಆ ರೈಲು ಹತ್ತಿದ್ದರು.

ಆಮೇಲೆ ಅವರಿಗೆ ಗೊತ್ತಾಗಿದೆ, ರೈಲು ಅಶೋಕಪುರಂಗೆ ಹೋಗುವುದಿಲ್ಲ ಎಂಬುದು. ಹಾಗಾಗಿ ರೈಲಿನಿಂದ ಜಯಮ್ಮ ಇಳಿಯಲು ತೊಡಗಿದ್ದಾರೆ. ಆ ವೇಳೆ ರೈಲು ಚಲಿಸಲಾರಂಭಿಸಿತು, ಪರಿಣಾಮ ಸಮತೋಲನ ತಪ್ಪಿ ಆಕಸ್ಮಿಕವಾಗಿ ಕೆಳಗೆ ಬಿದ್ದು ಸ್ಥಳದಲ್ಲೇ ಸಾ*ವಿಗೀಡಾದರು. ಘಟನೆಗೆ ಪರಿಹಾರ ಕಲ್ಪಿಸಲು ಸಾಧ್ಯವಿಲ್ಲ ಎಂದು ರೈಲ್ವೆ ನ್ಯಾಯಮಂಡಳಿ ಅರ್ಜಿ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಮೃ*ತರ ಕುಟಂಬಸ್ಥರು ಹೈಕೋರ್ಟ್ ಮೆಟ್ಟಿಲೇರಿದ್ದರು.

Continue Reading

DAKSHINA KANNADA

ಈ ತಿಂಗಳಿನಲ್ಲಿ ಬರುತ್ತೆ ಪಿಎಂ ಕಿಸಾನ್ ಯೋಜನೆಯ 17ನೇಕಂತು..!

Published

on

ದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ದೇಶದ ಕೋಟ್ಯಂತರ ರೈತರಿಗೆ ಆರ್ಥಿಕ ನೆರವು ನೀಡುತ್ತಿದೆ. ಈ ಯೋಜನೆಯಿಂದ ಪ್ರತೀ ವರ್ಷ ರೈತರಿಗೆ ವಾರ್ಷಿಕವಾಗಿ 6000 ರೂಪಾಯಿಗಳ ಆರ್ಥಿಕ ನೆರವು ನೀಡಲಾಗುತ್ತಿದ್ದು, ಮೂರು ಕಂತುಗಳಲ್ಲಿ 2000 ರೂ. ನೇರವಾಗಿ ಕೃಷಿಗರ ಖಾತೆಗೆ ಜಮೆ ಮಾಡಲಾಗುತ್ತಿದೆ.

ಇದೀಗ ರೈತರು 17ನೇ ಕಂತಿನ ನಿರೀಕ್ಷೆಯಲ್ಲಿದ್ದು, ಮೇ.2024ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಕಂತನ್ನು ಪಡೆಯಬಹುದಾಗಿದೆ ಎಂದು ಮೂಲಗಳು ತಿಳಿಸಿವೆ.  ಆದರೆ ಈ ಬಗ್ಗೆ ಸರ್ಕಾರ ಯಾವುದೇ ಮಾಹಿತಿ ನೀಡಿಲ್ಲ.

16ನೇ ಕಂತನ್ನು ಫೆಬ್ರವರಿ ತಿಂಗಳಲ್ಲಿ ಪಿಎಂ ಕಿಸಾನ್‌ ನಿಧಿ ಯೋಜನೆಯ ಕಂತನ್ನು ರೈತರಿಗೆ ವರ್ಗಾವಣೆ ಮಾಡಲಾಗಿದೆ. ಇನ್ನು 17ನೇ ಕಂತಿಗಾಗಿ ಕಾದು ನೋಡಬೇಕಿದೆ. ಈ ಯೋಜನೆಯ ಕಂತುಗಳನ್ನು ವರ್ಷದಲ್ಲಿ ನಾಲ್ಕು ತಿಂಗಳಿಗೊಮ್ಮೆ ನೀಡಲಾಗುತ್ತದೆ. ಮೊದಲನೆಯ ಕಂತು ಏಪ್ರಿಲ್-ಜುಲೈನಲ್ಲಿ, ಎರಡನೆಯದು ಆಗಸ್ಟ್-ನವೆಂಬರ್ ನಲ್ಲಿ ಮತ್ತು ಮೂರನೆಯದು ಡಿಸೆಂಬರ್-ಮಾರ್ಚ್‌ನಲ್ಲಿ ನೀಡಲಾಗುತ್ತದೆ.

ಮುಂದೆ ಓದಿ..; “ಮದುವೆ ಗೌನ್‌”ಗೆ ಮತ್ತೊಂದು ಟಚ್ ಕೊಟ್ಟ ‘ಸಮಂತಾ’..!! ಶಾಕ್‌ನಲ್ಲಿಅಭಿಮಾನಿಗಳು!

ಈಗಾಗಲೇ 16ನೇ ಕಂತನ್ನು ಫೆಬ್ರವರಿಯಲ್ಲಿ ನೀಡಿದ್ದು, 17 ನೇ ಕಂತು ಮೇ ತಿಂಗಳಿನಲ್ಲಿ ವರ್ಗಾವಣೆಯಾಗಬಹುದು ಎನ್ನಲಾಗಿದ್ದು, ನಿರ್ದಿಷ್ಟ ದಿನಾಂಕ ಮಾತ್ರ ನಿಗದಿಯಾಗಿಲ್ಲ.

