Wednesday, July 28, 2021

ನಟ ದುನಿಯಾ ವಿಜಯ್‌ಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ನಿಧನರಾಗಿದ್ದಾರೆ. ‘ಅಮ್ಮ ಮತ್ತೆ ಹುಟ್ಟಿ ಬಾ’ ಎಂದು ಸೋಷಿಯಲ್ ಮೀಡಿಯಾದಲ್ಲಿ ವಿಜಯ್ ಬರೆದುಕೊಂಡಿದ್ದಾರೆ.

ನಾರಾಯಣಮ್ಮ ಅವರಿಗೆ ಕೆಲವು ತಿಂಗಳ ಹಿಂದೆ ಕೊರೋನಾ ಪಾಸಿಟಿವ್ ಆಗಿತ್ತು. ಕೋರೋನದಿಂದ ಚೇತರಿಕೆ ವೇಳೆ ಬ್ರೈನ್ ಸ್ಟ್ರೋಕ್ ಆಗಿತ್ತು. ಕಳೆದ 23 ದಿನಗಳಿಂದ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು.
ಅಮ್ಮಂದಿರ ದಿನ ತನ್ನ ತಾಯಿಯ ಪಾದಗಳ ಪೋಟೋ ಹಂಚಿಕೊಂಡು ‘ಈ ಎರಡು ಪಾದಗಳ ಮತ್ತು ನಿಮ್ಮೆಲ್ಲರ ಹಾರೈಕೆ ಆಶೀರ್ವಾದವೇ ನನಗೆ ಶ್ರೀರಕ್ಷೆ,’ ನಾವು ಎಷ್ಟೇ ದೊಡ್ಡ ವ್ಯಕ್ತಿಗಳಾದರೂ ಅಮ್ಮನಿಗೆ ನಾವಿನ್ನೂ ಚಿಕ್ಕ ಮಕ್ಕಳೇ. ನಾನು ಇಂದು ಜೀವನದಲ್ಲಿ ಏನಾದರೂ ಗಳಿಸಿದ್ದೇನೆ, ಹೆಸರು ಮಾಡಿದ್ದೇನೆ ಅಂದರೆ ಅದರ‌ ಮೂಲ‌ ಕಾರಣಕರ್ತೆ ನನ್ನಮ್ಮ. ಅವಳ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ. ಹಾಗೆ ಮಕ್ಕಳ ಸಾಧನೆಯಲ್ಲಿ ತಾಯಂದಿರದ್ದು ಸಿಂಹ ಪಾಲು,’ ಎಂದು ಬರೆದು ಶುಭಾಶಯ ತಿಳಿಸಿದ್ದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...