Wednesday, July 28, 2021

ಬಾಲಿವುಡ್‌ ನಟ ದಿಲೀಪ್‌ ಕುಮಾರ್‌ ನಿಧನ

ಮುಂಬೈ: ಹಿಂದಿ ಚಿತ್ರರಂಗದ ಲೆಜೆಂಡರಿ ನಟ ದಿಲೀಪ್​ ಕುಮಾರ್​ ಅವರು ಇಂದು ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ಕೆಲವೇ ದಿನಗಳ ಹಿಂದೆ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಿಲೀಪ್​ ಕುಮಾರ್​ ಹಲವು ವರ್ಷಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.

ಜೂ.30ರಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಜೊತೆಯಲ್ಲಿ ಪತ್ನಿ ಸೈರಾ ಬಾನು ಇದ್ದರು. ದಿಲೀಪ್ ಕುಮಾರ್​ ಆರೋಗ್ಯ ಸ್ಥಿರವಾಗಿದೆ ಎಂದು ಸೈರಾ ಬಾನು ಹೇಳಿದ್ದರು ಕೂಡ ಬುಧವಾರ ಕಹಿ ಸುದ್ದಿ ಕೇಳಿಬಂದಿದೆ. ದಿಲೀಪ್​ ಕುಮಾರ್​ ನಿಧನಕ್ಕೆ ಚಿತ್ರರಂಗದ ಸೆಲೆಬ್ರಿಟಿಗಳು, ಅಪಾರ ಸಂಖ್ಯೆಯ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

1944ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ದಿಲೀಪ್​ ಕುಮಾರ್​ ಅವರು 5 ದಶಕಗಳ ಕಾಲ ಸಕ್ರಿಯರಾಗಿದ್ದರು. ಕೊಹಿನೂರ್​, ಮುಘಲ್-ಏ-ಆಜಮ್​, ಶಕ್ತಿ, ನಯಾ ದೌರ್​, ರಾಮ್​ ಔರ್​ ಶ್ಯಾಮ್​ ಮುಂತಾದ ಕ್ಲಾಸಿಕ್​ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ದಿಲೀಪ್​ ಕುಮಾರ್​ ನಟಿಸಿದ ಕೊನೇ ಸಿನಿಮಾ ‘ಖಿಲಾ’ 1998ರಲ್ಲಿ ತೆರೆಕಂಡಿತು. ಆ ನಂತರ ಅವರು ಯಾವುದೇ ಚಿತ್ರದಲ್ಲೂ ಬಣ್ಣ ಹಚ್ಚಲಿಲ್ಲ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...