 

 

Continue Reading

bengaluru

ಸಂಸದ ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕ*ರಣಕ್ಕೆ ಟ್ವಿಸ್ಟ್..! ಎಸ್‌ಐಟಿ ರಚನೆ!!

Published

on

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣ ಭಾರೀ ಸದ್ದು ಮಾಡುತ್ತಿದೆ.  ಪ್ರಜ್ವಲ್ ಸಾವಿರಾರು ಹೆಣ್ಣುಮಕ್ಕಳ ಮೇಲಿನ ಲೈಂ*ಗಿಕ ದೌರ್ಜ*ನ್ಯ ಆರೋಪ ಎದುರಿಸುತ್ತಿದ್ದಾರೆ. ಈ ಬಗ್ಗೆ ಮಾಜಿ ಸಚಿವ, ಶಾಸಕ ಎಚ್.ಡಿ.ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ರವಿವಾರ ಪ್ರಕರಣ ದಾಖಲಾಗಿದೆ.

prajwal

47 ವರ್ಷದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ದೂರು ನೀಡಿದ್ದಾರೆ. ಈ ಹಿಂದೆ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಮಹಿಳೆ ನೀಡಿದ ದೂರಿನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೂರಿನಲ್ಲಿ ತಂದೆ ಎಚ್‌ಡಿ ರೇವಣ್ಣ ಅವರನ್ನು ಎ1 ಆರೋಪಿಯಾಗಿ ನಮೂದಿಸಿದ್ದು, ಎ2 ಪ್ರಜ್ವಲ್ ರೇವಣ್ಣ ಆಗಿದ್ದಾರೆ. ದೂರಿನಲ್ಲಿ ಏನಿದೆ ಅಂದರೆ… ನಮ್ಮ ಪತಿಗೆ ಎಚ್‌ಡಿ ರೇವಣ್ಣ ತಮ್ಮ ಡೇರಿಯಲ್ಲಿ ಕೆಲಸ ಕೊಡಿಸಿದ್ದರು. ಬಳಿಕ 2015ರಲ್ಲಿ ಹಾಸ್ಟೆಲ್‌ ಒಂದರಲ್ಲಿ ಅಡುಗೆ ಕೆಲಸಕ್ಕೆ ಸೇರಿಸಿದ್ದರು. ನಂತರ ತಮ್ಮ ಮನೆಯಲ್ಲಿ ಅಡುಗೆ ಕೆಲಸಕ್ಕೆ ಬರುವಂತೆ ರೇವಣ್ಣ ಹೇಳಿದ್ದರು. ಅಡುಗೆ ಕೆಲಸಕ್ಕೆ ಸೇರಿಕೊಂಡ ಬಳಿಕ ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದ ವೇಳೆ ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ಅಡುಗೆ ಮನೆಗೆ ಬಂದು ಪ್ರಜ್ವಲ್ ಸಹ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಪ್ರಜ್ವಲ್ ರೇವಣ್ಣ ಅಸಭ್ಯವಾಗಿ ವರ್ತಿಸಿದ್ದಾರೆ. ನನ್ನ ಮಗಳಿಗೂ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ ವರ್ತಿಸಿದ್ದಾರೆ. ಪದೇ ಪದೇ ಕಾಲ್ ಮಾಡಿದ್ದಕ್ಕೆ ಪುತ್ರಿ ಪ್ರಜ್ವಲ್ ನಂಬರ್ ಬ್ಲಾಕ್ ಮಾಡಿದ್ದರು. ಲೈಂಗಿಕ ಕಿರುಕುಳ ಹೆಚ್ಚಾದಾಗ ಕೆಲಸಬಿಟ್ಟು ಹೋಗಿದ್ದೆ ಎಂದು ಸಂತ್ರಸ್ತೆ ದೂರಿನಲ್ಲಿ ಹೇಳಿದ್ದಾರೆ.  ಸದ್ಯ ಪೆನ್‌ಡ್ರೈವ್ ವಿವಾದದಲ್ಲಿರುವ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು  ಜರ್ಮನಿ ಸೇರಿದ್ದಾರೆ ಎಂದು ಹೇಳಲಾಗಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಹಾಸನದಲ್ಲಿ ಏಪ್ರಿಲ್ 26 ರಂದು ನಡೆದಿದೆ. ಜೆಡಿಎಸ್ – ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ್ದಾರೆ.

ಮುಂದೆ ಓದಿ..; ಲೈಂ*ಗಿಕ ದೌರ್ಜ*ನ್ಯ ಆರೋಪ : ವಿಕಿಪೀಡಿಯಾದಲ್ಲಿ ಸೇವ್ ಆಯ್ತು ಪ್ರಜ್ವಲ್ ರೇವಣ್ಣ ಕೇಸ್!

ಎಸ್‌ಐಟಿಗೆ ನೀಡುವುದಾಗಿ ಗೃಹಸಚಿವರಿಂದ ಸೂಚನೆ:

ಚುನಾವಣೆಗೆ ಎರಡು ದಿನಗಳು ಬಾಕಿ ಉಳಿದಿರುವಾಗ ಈ ವಿಡಿಯೊ ದೃಶ್ಯಾವಳಿಗಳ ತುಣುಕುಗಳ ಪೆನ್‌ಡ್ರೈವ್‌ಗಳು ಹಾಸನದಾದ್ಯಂತ ವೈರಲ್ ಆಗಿತ್ತು. ಪ್ರಜ್ವಲ್ ರೇವಣ್ಣ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ನೀಡುವುದಾಗಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

Continue Reading

LATEST NEWS

Trending