Thursday, September 29, 2022

ಕರಾವಳಿಯ ಸರಣಿ ಕೊಲೆಗಳಲ್ಲಿ ತಾರತಮ್ಯ: ಮುಸ್ಲಿಂ ಐಕ್ಯ ವೇದಿಕೆ ಅಸಮಾಧಾನ

ಮಂಗಳೂರು: ಕರಾವಳಿಯಲ್ಲಿ ನಡೆದ ಸರಣಿ ಕೊಲೆಯಲ್ಲಿ ತಾರತಮ್ಯ ನಡೆಸಲಾಗುತ್ತಿದೆ. ಒಬ್ಬರ ಕೊಲೆ ಪ್ರಕರಣವನ್ನು ಎನ್ಐಎಗೆ ಇನ್ನಿಬ್ಬರ ತನಿಖೆ ಸ್ಥಳೀಯ ಪೊಲೀಸರಿಂದ ನಡೆಯುತ್ತಿದೆ.

ಕೊಲೆ, ಅಕ್ರಮ, ಮತಾಂಧತೆಯನ್ನು ನಮ್ಮ ಧರ್ಮದವರೂ ಮಾಡಿದರೂ ನಾವು ಬೆಂಬಲಿಸುವುದಿಲ್ಲ ಎಂದು ಮುಸ್ಲಿಂ ಧಾರ್ಮಿಕ ಮುಖಂಡರಾದ ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು ಹೇಳಿದ್ದಾರೆ.


ಫಾಝಿಲ್ ಹತ್ಯೆ ಖಂಡಿಸಿ ಸುರತ್ಕಲ್ ಮುಸ್ಲಿಂ ಐಕ್ಯತಾಯಿಂದ ವೇದಿಕೆಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮಾಯಕರಿಗೆ ಯಾವತ್ತೂ ಅನ್ಯಾಯವಾಗಬಾರದು. ಫಾಝಿಲ್‌ ಮೃತದೇಹ ಕೊಂಡೊಯ್ಯುವಾಗ ಯಾವುದೇ ಆಸ್ತಿಪಾಸ್ತಿಗೆ ಹಾನಿ ಮಾಡಿಲ್ಲ.

ನಮ್ಮ ಸಮುದಾಯದವರಲ್ಲಿ ಯಾವನೇ ಒಬ್ಬ ತಪ್ಪು ಮಾಡಿದರೂ ಭಾರತದ ಎಲ್ಲರ ಮೇಲೆ ಹೊರಿಸುವುದು.

ಅದು ಮುಸ್ಲಿಂ ಧರ್ಮದವರಲ್ಲಿ ಮಾತ್ರ ನಡೆಯುತ್ತದೆ. ಮೂವರ ಕೊಲೆ ಪ್ರಕರಣದಲ್ಲಿ ಸರಕಾರ ಸಾಂತ್ವಾನ ಹಾಗೂ ಪರಿಹಾರದಲ್ಲಿ ತಾರತಮ್ಯ ನಡೆಸಿದ್ದು, ಕಣ್ಣಿಗೆ ರಾಚುವಂತಿದೆ.

ಮುಖ್ಯಮಂತ್ರಿಯಾದವರು ಜನರನ್ನು ಪ್ರತಿನಿಧಿಸಬೇಕು ಹೊರತು. ಯಾವುದೇ ಪಾರ್ಟಿ ಅಥವಾ ಸಮುದಾಯವನ್ನಲ್ಲ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಸ್ಲಿಂ ಸೆಂಟ್ರಲ್ ಕಮೀಟಿ ಉಪಾಧ್ಯಕ್ಷ ಮಮ್ತಾಝ್ ಅಲಿ ಸೇರಿ ಹಲವರಿದ್ದರು.

LEAVE A REPLY

Please enter your comment!
Please enter your name here

Hot Topics

ಉಡುಪಿ: ರಸ್ತೆ ಅವ್ಯವಸ್ಥೆ-ಕೋಣಗಳ ಜೊತೆ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ

ಉಡುಪಿ: ಮಲ್ಪೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ಪ್ರವಾಸಿಗರ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಸದ್ಯ ಪ್ರವಾಸಿಗರ ಸಂಖ್ಯೆ ಹೆಚ್ಚಳದಿಂದ ದಿನನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದೆ. ಪ್ರವಾಸಿಗರು ಹಾಗೂ ಸ್ಥಳೀಯರು ಅನುಭವಿಸುತ್ತಿರುವ ಕಷ್ಟವನ್ನು...

ಉಡುಪಿ: ಗಿರಿಜಾ ಹೆಲ್ತ್‌ಕೇರ್ & ಸರ್ಜಿಕಲ್ಸ್‌ನಲ್ಲಿ ‘ಫಾರ್ಮಾಸಿಸ್ಟ್‌ ಡೇ’ ಆಚರಣೆ

ಉಡುಪಿ: ಗಿರಿಜಾ ಹೆಲ್ತ್‌ಕೇರ್ ಆ್ಯಂಡ್ ಸರ್ಜಿಕಲ್ಸ್‌ನಲ್ಲಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್‌ ವತಿಯಿಂದ ಫಾರ್ಮಾಸಿಸ್ಟ್‌ ದಿನವನ್ನು ಉಡುಪಿಯಲ್ಲಿ ಆಚರಿಸಲಾಯಿತು.ಉಡುಪಿಯ ಸೀನಿಯರ್ ಸಿಟಿ ಲೀಗನ್ ಸಹಕಾರದೊಂದಿಗೆ ಉಡುಪಿ ಭಾಗದ ಕೆಲ ಹಿರಿಯ ಫಾರ್ಮಸಿಸ್ಟ್ ಗಳನ್ನು...

ಅಪರಿಚಿತರಿಂದ ಕಾಲಿವುಡ್‌ ‘ಆ್ಯಕ್ಷನ್‌ ಸ್ಟಾರ್’ ವಿಶಾಲ್ ಮನೆಗೆ ಕಲ್ಲು ತೂರಾಟ

ಚೆನ್ನೈ: ಕಾಲಿವುಡ್‌ನ 'ಆ್ಯಕ್ಷನ್‌ ಸ್ಟಾರ್' ನಟ ವಿಶಾಲ್ ಅವರ ಮನೆಗೆ ಯಾರೋ ಅಪರಿಚಿತ ಗನ್‌ಮ್ಯಾನ್‌ಗಳು ನುಗ್ಗಿ ಆಕ್ರಮಣ ಮಾಡಿ ಕಲ್ಲುತೂರಾಟ ಮಾಡಿದ್ದಾರೆ. ಅದರ ಪರಿಣಾಮವಾಗಿ ಮನೆಯ ಕಿಟಕಿ ಗಾಜುಗಳು ಒಡೆದಿರುವ ಘಟನೆ ಚೆನ್ನೈಯಲ್ಲಿ...